ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ 4 ರಾಜ್ಯಗಳಲ್ಲಿ ಕೊರೊನಾ ಲಸಿಕೆ ತಾಲೀಮು ಶುರು

|
Google Oneindia Kannada News

ನವದೆಹಲಿ, ಡಿಸೆಂಬರ್ 28: ದೇಶದ 4 ರಾಜ್ಯಗಳಲ್ಲಿ ಇಂದಿನಿಂದ ಕೊರೊನಾ ಲಸಿಕೆ ತಾಲೀಮು ಶುರುವಾಗಲಿದೆ. ದೇಶದಾದ್ಯಂತ ಜನವರಿ ತಿಂಗಳಿನಲ್ಲಿ ಜನರಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನ ಚಾಲನೆಗೆ ಮುಂದಾಗಿರುವ ಕೇಂದ್ರ ಸರ್ಕಾರ, ಇದಕ್ಕಾಗಿ ಪೂರ್ವಭಾವಿಯಾಗಿ ನಾಲ್ಕು ರಾಜ್ಯಗಳಲ್ಲಿ ಸೋಮವಾರ ಮತ್ತು ಮಂಗಳವಾರ 2 ದಿನ ಲಸಿಕೆ ನೀಡಿಕೆಯ ಅಣಕು ಕಾರ್ಯಾಚರಣೆ ನಡೆಸಲಿದೆ.

ಕೊರೊನಾ ಲಸಿಕೆ ಅಭಿಯಾನಕ್ಕೆ ಅಗತ್ಯವಿರುವ ಕ್ರಮಗಳಾದ ಕೋ-ವಿನ್ ಆ್ಯಪ್ ನಲ್ಲಿ ಲಸಿಕೆ ಫಲಾನುಭವಿಗಳ ಹೆಸರು ನೋಂದಣಿ, ಲಸಿಕೆ ಸಾಗಣೆಯ ಆನ್'ಲೈನ್ ಮೇಲ್ವಿಚಾರಣೆ, ಲಸಿಕೆ ಪಡೆಯುವವರ ಆಯ್ಕೆ, ಲಸಿಕೆ ಕೇಂದ್ರಗಳಲ್ಲಿ ಫಲಾನುಭವಿಗಳಿಗೆ ಅಣಕು ಲಸಿಕೆ ಹಾಕುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳನ್ನು ಆ ಅಣಕು ಕಾರ್ಯಾಚರಣೆ ಒಳಗೊಂಡಿರಲಿದೆ.

ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆಯಲಿರುವ ಮೊದಲ ಕೊರೊನಾ ಲಸಿಕೆ ಕೋವಿಶೀಲ್ಡ್ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆಯಲಿರುವ ಮೊದಲ ಕೊರೊನಾ ಲಸಿಕೆ ಕೋವಿಶೀಲ್ಡ್

ಅಂದರೆ, ನಿಜವಾದ ಕೊರೋನಾ ಲಸಿಕೆ ಹಾಕುವುದು ಒಂದನ್ನು ಹೊರತುಪಡಿಸಿ ಉಳಿದೆಲ್ಲಾ ಅಂಶಗಳನ್ನು ಈ ಲಸಿಕೆಯ ಅಣಕು ತಾಲೀಮು ಒಳಗೊಂಡಿರಲಿದೆ.

ಲಸಿಕೆ ಅಣಕು ಕಾರ್ಯಾಚರಣೆ

ಲಸಿಕೆ ಅಣಕು ಕಾರ್ಯಾಚರಣೆ

ಇದರ ಅನ್ವಯ ಪಂಜಾಬ್, ಅಸ್ಸಾಂ, ಆಂಧ್ರಪ್ರದೇಶ ಮತ್ತು ಗುಜರಾತ್ ರಾಜ್ಯಗಳ ತಲಾ 2 ಜಿಲ್ಲೆಗಳಲ್ಲಿ 2 ದಿನಗಳ ಲಸಿಕೆ ನೀಡಿಕೆಯ ಅಣಕು ಕಾರ್ಯಾಚರಣೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವೈರಸ್ ಇಡೀ ವಿಶ್ವಕ್ಕೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವೈರಸ್ ಹರಡುವುದನ್ನು ತಡೆಗಟ್ಟಲು ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸೋಂಕು ಹರಡುವುದು ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ.

