ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವಧಿಗೂ ಮೊದಲೇ ಲೋಕಸಭೆ ಚುನಾವಣೆ?

|
Google Oneindia Kannada News

ಬೆಂಗಳೂರು, ಫೆಬ್ರವರಿ 24 : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಸುವ ಪ್ರಸ್ತಾಪ ಜಾರಿಯಾಗುವ ಸಾಧ್ಯತೆ ಇದೆ. ಫೆಬ್ರವರಿ 28ರಂದು ನಡೆಯುವ ಬಿಜೆಪಿಯ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಆಡಳಿತದಲ್ಲಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಒಂದು ದೇಶ ಒಂದು ಚುನಾವಣೆಯ ನಿರ್ಧಾರಕ್ಕೆ ಸಿಎಂಗಳು ಬೆಂಬಲಿಸಲಿದ್ದಾರೆ.

ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿ

ಅವಧಿಗೂ ಮೊದಲೇ ಲೋಕಸಭೆ ಚುನಾವಣೆ ನಡೆಯುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಹ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದಾರೆ.

Early Lok Sabha polls may be a reality

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿಜೋರಾಂ ರಾಜ್ಯಗಳ ಚುನಾವಣೆ ಈ ವರ್ಷಾಂತ್ಯದಲ್ಲಿ ನಡೆಯಲಿದೆ. ಈ ಅವಧಿಯಲ್ಲಿಯೇ ಲೋಕಸಭೆ ಚುನಾವಣೆ ಸಹ ನಡೆಯುವ ಸಾಧ್ಯತೆ ಇದೆ.

ಮೂಲಗಳ ಮಾಹಿತಿ ಪ್ರಕಾರ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಗೆ ಸಿದ್ಧರಾಗುವಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಫೆ.28ರಂದು ಬಿಜೆಪಿಯ ಕಾರ್ಯಕಾರಣಿ ಸಭೆ ನಡೆಯಲಿದೆ. ಆಗ ಒಂದು ದೇಶ ಒಂದೇ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯದ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಈ ಸಭೆಯ ಬಳಿಕ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಚುನಾವಣಾ ಆಯೋಗಕ್ಕೂ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುತ್ತದೆ.

English summary
The concept of One Nation One Poll may become a reality as all the BJP Chief Ministers are likely to propose the same. The national general secretary of the BJP has written to all the CMs of the BJP ruled states arrive at a consensus on one nation one election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X