ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ, 4.8 ತೀವ್ರತೆ ದಾಖಲು
ಪೋರ್ಟ್ ಬ್ಲೇರ್, ಮಾರ್ಚ್ 11: ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಗರ್ಭ ಅಧ್ಯಯನ ಕೇಂದ್ರ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 4.8ರಷ್ಟು ತೀವ್ರತೆ ದಾಖಲಾಗಿದೆ. ಅಂಡಮಾನ್-ನಿಕೋಬಾರ್ ದ್ವೀಪ ಸಮೂಹಗಳ ಸಮುದ್ರದ ನೀರಿನಲ್ಲಿ ಗಮನಾರ್ಹ ಏರಿಕೆ ಕಂಡುಬಂದಿಲ್ಲ. ಬೆಳಗ್ಗೆ 6.44ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ಫೆಬ್ರವರಿ 13ರಂದು ಬೆಳಗಿನ ಜಾವ 1.51ಕ್ಕೆ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.













Click it and Unblock the Notifications