ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 3ನೇ ಅಲೆ ಇನ್ನೂ ಬಂದಿಲ್ಲ, ಭಯ ಬೇಡ ಎಂದ ತಜ್ಞರು

|
Google Oneindia Kannada News

ನವದೆಹಲಿ, ಡಿಸೆಂಬರ್ 07: ಕೋವಿಡ್ ಮೂರನೇ ಅಲೆ ಇನ್ನೂ ಬಂದಿಲ್ಲ ಭಯ ಬೇಡ ಎಂದು ತಜ್ಞರು ಹೇಳಿದ್ದಾರೆ.

ಕೊರೊನಾ ಸೋಂಕು ಸಂಖ್ಯೆ 9 ರಾಜ್ಯಗಳ 50 ಜಿಲ್ಲೆಗಳಲ್ಲಿ ಏರುಗತಿಯಲ್ಲಿದ್ದು ಓಮಿಕ್ರಾನ್ ರೂಪಾಂತರಿಯೂ ಪತ್ತೆಯಾಗುತ್ತಿರುವುದರಿಂದ 3 ನೇ ಅಲೆಯ ಆತಂಕ ಮೂಡಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ.

10 ದಿನಗಳಲ್ಲಿ ರಾಜಸ್ಥಾನ, ತಮಿಳುನಾಡು, ಕೇರಳ, ದೆಹಲಿ, ಕರ್ನಾಟಕ, ಜಮ್ಮು-ಕಾಶ್ಮೀರ, ಒಡಿಶಾ, ಮಿಜೊರಾಮ್ ಗಳಲ್ಲಿ ಕೋವಿಡ್-19 ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಪತ್ರ ಬರೆದಿದ್ದು, ಸೋಂಕು ಪ್ರಸರಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.

Don’t Panic, No Third Wave Yet, Say Experts On Upstick of COVID Cases

ಸಾರ್ವಜನಿಕ ಆರೋಗ್ಯ ತಜ್ಞರ ಪ್ರಕಾರ ಸಣ್ಣ ಪ್ರಮಾಣದ ರೋಗಲಕ್ಷಣಗಳು ಹಾಗೂ ರೋಗಲಕ್ಷಣ ರಹಿತರನ್ನು ಹೆಚ್ಚು ಪರೀಕ್ಷೆಗೊಳಪಡಿಸುತ್ತಿರುವುದರಿಂದ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಓಮಿಕ್ರಾನ್‌ನ ಎರಡು ಹೊಸ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ದೇಶಾದ್ಯಂತ 23 ಕ್ಕೆ ಹೊಸ ರೂಪಾಂತರಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಮುಂಬೈನಲ್ಲಿ ಮತ್ತೆರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳು 23ಕ್ಕೇರಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಓಮಿಕ್ರಾನ್ ಇದು ಮರುಸೋಂಕು, ಅಂದರೆ ಕೋವಿಡ್​ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತದೆ. ಬಹಳ ವೇಗವಾಗಿ ಹರಡಬಹುದು ಹಾಗೂ ಎರಡು ಬಾರಿ ಲಸಿಕೆ ಹಾಕಿಸಿಕೊಂಡವರಿಗೂ ಅಂಟಬಹುದು ಎಂದು ಹೇಳಲಾಗುತ್ತಿದೆ.

ಮುಂಬೈನಲ್ಲಿ ಮತ್ತೆರಡು ಓಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು 23 ಮಂದಿಗೆ ಸೋಂಕು ಮುಂಬೈನಲ್ಲಿ ಮತ್ತೆರಡು ಓಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು 23 ಮಂದಿಗೆ ಸೋಂಕು

