ಜುಲೈ 31ರಂದು ದೇಶಾದ್ಯಂತ ವೈದ್ಯರ ಮುಷ್ಕರ
ಬೆಂಗಳೂರು, ಜುಲೈ 30 : ಬುಧವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6ರ ತನಕ ಪ್ರತಿಭಟನೆ ನಡೆಯಲಿದ್ದು, ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
ಕೇಂದ್ರ ಸರ್ಕಾರ ಮಂಡನೆ ಮಾಡಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಾಯ್ದೆಗೆ ಲೋಕಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಇದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ದೇಶಪ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಪ್ರತಿಭಟನೆ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ ಬಂದ್ ಆಗಲಿದೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ.

ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣವನ್ನು ದೇಶದಲ್ಲಿ ಕತ್ತಲೆಗೆ ನೂಕಲಾಗಿದೆ ಎಂದು ಐಎಂಎ ಆಕ್ರೋಶ ವ್ಯಕ್ತಪಡಿಸಿದೆ.
ಸರ್ಕಾರಿ ಆಸ್ಪತ್ರೆಗಳಿಗೆ ರಜೆ ಇಲ್ಲ : ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುವುದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ನೀಡಲಾಗಿದ್ದ ರಜೆಯನ್ನು ರದ್ದು ಮಾಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಸರ್ಕಾರಿ ವೈದ್ಯರ ರಜೆ ಕಡಿತಗೊಳಿಸಿ ಸೇವೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.












Click it and Unblock the Notifications