ದೇಶೀಯ ವಿಮಾನಗಳ ಹಾರಾಟ ಮೇ 25ರಿಂದ ಆರಂಭ: ಮಾರ್ಗಸೂಚಿ ಶೀಘ್ರ ಪ್ರಕಟ

ನವದೆಹಲಿ, ಮೇ 20: ಸತತ ಎರಡು ತಿಂಗಳ ಲಾಕ್‌ಡೌನ್ ಬಳಿಕ ದೇಸೀಯ ವಿಮಾನಗಳ ಸೇವೆಯನ್ನು ಮೇ 25ರಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ರವಾನಿಸಲಾಗಿದೆ. ಮೇ.25ರಿಂದ ವಿಮಾನ ಹಾರಾಟ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಿ ದೇಶೀಯ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ಹೇಳಿರುವ ಕೇಂದ್ರ ವಿಮಾನಯಾನ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ, ಈ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.

Domestic Flights To Resume From May 25 In India

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿದ್ದ ಲಾಕ್‌ಡೌನ್ ಪರಿಣಾಮವಾಗಿ ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟಕ್ಕೂ ಬ್ರೇಕ್ ಬಿದ್ದಿತ್ತು.

ಕೇವಲ ವಿದೇಶದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆ ತರಲು ಮಾತ್ರ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದೀಗ ದೇಶೀಯ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದ್ದು, ಇದೇ ಮೇ 25ರಿಂದ ವಿಮಾನ ಸಂಚಾರ ಪುನರಾರಂಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+