Breaking: ಜುಲೈ 25ರಂದು ನೂತನ ರಾಷ್ಟ್ರಪತಿ ದ್ರೌಪದಿ ಪ್ರಮಾಣ ವಚನ
ನವದೆಹಲಿ ಜುಲೈ : ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜುಲೈ 21ರಂದು ರಾಷ್ಟ್ರಪತಿ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್. ವಿ. ರಮಣ ರಾಷ್ಟ್ರಪತಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ನೂತನ ರಾಷ್ಟ್ರಪತಿಗಳು 21 ಗನ್ ಸೆಲ್ಯೂಟ್ ನಂತರ ಅಧಿಕಾರ ಸ್ವೀಕರಿಸಲಿದ್ದಾರೆ. ಅದಾದ ಬಳಿಕ ದ್ರೌಪದಿ ಮುರ್ಮು ದೇಶವನ್ನು ಉದ್ದೇಶಿಸಿ ತಮ್ಮ ಮೊದಲ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮುನ್ನ ರಾಮನಾಥ್ ಕೋವಿಂದ್ ನಿರ್ಗಮಿಸುವ ಜೊತೆಗೆ ಹೊಸದಾಗಿ ಚುನಾಯಿತರಾದವರು ವಿದ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸುತ್ತಾರೆ.

ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ ತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸದರು ಹಾಗೂ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸಮಾರಂಭ ಮುಗಿದ ಬಳಿಕ ನೂತನ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳದ್ದಾರೆ. ಅಲ್ಲಿ ಸೇವಾ ಗಾರ್ಡ್ ಆಫ್ ಗೌರವ ಸ್ವೀಕರಿಸಲಿದ್ದಾರೆ. ಅಲ್ಲದೇ ಇದೇ ವೇಳೆ ನಿರ್ಗಮಿಸುವ ಮಾಜಿ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಲಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications