ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ವಜಾ ಬಗ್ಗೆ ಪುದುಚೇರಿ ಸಿಎಂ ಮಾತು?
ಪುದುಚೇರಿ, ಫೆಬ್ರವರಿ.16: ನಮ್ಮ ಒತ್ತಡದಿಂದಾಗಿಯೇ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಭಾರತೀಯ ಸರ್ಕಾರವು ವಜಾಗೊಳಿಸಿದೆ ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ತಿಳಿಸಿದ್ದಾರೆ.
ಕಿರಣ್ ಬೇಡಿ ಅವರ ವಿರುದ್ಧ ತೆಗೆದುಕೊಂಡಿರುವ ಕ್ರಮವು ಪುದುಚೇರಿ ಜನರ ಪಾಲಿಗೆ ದಿಗ್ವಿಜಯವಾಗಿದೆ. ಅವರು ತಮ್ಮ ಅಧಿಕಾರದಿಂದಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದರು ಎಂದು ಸಿಎಂ ನಾರಾಯಣಸಾಮಿ ಆರೋಪಿಸಿದ್ದಾರೆ.
ಪುದುಚೇರಿಯಲ್ಲಿ ಸರ್ಕಾರದ ಬಿಕ್ಕಟ್ಟಿನ ನಡುವೆ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪುದುಚೇರಿ ಲೆಫ್ಟನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ತೆಲಂಗಾಣ ರಾಜ್ಯಪಾಲ ಡಾ. ತಮಿಳುಸಾಯಿ ಸುಂದರ್ ರಾಜನ್ ಅವರಿಗೆ ಹೆಚ್ಚುವರಿ ಹೊಣೆಯನ್ನು ವಹಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಡಾ.ಕಿರಣ್ ಬೇಡಿಯವರ ಅಧಿಕಾರವನ್ನು ತಡೆ ಹಿಡಿಯುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಪುದುಚೇರಿಯ ಕಾರ್ಯಗಳನ್ನು ನೋಡಿಕೊಳ್ಳುವುದಕ್ಕಾಗಿ ರಾಜ್ಯಪಾಲ ಡಾ. ತಮಿಳುಸಾಯಿ ಸುಂದರ್ ರಾಜನ್ ಅವರನ್ನು ನೇಮಿಸಲಾಗಿದೆ.

ಪುದುಚೇರಿಯಲ್ಲಿ ಸರ್ಕಾರ ಪತನ ಭೀತಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರು ರಾಜೀನಾಮೆ ಸಲ್ಲಿಸಿದ ನಂತರವೂ ಮುಖ್ಯಮಂತ್ರಿ ನಾರಾಯಣಸ್ವಾಮಿಯವರು ಅಧಿಕಾರವನ್ನು ಆಸ್ವಾದಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಒಟ್ಟು 28 ಶಾಸಕರಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 14 ಶಾಸಕರ ಬೆಂಬಲವಿದ್ದು, ವಿರೋಧ ಪಕ್ಷದಲ್ಲಿಯೂ ಬಿಜೆಪಿಯ ಮೂವರು ನಾಮನಿರ್ದೇಶಕ ಸದಸ್ಯರು ಸೇರಿದಂತೆ 14 ಮಂದಿ ಸದಸ್ಯರ ಬೆಂಬಲವಿದೆ. ಈ ಹಿನ್ನೆಲೆ ಅಲ್ಪಮತಕ್ಕೆ ಕುಸಿದ ಸರ್ಕಾರದ ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಲಿ ಎಂದು ವಿರೋಧ ಪಕ್ಷದ ನಾಯಕ ರಂಗಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸದಸ್ಯ ಬಲದ ಲೆಕ್ಕಾಚಾರ:
ಕಾಂಗ್ರೆಸ್ ಶಾಸಕ ನೀಡಿದ ರಾಜೀನಾಮೆಯಿಂದ ಚುನಾವಣೆ ಹೊಸ್ತಿಲಿನಲ್ಲೇ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ. ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. 30 ಶಾಸಕ ಸ್ಥಾನ ಬಲವಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ 11, ಡಿಎಂಕೆ 3 ಮತ್ತು ಒಬ್ಬ ಪಕ್ಷೇತರ ಶಾಸಕನ ಬೆಂಬಲದಿಂದ ಸರ್ಕಾರ ರಚಿಸಲಾಗಿತ್ತು. ವಿರೋಧ ಪಕ್ಷವಾಗಿ ಎನ್ ಆರ್ ಕಾಂಗ್ರೆಸ್ 7, ಎಐಎಡಿಎಂಕೆ 4 ಮತ್ತು ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರಿದ್ದು, 14 ಸದಸ್ಯ ಬಲವನ್ನು ಹೊಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications