ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಪುಟ್ನಿಕ್ ಲೈಟ್ ಲಸಿಕೆಯೂ ಆಗುತ್ತಾ ಕೋವಿಡ್-19 ಬೂಸ್ಟರ್ ಡೋಸ್!?

|
Google Oneindia Kannada News

ನವದೆಹಲಿ, ಮೇ 19: ಭಾರತದಲ್ಲಿ ಮೊದಲ ಡೋಸ್ ಮತ್ತು ಎರಡನೇ ಡೋಸ್ ಲಸಿಕೆ ವಿತರಣೆಯ ಅಭಿಯಾನ ಬಹುಪಾಲು ಪೂರ್ಣಗೊಂಡಿದೆ. ಮೂರನೇ ಡೋಸ್ ಅಥವಾ ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಹಲವು ಲಸಿಕೆಗೆ ಅನುಮೋದನೆ ನೀಡಿದೆ.

ಇದರ ಮಧ್ಯೆ ಜೂನ್ ಅಂತ್ಯ ಅಥವಾ ಜುಲೈ ಆರಂಭದ ವೇಳೆಗೆ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ನೀಡುವುದಕ್ಕೆ ಅನುಮೋದನೆ ನೀಡಬೇಕು ಎಂದು ಔಷಧೀಯ ಪ್ರಾಧಿಕಾರಕ್ಕೆ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಕೋರಿರುವ ಬಗ್ಗೆ ಔಷಧ ತಯಾರಕ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮೊದಲು ಓದಿ: ಹೌದು ಭಾರತದಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆ ಪ್ರಮಾಣವಾದ್ರೂ ಎಷ್ಟು!?ಮೊದಲು ಓದಿ: ಹೌದು ಭಾರತದಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆ ಪ್ರಮಾಣವಾದ್ರೂ ಎಷ್ಟು!?

ಡಾ. ರೆಡ್ಡೀಸ್‌ನ ಸಿಇಒ ದೀಪಕ್ ಸಪ್ರಾ ಸಕ್ರಿಯ ಔಷಧೀಯ ಪದಾರ್ಥಗಳು ಮತ್ತು ಸೇವೆಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದರು. ಕಂಪನಿಯು ಪ್ರಸ್ತುತ 12 ರಿಂದ 17 ವರ್ಷದ ಮಕ್ಕಳಿಗೆ ಸ್ಪುಟ್ನಿಕ್ ಎಂ ಲಸಿಕೆಯನ್ನು ಬ್ಯಾಕ್‌ಬರ್ನರ್‌ನಲ್ಲಿ ಇರಿಸಲಾಗಿದ್ದು, ಸ್ಪುಟ್ನಿಕ್ ಲೈಟ್‌ಗೆ ಆದ್ಯತೆ ನೀಡಿದೆ.

ವೈದ್ಯಕೀಯ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಸ್ಪಷ್ಟನೆ

ವೈದ್ಯಕೀಯ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಸ್ಪಷ್ಟನೆ

"ನಾವು ಪ್ರಸ್ತುತ ಸಾರ್ವತ್ರಿಕ ಬೂಸ್ಟರ್‌ನಂತೆ ಸ್ಪುಟ್ನಿಕ್ ಲೈಟ್‌ಅನ್ನು ನೀಡುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿದ್ದೇವೆ. ಬೂಸ್ಟರ್ ಡೋಸ್ ಆಗಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದೇ ಲಸಿಕೆಯನ್ನು ಪಡೆದುಕೊಳ್ಳಬಹುದು. ಅದೇ ರೀತಿ ವೈದ್ಯಕೀಯ ಪ್ರಯೋಗದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಯಶಸ್ವಿಯಾದರೆ ಸ್ಪುಟ್ನಿಕ್ ಲೈಟ್ ಲಸಿಕೆಯನ್ನೂ ಸಹ ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ನಾವು ಜೂನ್ ಅಂತ್ಯದಲ್ಲಿ ಅಥವಾ ಜುಲೈ ಆರಂಭದಲ್ಲಿ ನಿಯಂತ್ರಕಕ್ಕೆ ಹೋಗಲು ನಿರೀಕ್ಷಿಸುತ್ತೇವೆ"ಎಂದು ಸಪ್ರಾ ಹೇಳಿದರು.

ಸ್ಪುಟ್ನಿಕ್ ಲೈಟ್ ಲಸಿಕೆಗೆ ಅನುಮೋದನೆ ಸಿಕ್ಕಿದ್ದು ಯಾವಾಗ?

