Get Updates
Get notified of breaking news, exclusive insights, and must-see stories!

ಓಮಿಕ್ರಾನ್‌: ಲಾಕ್‌ಡೌನ್‌ ಜಾರಿ, ಯುಪಿ ಚುನಾವಣೆ ಮುಂದೂಡಿಕೆಯಾದಾಗ ಆಶ್ಚರ್ಯಬೇಡ: ಸುಬ್ರಮಣಿಯನ್

ನವದೆಹಲಿ, ಡಿಸೆಂಬರ್‌ 24: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆಯು ದೇಶದಲ್ಲಿ ಏರಿಕೆ ಆಗುತ್ತಿದೆ. ಕಳೆದ ಒಂದು ದಿನದಲ್ಲಿ ದೇಶದಲ್ಲಿ ಓಮಿಕ್ರಾನ್‌ ದ್ವಿಗುಣ ವರದಿ ಆಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಓಮಿಕ್ರಾನ್‌ ಹಿನ್ನೆಲೆಯಿಂದಾಗಿ ಲಾಕ್‌ಡೌನ್‌ ಆಗುವ ಹಾಗೂ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯು ಮುಂದೂಡಿಕೆ ಆಗುವ ಸುಳಿವನ್ನು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ, ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಎಂಬುವುದನ್ನು ಕೂಡಾ ಉಲ್ಲೇಖ ಮಾಡಿದ್ದಾರೆ. "ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಓಮಿಕ್ರಾನ್‌ ಹಿನ್ನೆಲೆಯಿಂದಾಗಿ ಲಾಕ್‌ಡೌನ್‌ ಆದಾಗ ಹಾಗೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ಸೆಪ್ಟೆಂಬರ್‌ಗೆ ಮುಂದೂಡಿಕೆ ಆದಾಗ ಯಾವುದೇ ಆಶ್ವರ್ಯಕ್ಕೆ ಒಳಗಾಗಬೇಡಿ," ಎಂದು ಸುಬ್ರಮಣಿಯನ್‌ ಸ್ವಾಮಿ ಮಾರ್ಮಿಕವಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

"ಈ ವರ್ಷದ ಆರಂಭದಲ್ಲಿ ನೇರವಾಗಿ ಯಾವುದನ್ನು ಮಾಡಲು ಸಾಧ್ಯವಾಗಲಿಲ್ಲವೋ, ಅದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡುವ ಸಾಧ್ಯತೆ ಇದೆ," ಎಂದು ಕೂಡಾ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

 Dont be surprised by a Lockdown for Omicron, postponement of UP elections: Subramanian Swamy

ಮೋದಿಗೆ 2024 ರ ಚುನಾವಣೆ ವೇಳೆ ಈಗಿನ ಓಮಿಕ್ರಾನ್‌ ಪ್ರಭಾವ ಬೀರುತ್ತಾ?

ಇನ್ನು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ಗೆ ಹಲವಾರು ಮಂದಿ ರಿಪ್ಲೈ ಮಾಡಿದ್ದಾರೆ. ಈ ಪೈಕಿ ಓರ್ವ ಟ್ವಿಟ್ಟಿಗರು, "ಸ್ವಾಮಿ ಸರ್‌, ಒಂದು ವೇಳೆ ಉತ್ತರ ಪ್ರದೇಶ ಚುನಾವಣೆ ಮುಂದೂಡಿಕೆಯಾದರೆ, ಓಮಿಕ್ರಾನ್‌ನಿಂದಾಗಿ ಲಾಕ್‌ಡೌನ್‌ ಮಾಡಿದರೆ, 2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮೇಲೆ ಯಾವ ಪ್ರಭಾವ ಬೀರಬಹುದು," ಎಂದು ಪ್ರಶ್ನೆ ಮಾಡಿದ್ದಾರೆ. ಆ ಪ್ರಶ್ನೆಗೂ ಮಾರ್ಮಿಕವಾಗಿ ಉತ್ತರ ನೀಡಿರುವ ಸುಬ್ರಮಣಿಯನ್‌ ಸ್ವಾಮಿ, "ಆಗ 75 ನೇ ವರ್ಷದ ಡೆಡ್‌ಲೈನ್‌ ಅನ್ನು ತಲುಪಿರುತ್ತಾರೆ," ಎಂದು ಪ್ರಧಾನಿ ಮೋದಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಯುಪಿ ಚುನಾವಣೆ ಮುಂದೂಡಲು ಅಲಹಾಬಾದ್ ಹೈಕೋರ್ಟ್ ಒತ್ತಾಯ

ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್‌, ಗೋವಾ, ಮಣಿಪುರ, ಉತ್ತರಾಖಂಡದಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಈ ಹಿನ್ನೆಲೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿಯನ್ನು ನಡೆಸುತ್ತಿದೆ. ಈ ನಡುವೆ ದೇಶದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮಿಕ್ರಾನ್‌ ಭೀತಿಯನ್ನು ಸೃಷ್ಟಿ ಮಾಡಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ಮುಂದೂಡಿಕೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಒತ್ತಾಯ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರದ ಮೆರವಣಿಗೆಗಳನ್ನು ನಿಷೇಧಿಸುವಂತೆ ಕೋರ್ಟ್ ಸಲಹೆ ನೀಡಿದೆ.

ದೇಶದಲ್ಲಿ ಭಯ ಹುಟ್ಟಿಸುತ್ತಿರುವ ಕೊವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ನಡುವೆ ಚುನಾವಣಾ ಪ್ರಚಾರದ ಮೆರವಣಿಗೆಗಳನ್ನು ನಡೆಸದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಕೋರ್ಟ್ ಒತ್ತಾಯಿಸಿದೆ. ಈ ಬಗ್ಗೆ ಯಾವುದೇ ಪ್ರಕರಣದ ನಂಟು ಹೊಂದಿಲ್ಲದ ಜಾಮೀನು ಅರ್ಜಿಯ ವಿಚಾರಣೆ ವೇಳೆ ಅಲಹಾಬಾದ್ ಉಚ್ಚ ನ್ಯಾಯಾಲಯವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರವನ್ನು ನಿಲ್ಲಿಸದಿದ್ದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಎದುರಿಸಿದ ಪರಿಸ್ಥಿತಿಗಿಂತ ಇನ್ನೂ ಅಧಿಕ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಹೊಸ ರೂಪಾಂತರದ ಓಮಿಕ್ರಾನ್‌ನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೋವಿಡ್‌ನ ಮೂರನೇ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನ್ಯಾಯಮೂರ್ತಿ ಶೇಖರ್ ಯಾದವ್ ಎಚ್ಚರಿಸಿದ್ದಾರೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+