ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ನೀಡುವ ಲಸಿಕೆಗಳನ್ನು 45 ವರ್ಷದೊಳಗಿನವರಿಗೆ ಬಳಸುವಂತಿಲ್ಲ

|
Google Oneindia Kannada News

ನವದೆಹಲಿ, ಏಪ್ರಿಲ್ 28: ದೇಶಾದ್ಯಂತ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನ ಮೇ 1ರಿಂದ ಆರಂಭಗೊಳ್ಳುತ್ತಿದ್ದು, ಈ ಹಂತದಲ್ಲಿ ಕೇಂದ್ರ ಸರ್ಕಾರ ನೀಡಲಾಗಿರುವ ಕೊರೊನಾ ಲಸಿಕೆಗಳನ್ನು 45 ವರ್ಷದ ಒಳಗಿನವರಿಗೆ ಬಳಸದಂತೆ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.

ಆದ್ಯತಾ ಗುಂಪಿನ ವಯೋಮಾನದವರಿಗೆ ಮಾತ್ರ ಕೇಂದ್ರದಿಂದ ಸರಬರಾಜಾದ ಲಸಿಕೆ ನೀಡಬೇಕು. 45 ವರ್ಷ ಕೆಳಗಿನವರಿಗೆ ಲಸಿಕೆಗಳನ್ನು ಬಳಸುವಂತಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಭಾರತದಲ್ಲಿ 3,60,960 ಹೊಸ ಕೊರೊನಾ ಪ್ರಕರಣ; ಸಾವಿನ ಸಂಖ್ಯೆಯಲ್ಲಿ ಏರಿಕೆಭಾರತದಲ್ಲಿ 3,60,960 ಹೊಸ ಕೊರೊನಾ ಪ್ರಕರಣ; ಸಾವಿನ ಸಂಖ್ಯೆಯಲ್ಲಿ ಏರಿಕೆ

ಲಸಿಕಾ ಉತ್ಪಾದಕರಿಂದ ಕೇಂದ್ರ ಸರ್ಕಾರಕ್ಕೆ ಶೇ 50ರಷ್ಟು ಲಸಿಕೆಗಳನ್ನು ಪೂರೈಸಲಾಗುತ್ತದೆ. ಈ ಲಸಿಕೆಗಳನ್ನು ಆದ್ಯತಾ ಗುಂಪಿನವರಿಗೆ ನೀಡಲು ಮಾತ್ರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, ಸೋಂಕಿನ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆಗಳನ್ನು ನೀಡಬೇಕು ಎಂದು ಸಚಿವಾಲಯದ ಜಂಟಿ ಕಾರ್ಯದರ್ಧಿ ಮನೋಹರ್ ಅಘನಿ ತಿಳಿಸಿದ್ದಾರೆ.

Dont Vaccinate Below 45 Years With Centres Supply Orders Health Ministry

ಇನ್ನುಳಿದ 50% ಕೊರೊನಾ ಲಸಿಕೆಗಳನ್ನು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶ ಹಾಗೂ ಖಾಸಗಿ ಆಸ್ಪತ್ರೆಗಳು ಖರೀದಿಸಬಹುದು ಹಾಗೂ ಮೇ 1ರಿಂದ 18-44 ವಯಸ್ಸಿನವರಿಗೆ ನೀಡಬಹುದು ಎಂದು ತಿಳಿಸಿದೆ. ಇದುವರೆಗೂ 15 ಕೋಟಿಗೂ ಹೆಚ್ಚು ಲಸಿಕೆಗಳನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಉಚಿತವಾಗಿ ನೀಡಿದೆ ಎಂದು ಸಚಿವಾಲಯ ತಿಳಿಸಿದೆ.

ಜನವರಿ 16ರಿಂದ ದೇಶಾದ್ಯಂತ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಅಭಿಯಾನದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಅಭಿಯಾನದ ಎರಡನೇ ಹಂತದ ಮೊದಲ ಭಾಗದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಎರಡನೇ ಭಾಗದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಮೂರನೇ ಹಂತದ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು ಎಂದು ಪ್ರಧಾನಿ ಘೋಷಿಸಿದ್ದರು. ಈ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಘೋಷಣೆ ಮಾಡಿದ್ದವು.

ಭಾರತದಲ್ಲಿ ಸದ್ಯಕ್ಕೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಲಸಿಕೆ ನೀಡಲಾಗುತ್ತಿದ್ದು, ರಷ್ಯಾದ ಸ್ಫುಟ್ನಿಕ್ ವಿ ಲಸಿಕೆಗೂ ಅನುಮೋದನೆ ದೊರೆತಿದೆ. ಶೀಘ್ರವೇ ಸ್ಫುಟ್ನಿಕ್ ವಿ ಲಸಿಕೆ ಭಾರತದಲ್ಲಿ ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ.

Recommended Video

ಬೆಂಗಳೂರಿನ 3 ಸಾವಿರ ಸೋಂಕಿತರು ನಾಪತ್ತೆ! ಹಳ್ಳಿಗಳಿಗೆ ತೆರಳಿದ್ದರೆ ಅಪಾಯ ಕಟ್ಟಿಟ್ಟಬುತ್ತಿ.. | Oneindia Kannada

English summary
Dont vaccinate 18 44 age group with centre's supply orders health ministry to all states,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X