ಸ್ಪುಟ್ನಿಕ್ ಲೈಟ್ ಲಸಿಕೆಗೆ ಅನುಮೋದನೆ ಸಿಕ್ಕಿದ್ದು ಯಾವಾಗ?

ಭಾರತದಲ್ಲಿ ಡಾ. ರೆಡ್ಡೀಸ್ ಕಂಪನಿಯು ಉತ್ಪಾದಿಸುತ್ತಿರುವ ಸ್ಪುಟ್ನಿಕ್ ಲೈಟ್ ಲಸಿಕೆಗೆ ಈಗಾಗಲೇ ಅನುಮೋದನೆ ಸಿಕ್ಕಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ತುರ್ತು ಸಂದರ್ಭದಲ್ಲಿ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಬಳಸುವುದಕ್ಕೆ ಅನುಮತಿ ನೀಡಿದೆ.

ಸೆಪ್ಟೆಂಬರ್ 2020 ರಲ್ಲಿ, ಡಾ. ರೆಡ್ಡೀಸ್ ಸ್ಪುಟ್ನಿಕ್ V ನ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಮತ್ತು ಭಾರತದಲ್ಲಿ ಲಸಿಕೆಯನ್ನು ವಿತರಿಸಲು ರಷ್ಯಾದ ನೇರ ಹೂಡಿಕೆ ನಿಧಿ (RDIF) ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿತು. ಏಪ್ರಿಲ್ 2021 ರಲ್ಲಿ, ಭಾರತದಲ್ಲಿ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ ಎರಡು-ಡೋಸ್ ಸ್ಪುಟ್ನಿಕ್ V ಲಸಿಕೆಗೆ ಡಿಸಿಜಿಐ ಅನುಮೋದನೆ ನೀಡಿತ್ತು.

ದೇಶದಲ್ಲಿ ಕೋವಿಡಜ್-19 ಲಸಿಕೆ ವಿತರಣೆ ಹಂತಗಳು

ದೇಶದಲ್ಲಿ ಕೋವಿಡಜ್-19 ಲಸಿಕೆ ವಿತರಣೆ ಹಂತಗಳು

ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೋವಿಡ್-19 ಲಸಿಕೆಯ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಫೆಬ್ರವರಿ 2ರಂದು ಎರಡನೇ ಹಂತದಲ್ಲಿ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಿಸಲಾಯಿತು. ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥತೆಯನ್ನು ಹೊಂದಿರುವವರಿಗೆ ಕೋವಿಡ್-19 ಲಸಿಕೆ ವಿತರಿಸಲು ಶುರು ಮಾಡಲಾಯಿತು.

ತದನಂತರ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಿಸಲು ಅನುಮತಿ ನೀಡಲಾಗಿತ್ತು. ಮೇ 1ರ ನಂತರದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ವೈರಸ್ ಲಸಿಕೆ ವಿತರಿಸುವುದಕ್ಕೆ ಅನುಮತಿಸಲಾಗಿತ್ತು. 2022ರ ಜನವರಿ 3ರಂದು 15 ರಿಂದ 18 ವಯೋಮಾನದವರಿಗೆ ಕೊರೊನಾ ವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರವು ಅನುಮೋದನೆಯನ್ನು ನೀಡಿತು. ಇದರ ಬೆನ್ನಲ್ಲೇ ಮಾರ್ಚ್ 16ರಂದು 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಹೀಗೆ ಹಂತ-ಹಂತವಾಗಿ ಲಸಿಕೆ ವಿತರಣೆಗೆ ದೇಶದಲ್ಲಿ ಅನುಮತಿ ನೀಡಲಾಗಿದೆ.

ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಅನುಮೋದನೆ

ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಅನುಮೋದನೆ

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈಗಾಗಲೇ ಘೋಷಿಸಿದೆ. ಮೊದಲ ಎರಡು ಅಲೆಗಳ ನಂತರ ಆರಂಭಿಸಲಾದ ಲಸಿಕೆ ವಿತರಣೆ ಅಭಿಯಾನದಿಂದ ಸಾವಿನ ಪ್ರಕರಣಗಳು ಮತ್ತು ತೀವ್ರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.

ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೂ ಅನುಮತಿ ನೀಡಲಾಗಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಾವು ಎರಡನೇ ಡೋಸ್ ಪಡೆದುಕೊಂಡು 9 ತಿಂಗಳು ಕಳೆದಿದ್ದರೆ ಮೂರನೇ ಡೋಸ್ ಲಸಿಕೆಯನ್ನೂ ಪಡೆದುಕೊಳ್ಳಬಹುದು.

English summary
Dr Reddy's Lab asked approval for Sputnik Light as universal Coronavirus booster dose. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X