ಅಮೆರಿಕ, ಇಂಗ್ಲೆಂಡ್‌ನಲ್ಲಿ ಕೊರೊನಾ ವಿರುದ್ಧದ ಲಸಿಕೆ

ಅಮೆರಿಕ, ಇಂಗ್ಲೆಂಡ್‌ನಲ್ಲಿ ಕೊರೊನಾ ವಿರುದ್ಧದ ಲಸಿಕೆ

ಇದರ ನಡುವೆ ಈ ವೈರಸ್​ಗೆ ಲಸಿಕೆ ಕಂಡು ಹಿಡಿಯಲು ಹಲವು ಕಂಪನಿಗಳು ಯಶಸ್ವಿಯಾಗಿದ್ದು, ಅಮೆರಿಕ, ಇಂಗ್ಲೆಂಡ್​ನಲ್ಲಿ ಈಗಾಗಲೇ ಕೊರೊನಾ ವೈರಸ್ ವಿರುದ್ಧದ ಲಸಿಕೆ ನೀಡಿಕೆ ಆರಂಭವಾಗಿದೆ.

ಯಾವೆಲ್ಲಾ ಲಸಿಕೆಗಳಿಗೆ ಅನುಮೋದನೆ

ಯಾವೆಲ್ಲಾ ಲಸಿಕೆಗಳಿಗೆ ಅನುಮೋದನೆ

ಅಮೆರಿಕದಲ್ಲಿ ಈಗಾಗಲೇ ಹತ್ತು ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಫೈಜರ್, ಮಾಡೆರ್ನಾ ಕಂಪನಿಯ ಲಸಿಕೆಗಳನ್ನ ಅಮೆರಿಕ, ಇಂಗ್ಲೆಂಡ್ ಜನರ ಬಳಕೆಗೆ ಅನುಮೋದಿಸಲಾಗಿದೆ.

ಕೊವಿನ್ ಅಪ್ಲಿಕೇಷನ್‌ನಲ್ಲಿ ಫಲಾನುಭವಿಗಳ ಪಟ್ಟಿ

ಕೊವಿನ್ ಅಪ್ಲಿಕೇಷನ್‌ನಲ್ಲಿ ಫಲಾನುಭವಿಗಳ ಪಟ್ಟಿ

ಲಸಿಕೆ ನೀಡಿಕೆಗೆ ಫಲಾನುಭವಿಗಳ ಪಟ್ಟಿಯನ್ನು ಕೊವಿನ್ ಆ್ಯಪ್​ನಲ್ಲಿ ರಿಜಿಸ್ಟರ್ ಮಾಡಲಾಗಿರುತ್ತದೆ.‌ ಆದ್ಯತೆ ಪಟ್ಟಿಯಲ್ಲಿರೋರಿಗೆ ಮಾತ್ರ ಲಸಿಕೆ ನೀಡಬೇಕು. ಲಸಿಕೆ‌ ನೀಡಿಕೆಗೆ ಸೂಕ್ತ ಸ್ಥಳಾವಕಾಶ ಇರಬೇಕು. ಈಗಾಗಲೇ ಕೇಂದ್ರ ಸರ್ಕಾರ ಲಸಿಕೆ ನೀಡಿಕೆಗೆ ಮಾರ್ಗಸೂಚಿ ನೀಡಿದೆ.

Recommended Video

Chamarajanagar: ಬಂಡೀಪುರ ಅರಣ್ಯ ಸಂಪತ್ತು ರಕ್ಷಣೆಗೆ ಇಲಾಖೆಯಿಂದ ಹೊಸ ಪ್ಲಾನ್ | Oneindia Kannada

English summary
India is set to hold a two-day dry run from Monday in four states for its proposed ambitious vaccination drive likely to be kicked off in January.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X