• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾದಿಂದಾಗಿ ರೈಲ್ವೆ ಇಲಾಖೆ ಅನುಭವಿಸಿದ ನಷ್ಟವೆಷ್ಟು?

|
Google Oneindia Kannada News

ನವದೆಹಲಿ, ಆಗಸ್ಟ್ 23: ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ರೈಲ್ವೆ ಇಲಾಖೆಯು ಬರೋಬ್ಬರಿ 36 ಸಾವಿರ ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಕೇಂದ್ರ ಸಚಿವ ರಾಮ್ ಸಾಹೇಬ್ ದನ್ವೆ ಮಾಹಿತಿ ನೀಡಿದ್ದಾರೆ.

ಪ್ರಯಾಣಿಕ ರೈಲು ವಿಭಾಗ ಯಾವಾಗಲೂ ನಷ್ಟದಲ್ಲಿ ನಡೆಯುತ್ತದೆ. ಟಿಕೆಟ್ ದರ ಏರಿಕೆ ಮಾಡಿದರೆ ಅದು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಅದು ಸಾಧ್ಯವಿಲ್ಲ, ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೆ 36,000 ಕೋಟಿ ರೂಪಾಯಿ ನಷ್ಟ ಎದುರಿಸಿದೆ ಎಂದು ಅವರು ಹೇಳಿದ್ದಾರೆ.

ರೈತರಿಂದ ತಡೆ: ಪಂಜಾಬ್‌ನಲ್ಲಿ 50, ಯುಪಿಯಲ್ಲಿ 4 ರೈಲು ರದ್ದುರೈತರಿಂದ ತಡೆ: ಪಂಜಾಬ್‌ನಲ್ಲಿ 50, ಯುಪಿಯಲ್ಲಿ 4 ರೈಲು ರದ್ದು

ಗೂಡ್ಸ್ ರೈಲುಗಳು ರಾಷ್ಟ್ರೀಯ ಸಾಗಣೆ ವಿಭಾಗದ ನಿಜವಾದ ಆದಾಯದ ಮೂಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ಸರಕು ಸಾಗಣೆ ರೈಲುಗಳಿಂದ ಮಾತ್ರ ಲಾಭವಿದೆ. ಸಾಂಕ್ರಾಮಿಕದ ಅವಧಿಯಲ್ಲೂ ಈ ರೈಲುಗಳು ಸರಕು ಸಾಗಣೆ, ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಮಹತ್ವದ ಪಾತ್ರ ವಹಿಸಿತ್ತು ಎಂದು ಸಚಿವರು ತಿಳಿಸಿದ್ದಾರೆ.

ಮುಂಬೈ-ನಾಗ್ಪುರ ಎಕ್ಸ್ ಪ್ರೆಸ್ ವೇ ಮಾರ್ಗದಲ್ಲಿ ಬುಲೆಟ್ ಟ್ರೈಲ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಲ್ನಾ ರೈಲ್ವೆ ನಿಲ್ದಾಣದ ಬಳಿ ಕೆಳಸೇತುವೆಗೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು.

ಕೋವಿಡ್ ಪ್ರಕರಣಗಳು ಹೆಚ್ಚಿರುವ ಕೇರಳ ಮತ್ತು ಮಹಾರಾಷ್ಟ್ರಗಳಿಂದ ಕರ್ನಾಟಕಕ್ಕೆ ಆಗಮಿಸುವ ರೈಲು ಪ್ರಯಾಣಿಕರ ಮೇಲೆ ವಿಶೇಷ ಕಣ್ಗಾವಲು ಇಡಲಾಗಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ. ರೈಲು ಪ್ರಯಾಣಿಕರ ಮೇಲೆ ನಿಗಾ ವಹಿಸುವಂತೆ ಕರ್ನಾಟಕ ಸರ್ಕಾರ ರೈಲ್ವೆ ಇಲಾಖೆಗೆ ಮನವಿ ಮಾಡಿತ್ತು.

ನೈಋತ್ಯ ರೈಲ್ವೆ ಸೋಮವಾರ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ 31/7/2021ರ ಮಾರ್ಗಸೂಚಿಯಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವ ರೈಲು ಪ್ರಯಾಣಿಕರು 72 ಗಂಟೆಗಳ ಮೊದಲಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು.

ಕೋವಿಡ್ ಹರಡುವಿಕೆ ತಡೆಯಲು ರೈಲ್ವೆ ಇಲಾಖೆ ರಾಜ್ಯ ಸರ್ಕಾರಕ್ಕೆ ಅಗತ್ಯ ಸಹಕಾರವನ್ನು ನೀಡಲಿದೆ. ರೈಲು ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ತಪಾಸಣೆ ನಡೆಸಲು ಸೂಕ್ತ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಸಂಜೀವ್ ಕಿಶೋರ್ ಹೇಳಿದ್ದಾರೆ.

ಪ್ರಯಾಣಿಕರ ತಪಾಸಣೆ ನಡೆಸಲು ಸ್ಥಳ ನೀಡುವ ಕುರಿತು, ಆರ್‌ಟಿಸಿಆರ್ ವರದಿ ಇರುವುದನ್ನು ಖಚಿತಪಡಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವಂತೆ ವಿಭಾಗಗಳಿಗೆ ಸಂಜೀವ್ ಕಿಶೋರ್ ನಿರ್ದೇಶವನ್ನು ನೀಡಿದ್ದಾರೆ. ಬಸ್, ವಾಹನಗಳ ಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರನ್ನು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಈ ಕುರಿತು ನೈಋತ್ಯ ರೈಲ್ವೆ, ಕೇಂದ್ರಿಯ ರೈಲ್ವೆ, ಪಶ್ಚಿಮ ರೈಲ್ವೆಗೆ ನಿರ್ದೇಶನಗಳನ್ನು ನೀಡಿದ್ದಾರೆ. ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರೈಲು ಹತ್ತಲು ಅವಕಾಶ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಈ ಕುರಿತು ರೈಲು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಟಿಟಿಇ ರೈಲು ನಿಲ್ದಾಣದಲ್ಲಿಯೇ ಪ್ರಯಾಣಿಕರು ಆರ್‌ಟಿಪಿಸಿಆರ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಇದು ಅನ್ವಯವಾಗಲಿದೆ.

ಭಾರತದಲ್ಲಿ ಕೊರೊನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,49,306ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 44,157 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,80,626ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,95,160 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 50,75,51,399 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
Union minister Raosaheb Danve on Sunday said the Railways has suffered losses to the tune of Rs 36,000 crore during the coronavirus pandemic, and termed goods trains as the real revenue generators for the national transporter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X