ಅರುಣಾಚಲ ಪ್ರದೇಶದಲ್ಲಿ 24 ಗಂಟೆಗಳಲ್ಲಿ ಎರಡನೇ ಭೂಕಂಪ

ಇಟಾನಗರ, ಜುಲೈ 20: ಕಳೆದ 24 ಗಂಟೆಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಭೂಮಿ ಕಂಪಿಸಿದೆ. ಭೂಕಂಪ ತೀವ್ರತೆ ರಿಕ್ಟರ್ ಮಾಪನದಲ್ಲಿ 5.5 ತೀವ್ರತೆ ದಾಖಲಾಗಿದೆ.

ಈಶಾನ್ಯ ರಾಜ್ಯದ ಅರುಣಾಚಲ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ 4.24ಕ್ಕೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಭೂಕಂಪನದ ಕೇಂದ್ರ ಬಿಂದು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಭಾಗದಲ್ಲಿನ 64ಕಿಲೋ ಮೀಟರ್ ಆಳದಲ್ಲಿ ಸಂಭವಿಸಿರುವುದಾಗಿ ಭೂಗರ್ಭಶಾಸ್ತ್ರ ತಜ್ಞರು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

Earthquake hits Arunachal Pradesh on Saturday

ವರದಿ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5,5ರಷ್ಟು ತೀವ್ರತೆ ದಾಖಲಾಗಿದೆ. ಅಲ್ಲದೇ ಗುವಾಹಟಿ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗದಲ್ಲಿ ಭೂಕಂಪನ ಸಂಭವಿಸಿದೆ ಎಂದು ತಿಳಿಸಿದೆ.

ಶುಕ್ರವಾರವೂ ಕೂಡ ಇದೇ ಪ್ರದೇಶದಲ್ಲಿ ಭೂಮಿ ಕಂಪಿಸಿತ್ತು ಭೂಕಂಪ ತೀವ್ರತೆ 5.5 ವರದಿಯಾಗಿತ್ತು. ಅಸ್ಸಾಂ ಅರುಣಾಚಲ ಪ್ರದೇಶದಲ್ಲಿ ಪ್ರವಾಹವೂ ಕೂಡ ಇದ್ದು ಅಲ್ಲಿನ ಜನತೆ ತೊಂದರೆಗೀಡಾಗಿದ್ದಾರೆ. ಒಂದೆಡೆ ಪ್ರವಾಹ, ನೀರು ಬೇರೆ ಪ್ರದೇಶಗಳಿಗೆ ಸ್ಥಳಾಂತರ ಅಲ್ಲಿನ ಜನತೆ ಜೀವನ ಅಕ್ಷರಶಃ ನರಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+