ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಿಮಾಚಲ ಪ್ರದೇಶದ ಧರ್ಮಶಾಲಾ ಪ್ರದೇಶದಲ್ಲಿ ಕಂಪಿಸಿದ ಭೂಮಿ

|
Google Oneindia Kannada News

ಶಿಮ್ಲಾ ಜನವರಿ 14: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 5:17ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಭೂಕಂಪದ ಆಳ 5 ಕಿಮೀ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

"ಹಿಮಾಚಲ ಪ್ರದೇಶದ ರಾಷ್ಟ್ರೀಯ ಭೂಕಂಪನಶಾಸ್ತ್ರದ ಪ್ರಕಾರ, ಇಂದು (14-01-2023) 3.2 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ. ಲ್ಯಾಟ್: 32.25 & ಉದ್ದ: 76.56, ಆಳ: 5 ಕಿಮೀ, ಸ್ಥಳ: ಧರ್ಮಶಾಲಾದಿಂದ 22 ಕಿಮೀ ದೂರ" ಟ್ವೀಟ್‌ನಲ್ಲಿ ಹಂಚಿಕೊಳ್ಳಲಾಗಿದೆ.

Earthquake: Earthquake in Dharamsala area of Himachal Pradesh

ಜೋಶಿಮಠ ಭೂಕುಸಿತ

ಹಿಮಾಚಲ ಪ್ರದೇಶದಲ್ಲಿ ಭೂಕಂಪವಾದರೆ ಉತ್ತರಖಂಡದಲ್ಲಿ ಜೋಶಿಮಠ ದಿನದಿಂದ ದಿನಕ್ಕೆ ನೆಲಕ್ಕಚ್ಚುತ್ತಿದೆ. ಜೋಶಿಮಠದಲ್ಲಿ ಭಾರೀ ಭೂಕುಸಿತದಿಂದಾಗಿ ನೂರಾರು ಮನೆಗಳು ಬೃಹತ್ ಗಾತ್ರದಲ್ಲಿ ಬಿರುಕು ಬಿಟ್ಟಿವೆ. ಹೀಗಾಗಿ ಹಲವಾರು ಜನರನ್ನು ಸ್ಥಳಾಂತರಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ರಾಷ್ಟ್ರೀಯ ದೂರಸಂವೇದಿ ಕೇಂದ್ರ (ಎನ್‌ಆರ್‌ಎಸ್‌ಸಿ) ಜೋಶಿಮಠದ ಉಪಗ್ರಹ ಚಿತ್ರಗಳು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ಇದು ಇಡೀ ಪಟ್ಟಣ ಮುಳುಗಬಹುದು ಎಂದು ತೋರಿಸುತ್ತದೆ. ಇದರಿಂದಾಗಿ ಜೋಶಿಮಠದ ಸ್ಥಳೀಯರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ವರದಿಯ ಪ್ರಕಾರ, ಏಪ್ರಿಲ್ ಮತ್ತು ನವೆಂಬರ್ 2022 ರ ನಡುವೆ ಭೂಮಿಯ ಕುಸಿತವು ನಿಧಾನವಾಗಿತ್ತು. ಈ ಸಮಯದಲ್ಲಿ ಜೋಶಿಮಠವು 8.9 ಸೆಂ.ಮೀ ಮುಳುಗಿದೆ. ಆದರೆ ಡಿಸೆಂಬರ್ 27, 2022 ಮತ್ತು ಜನವರಿ 8, 2023 ರ ನಡುವೆ ಭೂಮಿಯ ಕುಸಿತದ ತೀವ್ರತೆ ಹೆಚ್ಚಾಗಿದೆ. ಈ 12 ದಿನಗಳಲ್ಲಿ ಜೋಶಿಮಠ 5.4 ಸೆಂ.ಮೀ. ವರೆಗೂ ಮುಳುಗಿದೆ.

English summary
A mild earthquake measuring 3.2 magnitude struck Himachal Pradesh's Chamba district on Saturday morning, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X