Breaking: ನೇಪಾಳದಲ್ಲಿ ಕಂಪಿಸಿದ ಭೂಮಿ: ದೆಹಲಿ-ಎನ್‌ಸಿಆರ್‌ನಲ್ಲೂ ಭೂ ಕಂಪನದ ಅನುಭವ
ಮಂಗಳವಾರ ಮಧ್ಯಾಹ್ನ ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿ ಭೂಕಂಪವಾಗಿದ್ದು ದೆಹಲಿಯಲ್ಲೂ ಭೂ ಕಂಪನದ ಅನುಭವವಾಗಿದೆ.
ಮಂಗಳವಾರ ಮಧ್ಯಾಹ್ನ ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿ ಭೂಕಂಪವಾಗಿದ್ದು ದೆಹಲಿಯಲ್ಲೂ ಭೂ ಕಂಪನದ ಅನುಭವವಾಗಿದೆ. ಭೂಕಂಪ ಸಂಭವಿಸಿದ ತಕ್ಷಣ ಭೂಮಿ ಕಂಪಿಸಲಾರಂಭಿಸಿದ್ದು, ಜನರು ಗಾಬರಿಗೊಂಡು ಮನೆಯಿಂದ ಹೊರಬಂದಿದ್ದಾರೆ. ಈ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.
ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದುವನ್ನು ನೇಪಾಳದಲ್ಲಿ ಗುರುತಿಸಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.8 ಆಗಿದೆ. "ಭೂಕಂಪನ ತೀವ್ರತೆ: 5.8, 24-01-2023 ರಂದು ಸಂಭವಿಸಿದೆ. ಲ್ಯಾಟ್: 29.41 ಮತ್ತು ಉದ್ದ: 81.68, ಆಳ: 10 ಕಿಮೀ, ಸ್ಥಳ: ನೇಪಾಳ," ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಟ್ವೀಟ್‌ನಲ್ಲಿ ತಿಳಿಸಿದೆ.

ಈ ಹಿಂದೆ ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ ದೆಹಲಿ-NCRನಲ್ಲಿ ಭೂಕಂಪನದ ಅನುಭವವಾಗಿತ್ತು. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.8 ರಷ್ಟು ದಾಖಲಾಗಿತ್ತು. ಭೂಮಿ ಕಂಪಿಸಿದ್ದರಿಂದ ಹೊಸ ವರ್ಷದ ಸಂಭ್ರಮದಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿಯೂ ಭೂಕಂಪನದ ಅನುಭವವಾಗಿದೆ. ಈವರೆಗೆ ಯಾವುದೇ ಸ್ಥಳದಿಂದ ಪ್ರಾಣ ಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಬಂದಿಲ್ಲ.












Click it and Unblock the Notifications