ಅಸ್ಸಾಂ ನಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲು
ಕೊಕ್ರಜಾರ್, ಜನವರಿ 20: ಅಸ್ಸಾಂನ ಕೊಕ್ರಜಾರ್ ನಲ್ಲಿ ಇಂದು(ಜ.20) ಬೆಳಿಗ್ಗೆ 6.44 ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈಶಾನ್ಯ ರಾಜ್ಯಗಳಲ್ಲಿ ಇತ್ತೀಚೆಗೆ ಭೂಕಂಪ ಪದೇ ಪದೇ ಸಂಭವಿಸುತ್ತಿದ್ದು, ಇಲ್ಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ.
ಜ.7ರಂದು ಮಣಿಪುರದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿ ಜನರಲ್ಲಿ ನಡುಕ ಹುಟ್ಟಿಸಿತ್ತು.
ಜನವರಿ 4, 2016ರಲ್ಲಿ 6.7 ತೀವ್ರತೆಯ ಭೂಕಂಪ ಮಣಿಪುರದಲ್ಲಿ ಸಂಭವಿಸಿತ್ತು. ಈ ಭೂಕಂಪದಲ್ಲಿ 11 ಜನ ಸಾವನ್ನಪ್ಪಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications