ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ರಾಮನಗರ ಭೇಟಿಗೆ ಆಹ್ವಾನಿಸಿದ ಸಿ.ಎನ್. ಅಶ್ವಥ್ ನಾರಾಯಣ್
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಡಾ ಸಿಎನ್ ಅಶ್ವಥ್ ನಾರಾಯಣ್ ಅವರು ರಾಮನಗರಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದಾರೆ.
ಕರ್ನಾಟಕದ ರಾಮನಗರ ಜಿಲ್ಲೆಯಿಂದ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಭೇಟಿ ಮಾಡಿದರು.
ಕರ್ನಾಟಕದ-ಉತ್ತರ ಪ್ರದೇಶದ ನಡುವೆ ನಾಥ ಸಂಪ್ರದಾಯದ ಸಂಬಂಧವೂ ಇದ್ದು, ಎರಡೂ ರಾಜ್ಯಗಳ ಬಾಂಧವ್ಯ ವೃದ್ಧಿಗೊಳ್ಳುತ್ತಿದೆ.
— Dr. Ashwathnarayan C. N. (@drashwathcn) December 15, 2022
ರಾಮನಗರದ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕೆ ಚಾಲನೆ ನೀಡಲು ಆಗಮಿಸುವಂತೆ ಶ್ರೀ @myogiadityanath ಅವರನ್ನು ಪ್ರೀತಿಪೂರ್ವಕವಾಗಿ ಅಹ್ವಾನಿಸಲಾಯಿತು.
2/2 pic.twitter.com/foFeK5dr1Q
ಒಂದು ಗಂಟೆಗೂ ಹೆಚ್ಚು ಕಾಲ ನಿಯೋಗದ ಜತೆಗಿದ್ದ ಅವರು, ಪ್ರತಿಯೊಬ್ಬರನ್ನೂ ಪರಿಚಯ ಮಾಡಿಕೊಂಡು, ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಯೋಗಿ ಅವರಿಗೆ ರಾಮನಗರದಲ್ಲಿ ತಯಾರಿಸಿದ ರೇಷ್ಮೆ ಶಾಲು, ಹಾರ ಮತ್ತು ಪೇಟಾಗಳನ್ನು ಹಾಕಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರು ಮಾತನಾಡಿ, ಕರ್ನಾಟಕದ ಆದಿಚುಂಚನಗಿರಿ ಮಠ, ಕಾಲಬೈರವ ಮತ್ತು ಮಂಜುನಾಥ ಸ್ವಾಮಿ ಹಾಗೂ ಉತ್ತರ ಪ್ರದೇಶದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಗಟ್ಟಿ ಆಗುತ್ತಿದೆ. ಎರಡೂ ರಾಜ್ಯಗಳಲ್ಲಿ ನಾಥ ಸಂಪ್ರದಾಯದ ಪ್ರಭಾವ ಇದೆ. ನಮ್ಮ ನಡುವೆ ಕೊಡುಕೊಳ್ಳುವಿಕೆ ಮತ್ತಷ್ಟು ಹೆಚ್ಚಾಗಬೇಕು' ಎಂದು ಅವರು ಅಭಿಪ್ರಾಯ ಪಟ್ಟರು.
ಇನ್ನೂ ಸಚಿವ ಅಶ್ವತ್ಥನಾರಾಯಣ ಅವರು ಮಾತನಾಡಿ, 'ರಾಮನಗರದ ಪುರಾತನ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಬೇಕು ಮತ್ತು ಮಾರ್ಗದರ್ಶನ ಮಾಡಬೇಕು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂಗಿತವೂ ಆಗಿದೆ' ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೋರಿದರು. ಈ ಸಂದರ್ಭದಲ್ಲಿ ಸಚಿವರು ರಾಮನಗರ ಮತ್ತು ರಾಮನ ನಡುವಿನ ಬಾಂಧವ್ಯವನ್ನು ವಿವರಿಸಿದರು. ರಾಮನಗರದ ಭಕ್ತರು ಜಯಘೋಷಗಳನ್ನು ಮೊಳಗಿಸಿದರು.

ಇನ್ನೂ ಈ ಕುರಿತು ಖುದ್ದಾಗಿ ಅಧಿಕೃತ ಟ್ವಿಟ್ಟರ್ ನಲ್ಲಿ ಮಾಹಿರಿ ಹಂಚಿಕೊಂಡಿರುವ ಅಶ್ವತ್ಥ ನಾರಾಯಣ, ರಾಮನಗರದ ಯಾತ್ರಾತ್ರಿಗಳೊಂದಿಗೆ ಉತ್ತರ ಪ್ರದೇಶ ಮುಖ್ಯುಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿರುವುದು ತುಂಬ ಸಂತಸ ತಂದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ, 'ರಾಮನಗರದ ಪುರಾತನ ರಾಮದೇವರ ಬೆಟ್ಟವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಬೇಕು ಮತ್ತು ಮಾರ್ಗದರ್ಶನ ಮಾಡಬೇಕು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂಗಿತವೂ ಆಗಿದೆ' ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೋರಿದರು.
ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅವರ ನೇತೃತ್ವದಲ್ಲಿ 150 ಯಾತ್ರಾರ್ಥಿಗಳ ತಂಡ ಅಯೋಧ್ಯೆಗೆ ತೆರಳಿದ್ದಾರೆ. ಉತ್ತರಪ್ರದೇಶದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾ ಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಸಮರ್ಪಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಜಿಲ್ಲೆಯ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ತೆರಳಿದ್ದಾರೆ.












Click it and Unblock the Notifications