Delhi Election 2025 Exit Poll: ದೆಹಲಿ ಎಕ್ಸಿಟ್‌ ಫೋಲ್ ಫಲಿತಾಂಶ, ಬಿಜೆಪಿಗೆ ಬಹುಮತ

ನವದೆಹಲಿ, ಫೆಬ್ರವರಿ 05: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ಬುಧವಾರ 70 ಸೀಟುಗಳಿಗೆ ಒಂದೇ ಹಂತದಲ್ಲಿ ಮತದಾನ ಮುಕ್ತಾಯಗೊಂಡಿದೆ. ಮತದಾನದ ಬಳಿಕ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ದೆಹಲಿ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿತ್ತು. ಚುನಾವಣಾ ಕಣದಲ್ಲಿ 699 ಅಭ್ಯರ್ಥಿಗಳಿದ್ದಾರೆ. ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36.

ದೆಹಲಿ ರಾಜ್ಯದ ಆಡಳಿತ ಪಕ್ಷ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ. ಆಮ್ ಆದ್ಮಿ ಪಕ್ಷ 2015, 2020ರಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದೆ. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷಕ್ಕೆ ಸವಾಲು ಎದುರಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಎಎಪಿಗೆ ಪ್ರಬಲ ಎದುರಾಳಿಗಳು ಎಂದು ಅಂದಾಜಿಸಲಾಗಿತ್ತು.

DV Research Delhi Exit Poll Result 2025 Survey Predicts Clear Mandate For BJP

ಬಿಜೆಪಿಗೆ ಅಧಿಕಾರ: ದೆಹಲಿ ಚುನಾವಣೆ 2025ರ ಕುರಿತು DV Research ನಡೆಸಿದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ.

DV Research ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 36-44 ಸೀಟುಗಳಲ್ಲಿ ಜಯಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಪಡೆಯಲಿದೆ. ದೆಹಲಿಯಲ್ಲಿ 26 ವರ್ಷಗಳಿಂದ ಬಿಜೆಪಿ ಅಧಿಕಾರ ಪಡೆದಿಲ್ಲ. ದಿ. ಸುಷ್ಮಾ ಸ್ವರಾಜ್ ರಾಜ್ಯದಲ್ಲಿ ಬಿಜೆಪಿಯ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ಸಮೀಕ್ಷೆಯ ಪ್ರಕಾರ ಆಮ್ ಆದ್ಮಿ ಪಕ್ಷ 26-34 ಸೀಟುಗಳಲ್ಲಿ ಜಯಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಮೂರನೇ ಬಾರಿಗೆ ಅಧಿಕಾರ ಪಡೆಯುವ ಪಕ್ಷದ ಕನಸು ನನಸಾಗುವುದಿಲ್ಲ. ಹಾಲಿ ಎಎಪಿ ದೆಹಲಿ, ಪಂಜಾಬ್‌ ರಾಜ್ಯದಲ್ಲಿ ಅಧಿಕಾರದಲ್ಲಿದೆ.

ದೆಹಲಿ ಚುನಾವಣೆಯಲ್ಲಿ ಬಿಜೆಪಿ, ಎಎಪಿ ನೇರ ಹಣಾಹಣಿ ಎಂದು ಅಂದಾಜಿಸಲಾಗಿದೆ. ಚುನಾವಣಾ ಪ್ರಚಾರದ ಸಮಯದಿಂದಲೇ ಕಾಂಗ್ರೆಸ್ ಹೋರಾಟದಲ್ಲಿ ಆಸಕ್ತಿ ಕಳೆದುಕೊಂಡಿತ್ತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರಿಯಾಗಿ ಪ್ರಚಾರ ನಡೆಸಲಿಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಬಳಿಕ ದೆಹಲಿ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಜೈಲುವಾಸ ಅನುಭವಿಸಿದ್ದರು. ಆಗಲೇ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಬಿಜೆಪಿ ಹೇಳಿತ್ತು.

ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು, ಬಿಡುಗಡೆಗೊಂಡ ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅತಿಶಿ ರಾಜ್ಯದ ಮುಖ್ಯಮಂತ್ರಿಯಾದರು. ಇದು ಚುನಾವಣೆಯಲ್ಲಿ ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರಕಟವಾಗಿರುವ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎಎಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಿವೆ.

ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಎಎಪಿ ಘೋಷಣೆ ಮಾಡಿತ್ತು. ಆದರೆ ಎಎಪಿಯನ್ನು ಜನರು ತಿರಸ್ಕಾರ ಮಾಡಲಿದ್ದಾರೆ ಎಂದು ಬಿಜೆಪಿ ಹೇಳಿತ್ತು. ಚುನಾವಣೋತ್ತರ ಸಮೀಕ್ಷೆಗಳು ಎಎಪಿ ಅಧಿಕಾರ ಕಳೆದುಕೊಳ್ಳಲಿವೆ ಎಂದು ಅಂದಾಜಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+