'ಕಂದು ಕತ್ತೆ'ಗೆ ಸಿಕ್ಕಿತು ಪರೀಕ್ಷಾ ಪ್ರವೇಶ ಪತ್ರ!
ಶ್ರೀನಗರ, ಏಪ್ರಿಲ್ 28: ಸೆಮೆಸ್ಟರ್ ಪೂರ್ತಿ ತರಗತಿಗೆ ಚಕ್ಕರ್ ಹೊಡೆದು ಕೊನೆಗೆ ಹಾಜರಾಗಿ ಕಡಿಮೆಯಾಗಿ ಹಾಲ್ ಟಿಕೆಟ್‌ಗಾಗಿ ಪ್ರಿನ್ಸಿಪಾಲರನ್ನು ಅಂಗಲಾಚುವ ವಿದ್ಯಾರ್ಥಿಗಳು ಈ ಸುದ್ದಿ ಕೇಳಿದರೆ ದಂಗಾಗುತ್ತಾರೆ. ಕೆಲಸಕ್ಕಾಗಿ ಪ್ರವೇಶ ಪರೀಕ್ಷೆಗಳನ್ನು ಬರೆಯಲು ಅವಕಾಶ ಸಿಗದೆ ಒದ್ದಾಡುವ ಉದ್ಯೋಗಾಕಾಂಕ್ಷಿಗಳು ಬೇಸರಪಟ್ಟುಕೊಳ್ಳಲೂಬಹುದು.
ಜಮ್ಮು ಮತ್ತು ಕಾಶ್ಮೀರದ ಸೇವಾ ಆಯ್ಕೆ ಮಂಡಳಿಯು ತಹಶೀಲ್ದಾರ್ ಹುದ್ದೆಯ ನೇಮಕಾತಿ ಪರೀಕ್ಷೆಗೆ ಕತ್ತೆಯೊಂದಕ್ಕೆ ಹಾಲ್‌ಟಿಕೆಟ್ ನೀಡಿದೆ.
ಅಂದಹಾಗೆ ಆ ಕತ್ತೆಯ ಹೆಸರು "ಕಚೂರ್ ಖಾರ್" (ಕಂದು ಕತ್ತೆ) ಎಂದು. ಈ ಕತ್ತೆ ಶ್ರೀನಗರದ ಖನ್ಯಾರ್ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಭಾನುವಾರ ಮಧ್ಯಾಹ್ನ ಒಂದು ಗಂಟೆಯಿಂದ ಪರೀಕ್ಷೆ ಬರೆಯಬೇಕಿದೆ!

ಕತ್ತೆಗೆ ನೀರುವ ಪ್ರವೇಶಪತ್ರದ ಚಿತ್ರ ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಕತ್ತೆಯ ಹೆಸರಿನ ಜತೆ ಅದರ ಫೋಟೊಗ್ರಾಫ್ ಕೂಡ ಬಳಸಲಾಗಿದೆ.
ಈ ಸಂಬಂಧ ಕೆಲವರು ಮಂಡಳಿಗೆ ಕರೆ ಮಾಡಿದರೂ ಅವರಿಂದ ಸೂಕ್ತ ಪ್ರತಿಕ್ರಿಯೆ ಬರಲಿಲ್ಲ.
ಇದು ಕಿಡಿಗೇಡಿಗಳು ತೀಟೆಗಾಗಿ ಮಾಡಿರುವ ಕೃತ್ಯ ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಈ ರೀತಿ ಹಾಲ್ ಟಿಕೆಟ್ ಸೃಷ್ಟಿಸಿ ಬೇಕೆಂದೇ ಸುದ್ದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
2015ರಲ್ಲಿ ವೃತ್ತಿಪರ ಪ್ರವೇಶ ಪರೀಕ್ಷಾ ಮಂಡಳಿಯು ಹಸುವೊಂದಕ್ಕೆ ಪರೀಕ್ಷೆ ಬರೆಯಲು ಪ್ರವೇಶಪತ್ರ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆ ಕೂಡ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications