ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಬಿಹಾರದಲ್ಲಿ ನಿತೀಶ್‌ಗೆ ಶಾಶ್ಚತವಾಗಿ ಮುಚ್ಚಿದ ಮೈತ್ರಿ ಬಾಗಿಲು'

|
Google Oneindia Kannada News

ಪಟ್ನಾ, ಜೂನ್ 26: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮತ್ತೆ ಮೈತ್ರಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖಂಡ ತೇಜಸ್ವಿ ಯಾದವ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ವಿಚಾರದಲ್ಲಿ ನಿತೀಶ್ ಕುಮಾರ್ ಅವರಿಗೆ ಬಾಗಿಲುಗಳು ಶಾಶ್ವತವಾಗಿ ಮುಚ್ಚಿಹೋಗಿವೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

'ನಿತೀಶ್ ಮಹಾಘಟಬಂಧನ್ ಸೇರಿದರೆ ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ''ನಿತೀಶ್ ಮಹಾಘಟಬಂಧನ್ ಸೇರಿದರೆ ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ'

ಒಂದು ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಧಿಕಾರದಿಂದ ಕೆಳಕ್ಕೆ ಇಳಿದರೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿ ಗಾದಿಗೆ ಸೂಕ್ತ ವ್ಯಕ್ತಿ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾದ ಮುಖ್ಯಸ್ಥ ಜೀತನ್ ರಾಮ್ ಮಾಂಝಿ ಹೇಳಿದ್ದರು.

doors are closed to nitish kumar permanently for alliance

ಮಾಂಝಿ ಅವರು ಕಳೆದ ಫೆಬ್ರುವರಿಯಲ್ಲಿ ಎನ್‌ಡಿಎ ಮೈತ್ರಿಯನ್ನು ತೊರೆದು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಒಕ್ಕೂಟದೊಂದಿಗೆ ಸೇರಿಕೊಂಡಿದ್ದರು.

ಬಿಹಾರದಲ್ಲಿ ಜೆಡಿಯು-ಬಿಜೆಪಿ ಬ್ರೇಕ್ ಅಪ್ ಸೂಚನೆ?!ಬಿಹಾರದಲ್ಲಿ ಜೆಡಿಯು-ಬಿಜೆಪಿ ಬ್ರೇಕ್ ಅಪ್ ಸೂಚನೆ?!

ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಜೆಡಿಯು ಮತ್ತು ಆರ್‌ಜೆಡಿ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆದಿತ್ತು. ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದರೆ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಬಳಿಕ ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬಂದು ಬಿಜೆಪಿ ಜತೆಗೂಡಿ ಮೈತ್ರಿ ಸರ್ಕಾರ ರಚಿಸಿದ್ದರು.

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಅವರೇ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆರ್‌ಜೆಡಿ ಈಗಾಗಲೇ ಘೋಷಿಸಿದೆ.

English summary
RJD leader Tejaswi Yadav said that the doors to Nitish Kumar are permanently closed for an alliance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X