ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂನಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 5.5 ತೀವ್ರತೆ ದಾಖಲು

|
Google Oneindia Kannada News

ಅಸ್ಸಾಂ, ಸೆಪ್ಟೆಂಬರ್ 12: ಅಸ್ಸಾಂನಲ್ಲಿ ಇಂದು(ಸೆ.12)ರಂದು ಬೆಳಗ್ಗೆ 10.20 ಸುಮಾರಿಗೆ ಭೂಕಂಪ ಸಂಭವಿಸಿದೆ.ರಿಕ್ಟರ್ ಮಾಪನದಲ್ಲಿ 5.5 ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ: ಮೃತರ ಸಂಖ್ಯೆ 82 ಕ್ಕೆ ಏರಿಕೆ ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ: ಮೃತರ ಸಂಖ್ಯೆ 82 ಕ್ಕೆ ಏರಿಕೆ

ಸುಮಾರು 10 ಸೆಕೆಂಡುಗಳ ಕಾಲ ಭೂಮಿ ನಡುಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಜಮ್ಮು ಕಾಶ್ಮೀರದಲ್ಲೂ ಭೂಕಂಪವಾದ ವರದಿಯಾಗಿತ್ತು, ಹರ್ಯಾಣದಲ್ಲಿ ಬೆಳಗ್ಗೆ 5.43ಕ್ಕೆ ಸಂಭವಿಸಿದ ಭೂಕಂಪನದ ಪ್ರಮಾಣ ರಿಕ್ಟರ್ ಮಾಪನದಲ್ಲಿ 3.1ರಷ್ಟಿತ್ತು.

ಮಣಿಪುರದಲ್ಲಿ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಮಣಿಪುರದಲ್ಲಿ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ

Earthquake measuring 5.5 hits Assam, tremors felt in West Bengal

ಈಶಾನ್ಯ ರಾಜ್ಯಗಳಲ್ಲಿ ಇತ್ತೀಚೆಗೆ ಭೂಕಂಪ ಪದೇ ಪದೇ ಸಂಭವಿಸುತ್ತಿದ್ದು, ಇಲ್ಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ. ಅಸ್ಸಾಂನ ಕೊಕ್ರೆಜಾರ್ ನಲ್ಲಿ ಜನವರಿಯಲ್ಲಿ ಬೆಳಗ್ಗೆ 6.44ರ ಸುಮಾರಿಗೆ 5.2 ತೀವ್ರತೆಯ ಭೂಕಂಪ ಸಂಭವಿಸಿ ಜನರಲ್ಲಿ ನಡುಕ ಹುಟ್ಟಿಸಿತ್ತು, ಈ ಬಾರಿಯ ಭೂಕಂಪ ಕೊಕ್ರೇಜಾರ್ ನಿಂದ 11 ಕಿ.ಮೀ ದೂರದಲ್ಲಿ ಸಂಭವಿಸಿದೆ.

English summary
Earthquake measuring 5.5 on the Richter scale hits parts of Assam. Tremors also felt in parts of West Bengal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X