ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 31ರಂದು ದೇಶಾದ್ಯಂತ ವೈದ್ಯರ ಮುಷ್ಕರ

|
Google Oneindia Kannada News

ಬೆಂಗಳೂರು, ಜುಲೈ 30 : ಬುಧವಾರ ದೇಶಾದ್ಯಂತ ವೈದ್ಯರ ಪ್ರತಿಭಟನೆಗೆ ಕರೆ ನೀಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6ರ ತನಕ ಪ್ರತಿಭಟನೆ ನಡೆಯಲಿದ್ದು, ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

ಕೇಂದ್ರ ಸರ್ಕಾರ ಮಂಡನೆ ಮಾಡಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಾಯ್ದೆಗೆ ಲೋಕಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಇದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ದೇಶಪ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ವೈದ್ಯೆ ಪಾಯಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವುವೈದ್ಯೆ ಪಾಯಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಪ್ರತಿಭಟನೆ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ ಬಂದ್ ಆಗಲಿದೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ.

ಭರಚುಕ್ಕಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ವೈದ್ಯೆಭರಚುಕ್ಕಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ವೈದ್ಯೆ

Doctors Called For Nationwide Protest On July 31

ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣವನ್ನು ದೇಶದಲ್ಲಿ ಕತ್ತಲೆಗೆ ನೂಕಲಾಗಿದೆ ಎಂದು ಐಎಂಎ ಆಕ್ರೋಶ ವ್ಯಕ್ತಪಡಿಸಿದೆ.

ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವೈದ್ಯ ಸಾವುಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವೈದ್ಯ ಸಾವು

ಸರ್ಕಾರಿ ಆಸ್ಪತ್ರೆಗಳಿಗೆ ರಜೆ ಇಲ್ಲ : ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುವುದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ನೀಡಲಾಗಿದ್ದ ರಜೆಯನ್ನು ರದ್ದು ಮಾಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಸರ್ಕಾರಿ ವೈದ್ಯರ ರಜೆ ಕಡಿತಗೊಳಿಸಿ ಸೇವೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

English summary
Indian Medical Association (IMA) has called for a nationwide 24 hour strike on July 31, 2019 to protest against bill which passed in Lok sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X