ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಭಾಷಣ

|
Google Oneindia Kannada News

ನವದೆಹಲಿ, ಜುಲೈ 25: ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆ ಆಗಿರುವುದು ವಿಶೇಷ ಗೌರವ ಎಂದು ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸೆಂಟ್ರಲ್ ಹಾಲ್‌ನಲ್ಲಿ ಮೊದಲ ಬಾರಿ ಭಾಷಣ ಮಾಡಿದ ಅವರು, ತಮ್ಮ ಮಾತುಗಳ ಮೂಲಕ ಭರ್ಜರಿ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು.

Breaking: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರBreaking: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ಭಾರತದ 15ನೇ ರಾಷ್ಟ್ರಪತಿಯಾಗಿ ಸೆಂಟ್ರಲ್ ಹಾಲ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುರ್ಮು ಮೊದಲ ಭಾಷಣದಲ್ಲಿ ಏನೆಲ್ಲಾ ಉಲ್ಲೇಖಿಸಿದರು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಮುರ್ಮು

ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಮುರ್ಮು

"ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾಗಿದೆ. ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ," ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ

ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ಮೊದಲ ರಾಷ್ಟ್ರಪತಿ

"ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ಆಗಿದ್ದೇನೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ಸ್ವತಂತ್ರ ಭಾರತದ ನಾಗರಿಕರೊಂದಿಗೆ ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಪ್ರಯತ್ನಿಸಬೇಕಿದೆ. ಇಂಥ ಪ್ರಯತ್ನಗಳಿಗೆ ಮೊದಲಿಗಿಂತ ಹೆಚ್ಚಿನ ವೇಗವನ್ನು ನೀಡಬೇಕಾಗಿದೆ," ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ನನ್ನ ಸಾಧನೆಯಲ್ಲ

ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ನನ್ನ ಸಾಧನೆಯಲ್ಲ

ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಆಗಿರುವುದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸುಗಳನ್ನು ಮಾತ್ರವಲ್ಲದೆ ಆ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಬಡವರ ಆಶೀರ್ವಾದದಿಂದ ನನ್ನ ನಾಮನಿರ್ದೇಶನ

ಬಡವರ ಆಶೀರ್ವಾದದಿಂದ ನನ್ನ ನಾಮನಿರ್ದೇಶನ

ವರ್ಷಗಟ್ಟಲೆ ಅಭಿವೃದ್ಧಿ ಕಾಣದ ಜನರು-ಬಡವರು, ದಲಿತರು, ಹಿಂದುಳಿದವರು, ಗಿರಿಜನರು- ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗಿದೆ. ನನ್ನ ನಾಮನಿರ್ದೇಶನದ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟಿಗಟ್ಟಲೆ ಮಹಿಳೆಯರ ಕನಸು ಮತ್ತು ಸಾಮರ್ಥ್ಯದ ಪ್ರತಿಬಿಂಬವಾಗಿದೆ ಎಂದು ಮುರ್ಮು ಹೇಳಿದ್ದಾರೆ.

Recommended Video

ರಣ ಮಳೆ,ಪ್ರವಾಹಕ್ಕೆ ತತ್ತರಿಸಿದ ಪಾಕಿಸ್ತಾನ: ಜನ ಜೀವನ ಅಸ್ತವ್ಯಸ್ತ | *World | OneIndia Kannada

English summary
Honoured to take charge as President as India completes 75 years of Independence: Draupadi Murmu First Speech in Central Hall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X