ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಹಗರಣ: ಅಫಿಡವಿಟ್ ಸಲ್ಲಿಸುವುದಿಲ್ಲ ಎಂದ ಕೇಂದ್ರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 13: ಪೆಗಾಸಸ್ ಬೇಹುಗಾರಿಕೆ ಹಗರಣದಲ್ಲಿ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಸ್ತೃತ ಅಫಿಡವಿಟ್ ಸಲ್ಲಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಹೀಗೆ ಉತ್ತರಿಸಿದ್ದು, ''ಪೆಗಾಸಸ್ ಸಂಬಂಧ ಮುಚ್ಚಿಡಲು ಏನೂ ಇಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗುವುದು' ಎಂದು ತಿಳಿಸಿದೆ.

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಮುಂದಿನ ವಾರ ಸುಪ್ರೀಂಕೋರ್ಟ್ ಸಮಗ್ರ ಆದೇಶ!?ಪೆಗಾಸಸ್ ಬೇಹುಗಾರಿಕೆ ಬಗ್ಗೆ ಮುಂದಿನ ವಾರ ಸುಪ್ರೀಂಕೋರ್ಟ್ ಸಮಗ್ರ ಆದೇಶ!?

ಕೇಂದ್ರದ ಪರ ಮಾತನಾಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 'ಸರ್ಕಾರ ನಿರ್ದಿಷ್ಟ ತಂತ್ರಜ್ಞಾನ ಇಲ್ಲವೇ ಸಾಫ್ಟ್‌ವೇರ್ ಬಳಸುತ್ತದೆಯೋ ಇಲ್ಲವೋ ಎಂಬುದು ಸಾರ್ವಜನಿಕವಾಗಿ ಚರ್ಚಿಸುವ ವಿಷಯವಲ್ಲ ಹಾಗೂ ಈ ವಿವರವನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಿವುದು ರಾಷ್ಟ್ರೀಯ ಹಿತಾಸಕ್ತಿಗೆ ಸೂಕ್ತವಲ್ಲ' ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

Dont Want To File Detailed Affidavit Says Centre To SC Over Pegasus Issue

ಈ ಸಂಬಂಧ ತಜ್ಞರ ಸಮಿತಿ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ದೇಶದ ಭದ್ರತೆಯೊಂದಿಗೆ ರಾಜಿಯಾಗುವ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದೆ ಎಂದು ಹೇಳಿದ್ದಾರೆ.

'ಪೆಗಾಸಸ್ ಬೇಹುಗಾರಿಕೆ ವರದಿಗಳ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಲು ಸರ್ಕಾರಕ್ಕೆ ನ್ಯಾಯಾಲಯ ಸಮ್ಮತಿಸಿದೆ. ಒಂದು ಜವಾಬ್ದಾರಿಯುತ ಸರ್ಕಾರವಾಗಿ, ನಾವು ತಜ್ಞರ ಸಮಿತಿ ರಚಿಸುವುದಾಗಿ ಅರ್ಜಿ ಸಲ್ಲಿಸಿದ್ದೇವೆ. ಆ ವರದಿಯನ್ನು ಸುಪ್ರೀಂ ಕೋರ್ಟ್ ಮುಂದೆ ಇಡಲಾಗುವುದು. ನಾವು ಏನನ್ನೂ ಬಹಿರಂಗಪಡಿಸುವುದಿಲ್ಲ ಎನ್ನುತ್ತಿಲ್ಲ. ಸಮಿತಿಯ ಮುಂದೆ ಎಲ್ಲವನ್ನೂ ಬಹಿರಂಗಪಡಿಸಲಾಗುವುದು" ಎಂದು ಮೆಹ್ತಾ ಪುನರುಚ್ಚರಿಸಿದ್ದಾರೆ.

 ಪೆಗಾಸಸ್‌ ಹಗರಣ: ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌ ಪೆಗಾಸಸ್‌ ಹಗರಣ: ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ಇದೇ ಸೆಪ್ಟೆಂಬರ್ 7ರಂದು ಮೂರು ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠ ಅಫಿಡವಿಟ್ ಸಲ್ಲಿಸುವ ಸಂಬಂಧ ಕೇಂದ್ರ್ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ಒದಗಿಸಿತ್ತು. ಕೇಂದ್ರ ಸರ್ಕಾರ ವಿಸ್ತೃತವಲ್ಲದ ಅಫಿಡವಿಟ್ ಅನ್ನು ಈ ಮುನ್ನವೇ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ವಿಸ್ತೃತ ವರದಿಯನ್ನು ನಿರೀಕ್ಷಿಸಲಾಗಿತ್ತು.

ಸರ್ಕಾರ ಇಸ್ರೇಲಿ ಮೂಲದ ಪೆಗಾಸಸ್ ಸ್ಪೈವೇರ್ ಅನ್ನು ಬೇಹುಗಾರಿಕೆ ನಡೆಸಲು ಬಳಸಿದ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಆಧಾರದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್‌ 17ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿತ್ತು.

Dont Want To File Detailed Affidavit Says Centre To SC Over Pegasus Issue

ಏನಿದು ಪೆಗಾಸಸ್ ಹಗರಣ?
ಜಾಗತಿಕ ತನಿಖಾ ಸಂಸ್ಥೆಗಳ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ದೇಶದ ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹುಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ದೇಶದ 142ಕ್ಕೂ ಹೆಚ್ಚು ಪ್ರಮುಖ ರಾಜಕೀಯ ವ್ಯಕ್ತಿಗಳ ಹೆಸರುಗಳಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ ನಲವತ್ತು ಮಂದಿ ಪತ್ರಕರ್ತರ ಹೆಸರು ಕೂಡ ಸೇರಿತ್ತು ಎನ್ನಲಾಗಿದೆ.

ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ದಿ ವೈರ್ ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿ ಪ್ರಕಟಿಸಿದ್ದವು. ಕೇಂದ್ರ ಸರ್ಕಾರ, ಇಸ್ರೇಲಿ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಬೇಹುಗಾರಿಕೆ ನಡೆಸಿದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದಕ್ಕೆ ಕೇಂದ್ರ ತನ್ನ ನಿಲುವನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿದೆ.

English summary
Centre told Supreme Court on Monday that it does not want to file a detailed affidavit on a batch of petitions seeking independent probe into the alleged Pegasus snooping row,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X