Breaking: ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ

ಮುಂಬೈ, ಆಗಸ್ಟ್‌ 26: ಗುರುವಾರ ರಾತ್ರಿ ಮತ್ತು ಶುಕ್ರವಾರ ಮುಂಜಾನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಹಾಗೂ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಗುರುವಾರ ಮತ್ತು ಶುಕ್ರವಾರ ಮುಂಜಾನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಶುಕ್ರವಾರ ಮುಂಜಾನೆ 02.21 ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 10 ಕಿ.ಮೀ. ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಪೂರ್ವಕ್ಕೆ 171 ಕಿಮೀ ದೂರದಲ್ಲಿ ಮುಂಜಾನೆ 2.21ರ ಸುಮಾರಿಗೆ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 10 ಕಿಮೀ ಆಳದಲ್ಲಿದೆ ಎಂದು ಎನ್‌ಸಿಎಸ್ ಟ್ವೀಟ್ ಮಾಡಿದೆ.

Earthquake in Maharashtras Kolhapur and jammu Kashmirs Katra

ಇದಕ್ಕೂ ಮುನ್ನ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಗುರುವಾರ ಮಧ್ಯಾಹ್ನ 12.04ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿತ್ತು. ಆಗಸ್ಟ್ 25ರಂದು ಸಂಭವಿಸಿದ ಭೂಕಂಪ 3.4 ತೀವ್ರತೆ ಹೊಂದಿತ್ತು. ಇದು ಸ್ಥಳೀಯ ಕಾಲಮಾನ ಮುಂಜಾನೆ 05:22 ಸಂಭವಿಸಿದೆ. ಇದರ ಲ್ಯಾಟ್ 16.80 ಮತ್ತು ಉದ್ದ 75.85, ಆಳ: 5 ಕಿಮೀ ಕೊಲ್ಲಾಪುರ್, ಮಹಾರಾಷ್ಟ್ರ ಎನ್‌ಇಎಸ್‌ ಟ್ವೀಟ್ ಮಾಡಿದೆ.

ಹಾಗೆಯೇ ಗುರುವಾರ ಮತ್ತು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಶುಕ್ರವಾರ 03.28ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ.

Earthquake in Maharashtras Kolhapur and jammu Kashmirs Katra

ಆಗಸ್ಟ್‌ 26ರಂದು ಸಂಭವಿಸಿದ ಭೂಕಂಪನದ ತೀವ್ರತೆಯು 3.4 ಆಗಿತ್ತು. ಇದು ಸ್ಥಳೀಯ ಕಾಲಮಾನ 3:28ಕ್ಕೆ ಉಂಟಾಗಿತ್ತು. ಭೂಕಂಪದ ಉದ್ದ: 75.57, ಆಳ: 5 ಕಿಮೀ, ಕತ್ರಾ, ಜಮ್ಮು ಮತ್ತು ಕಾಶ್ಮೀರ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ.

ಬುಧವಾರ ರಾತ್ರಿಯೂ ಒಂದು ಗಂಟೆಯ ಅಂತರದಲ್ಲಿ ರಿಕ್ಟರ್ ಮಾಪಕದಲ್ಲಿ 3.2 ಮತ್ತು 4.1 ರ ತೀವ್ರತೆಯ ಎರಡು ಭೂಕಂಪಗಳು ಜಮ್ಮು ಮತ್ತು ಕಾಶ್ಮೀರದ ಕತ್ರಾವನ್ನು ಅಪ್ಪಳಿಸಿದವು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ. ಎರಡನೇ ಭೂಕಂಪ ಬುಧವಾರ ರಾತ್ರಿ 11:52ಕ್ಕೆ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿದೆ.

ಆಗಸ್ಟ್ 24 ರಂದು ರಾತ್ರಿ 11:52 ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಿಂದ 60 ಕಿಮೀ ದೂರದಲ್ಲಿ 3.2 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ನೆಲದಿಂದ 5 ಕಿಮೀ ಆಳದಲ್ಲಿತ್ತು ಎಂದು ಎನ್‌ಸಿಎಸ್ ಟ್ವೀಟ್ ಮಾಡಿದೆ. ಇದಕ್ಕೂ ಮುನ್ನ ಬುಧವಾರ ರಾತ್ರಿ 11:04 ಗಂಟೆಗೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+