ಇದರ ವಿರುದ್ಧ ಪ್ರಸ್ತುತ ಲಭ್ಯವಿರುವ ಲಸಿಕೆಗಳು ಪರಿಣಾಮಕಾರಿಯೇ ಎಂದು ಸಂಶೋಧನೆ ನಡೆಸಲಾಗುತ್ತಿದೆ. ಇದುವರೆಗೆ ಓಮಿಕ್ರಾನ್‌ನಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಇವರಿಬ್ಬರಲ್ಲಿ ಒಬ್ಬರು ಅಮೆರಿಕದಿಂದ ಹಾಗೂ ಮತ್ತೊಬ್ಬರು ದಕ್ಷಿಣ ಆಫ್ರಿಕಾದಿಂದ ಬಂದಿದ್ದಾರೆ. ಇಬ್ಬರೂ ಫೈಜರ್ ಕೋವಿಡ್​​ ಲಸಿಕೆ ಪಡೆದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದ್ದ ಓಮಿಕ್ರಾನ್ ಬಳಿಕ 38 ರಾಷ್ಟ್ರಗಳಿಗೆ ಹರಡಿದೆ. ಡಿಸೆಂಬರ್​ 2 ರಂದು ಭಾರತದ ಮೊದಲೆರಡು ಕೇಸ್​ಗಳು ಕರ್ನಾಟಕದಲ್ಲಿ ವರದಿಯಾಗಿದ್ದವು. ಇದೀಗ ಮಹಾರಾಷ್ಟ್ರದಲ್ಲಿ 10, ರಾಜಸ್ಥಾನದಲ್ಲಿ 9, ಗುಜರಾತ್​ನಲ್ಲಿ 1 ಹಾಗೂ ದೆಹಲಿಯಲ್ಲಿ 1 ಕೇಸ್​ ಪತ್ತೆಯಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 23 ಮಂದಿಗೆ ಅಂಟಿದಂತಾಗಿದೆ.

ಕೊರೊನಾ ವೈರಸ್​ನ ಎರಡನೇ ಅಲೆಯಿಂದ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದ ಭಾರತ ಇದೀಗ ಚೇತರಿಸಿಕೊಂಡಿದೆ. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ಸೋಂಕು ಒಮಿಕ್ರಾನ್​​ ಭಯ ಶುರುವಾಗಿದ್ದು, ದೇಶದಲ್ಲಿ ಈಗಾಗಲೇ 23 ಪ್ರಕರಣ ದಾಖಲಾಗಿವೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​ ಮುಖ್ಯಸ್ಥ ಡಾ. ಜೆಎ ಜಯಲಾಲ್​ ಮಾತನಾಡಿದ್ದು, ಹೊಸ ರೂಪಾಂತರಿಯಿಂದಲೇ ಭಾರತದಲ್ಲಿ ಕೋವಿಡ್​​​ 3ನೇ ಅಲೆ ಲಗ್ಗೆ ಹಾಕಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಓಮಿಕ್ರಾನ್​​ನಿಂದ ಪಾಶ್ಚಿಮಾತ್ಯ ದೇಶಗಳು ಈಗಾಗಲೇ ತೊಂದರೆ ಅನುಭವಿಸುತ್ತಿದ್ದು, ನಮ್ಮ ದೇಶದಲ್ಲೂ ದಿನದಿಂದ ದಿನಕ್ಕೆ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ, ಅದರ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿವೆ. ಇದೀಗ ಜನರು ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತದಲ್ಲಿ ಈಗಾಗಲೇ 23 ಓಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ. ಕೋವಿಡ್​​-19ರ ಡೆಲ್ಟಾ ರೂಪಾಂತರಕ್ಕಿಂತಲೂ ಓಮಿಕ್ರಾನ್​ ವೇಗವಾಗಿ ಹರಡಲಿದೆ ಎಂಬ ಎಚ್ಚರಿಕೆ ನೀಡಿದರು. ಹೊಸ ರೂಪಾಂತರ ಮಕ್ಕಳಲ್ಲಿ ಹೆಚ್ಚಿನ ಅಪಾಯವನ್ನುಂಟು ಮಾಡುವ ಕಾರಣ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅದಷ್ಟು ಬೇಗ ಕೋವಿಡ್​-19 ಲಸಿಕೆ ನೀಡುವ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕು ಎಂದರು.

Recommended Video

ಐ ಪಿ ಎಲ್ ಪಂದ್ಯದಲ್ಲಿ ಬದಲಾವಣೆ ತಂದ ಬಿಸಿಸಿಐ !! | Oneindia Kannada

English summary
While rising Covid cases in 50 districts of nine states have set alarm bells ringing in the backdrop of Omicron scare, experts say fears of a third wave of the pandemic may be unfounded at this stage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X