ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ 2 ಡಿಜಿ ಕೊರೊನಾ ಔಷಧಕ್ಕೆ ದರ ನಿಗದಿ

|
Google Oneindia Kannada News

ನವದೆಹಲಿ, ಮೇ 28: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಹಾಗೂ ಹೈದರಾಬಾದ್‌ನ ಡಾ. ರೆಡ್ಡೀಸ್ ಲ್ಯಾಬೊರೇಟರಿ ಅಭಿವೃದ್ಧಿಪಡಿಸಿರುವ 2 ಡಿಜಿ ಕೊರೊನಾ ಔಷಧಕ್ಕೆ ದರ ನಿಗದಿ ಮಾಡಲಾಗಿದೆ.

ಒಂದು ಸ್ಯಾಚೆಟ್ ಅಥವಾ ಒಂದು ಪ್ಯಾಕ್‌ಗೆ 990 ರೂಪಾಯಿ ಎಂದು ಡಿಆರ್‌ಡಿಒ ತಿಳಿಸಿದೆ. ಡಾ.ರೆಡ್ಡೀಸ್ ಲ್ಯಾಬ್ ಅಭಿವೃದ್ಧಿ ಪಡಿಸಿರುವ ಕೋವಿಡ್ ಪೌಡರ್ ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ರಿಯಾಯಿತಿ ದರದಲ್ಲಿ ಸಿಗಲಿದೆ. 2ಡಿಜಿ ಹೆಸರಿನ ಪೌಡರ್ ಅನ್ನು ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಜಿಸಿಐ) ಅನುಮೋದನೆ ನೀಡಿತ್ತು.

Explained: ಕೊರೊನಾಗೆ DRDO ಅಭಿವೃದ್ಧಿಪಡಿಸಿದ 2ಡಿಜಿ ಔಷಧಿ ಬಗ್ಗೆ ನಿಮಗೆಷ್ಟು ಗೊತ್ತು?Explained: ಕೊರೊನಾಗೆ DRDO ಅಭಿವೃದ್ಧಿಪಡಿಸಿದ 2ಡಿಜಿ ಔಷಧಿ ಬಗ್ಗೆ ನಿಮಗೆಷ್ಟು ಗೊತ್ತು?

ಬಳಿಕ ಔಷಧವನ್ನು ಕೆಲ ದಿನಗಳ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಬಿಡುಗಡೆ ಮಾಡಿದ್ದರು.

 ಎಷ್ಟು ಪರಿಣಾಮಕಾರಿ?

ಎಷ್ಟು ಪರಿಣಾಮಕಾರಿ?

ಈ ಔಷಧ ಕೊರೊನಾ ವೈರಸ್ ಅನ್ನು ಕೊಲ್ಲುವುದಿಲ್ಲ. ವೈರಸ್ ಜೀವಕೋಶದ ಒಳಗಡೆ ಸಂಗ್ರಹಗೊಂಡು ದ್ವಿಗುಣಗೊಳ್ಳುವುದನ್ನು ತಡೆದು ಆದರ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಈ ಮೂಲಕ ವೈರಸ್ ಬೆಳವಣಿಗೆಯನ್ನು ತಡೆಯುತ್ತದೆ ಎಂದು ಡಿಆರ್‌ಡಿಒ ತಿಳಿಸಿದೆ.

 ಔಷಧಿ ಬಳಕೆ ಹೇಗೆ?

ಔಷಧಿ ಬಳಕೆ ಹೇಗೆ?

ಈ ಪೌಡರ್ ಅನ್ನು ನೀರಿನಲ್ಲಿ ಕಲಕಿ ಸೇವಿಸಬಹುದು. ಕ್ಲಿನಿಕಲ್ ಪ್ರಯೋಗದ ವೇಳೆ ಈ ಪೌಡರ್ ಸೇವಿಸಿದ ಸೋಂಕಿತರು ಆಸ್ಪತ್ರೆಯಿಂದ ಬಹಳ ಬೇಗ ಚೇತರಿಕೆ ಕಾಣುತ್ತಿದ್ದಾರೆ. ಪ್ರತಿದಿನ 2 ಪ್ಯಾಕ್ 2ಜಿಡಿ ಔಷಧ ಪಡೆದ ಶೇ.42ರಷ್ಟು ರೋಗಿಗಳು ಕೇವಲ 3 ದಿನದಲ್ಲಿ ಆಕ್ಸಿಜನ್ ಸಪೋರ್ಟ್‌ನಿಂದ ಹೊರ ಬಂದಿದ್ದಾರೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

 ಔಷಧ ಪರಿಣಾಮಕಾರಿ

ಔಷಧ ಪರಿಣಾಮಕಾರಿ

ಪ್ರಯೋಗದ ಸಮಯದಲ್ಲಿ ಸಾರ್ಸ್-ಕೋವ್-2 ವೈರಸ್ ಮೇಲೆ ಪರಿಣಾಮಕಾರಿಯಾಗಿದ್ದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 2020ರ ಮೇ-ಅಕ್ಟೋಬರ್ ವೇಳೆ ಎರಡನೇ ಹಂತದಲ್ಲಿ ದೇಶದ 17 ಆಸ್ಪತ್ರೆಗಳ 110 ರೋಗಿಗಳ ಮೇಲೆ ಪ್ರಯೋಗ ನಡೆಸಲಾಗಿತ್ತು. 2020ರ ಡಿಸೆಂಬರ್ ನಿಂದ 2021ರ ಮಾರ್ಚ್ ಅವಧಿಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳ 27 ಆಸ್ಪತ್ರೆಗಳಲ್ಲಿ 3ನೇ ಹಂತದ ಪ್ರಯೋಗ ನಡೆಸಲಾಗಿತ್ತು. ಪ್ರಯೋಗದ ವೇಳೆ ಉತ್ತಮ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಈಗ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ.

 ಅನುಮತಿ ಸಿಕ್ಕಿದ್ದು ಹೇಗೆ?

ಅನುಮತಿ ಸಿಕ್ಕಿದ್ದು ಹೇಗೆ?

ಕೋವಿಡ್ ಮೊದಲ ಅಲೆ ಹೆಚ್ಚಾದ ಸಮಯದಲ್ಲಿ ಪ್ರಧಾನಿ ಮೋದಿ ಅವರ ಸಲಹೆಯ ಮೇರೆ ಡಿಆರ್ಡಿಒದ ವಿಭಾಗವಾದ ದಿ ಇನ್ ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸನ್ ಆಂಡ್ ಅಲೈಡ್ ಸೈನ್ಸಸ್ ಸಂಸ್ಥೆ ಹೈದರಾಬಾದ್ ಮೂಲದ ಸೆಂಟರ್ ಫಾರ್ ಸೆಲ್ಯೂಲರ್ ಆಂಡ್ ಮಾಲಿಕ್ಯುಲರ್ ಬಯೋಲಜಿ ಸಹಯೋಗದಲ್ಲಿ ಈ ಔಷಧವನ್ನು ಮೊದಲ ಪ್ರಯೋಗಕ್ಕೆ ಬಳಸಿತ್ತು.

English summary
Dr Reddy’s has fixed the price of DRDO’s 2DG anti-Covid drug at ₹990 per sachet. However, the pharma company would provide the drug to the government hospitals, central and state governments at a discounted price.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X