ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈಶಾನ್ಯ ರಾಜ್ಯಗಳಲ್ಲಿ ಭೂಕಂಪ, 6.8ರಷ್ಟು ತೀವ್ರತೆ ದಾಖಲು

|
Google Oneindia Kannada News

ಬೆಂಗಳೂರು, ಜನವರಿ 04 : ಈಶಾನ್ಯ ರಾಜ್ಯಗಳಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ರಷ್ಟು ತೀವ್ರತೆ ದಾಖಲಾಗಿದೆ. ಅಸ್ಸಾಂ ರಾಜಧಾನಿ ಇಂಪಾಲದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 50ಕ್ಕೂ ಅಧಿಕ ಜನರು ಭೂಕಂಪದಿಂದಾಗಿ ಗಾಯಗೊಂಡಿದ್ದಾರೆ.

ಸೋಮವಾರ ಮುಂಜಾನೆ 4.35ರ ವೇಳೆಗೆ ಭೂಕಂಪನದ ಅನುಭವವಾಗಿದೆ. ಇಪಾಲದಿಂದ 33 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಅಸ್ಸಾಂ, ಬಿಹಾರ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ನಾಗಾಲ್ಯಾಂಡ್, ಮಣಿಪುರದಲ್ಲಿ ಭೂಮಿ ಕಂಪಿಸಿದೆ. [ಭೂಕಂಪದ ಅಸಲಿ ಕಾರಣ ಪತ್ತೆ ಹಚ್ಚಿದ ಮೌಲಾನಾ!]

earthquake

ಭೂಕಂಪದಿಂದಾಗಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಇಂಪಾಲದಲ್ಲಿ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಜನರು ಭೂ ಕಂಪದಿಂದಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. [ಚಿತ್ರಗಳಲ್ಲಿ: ನೇಪಾಳದಲ್ಲಿ ಭೂಕಂಪ, ಉತ್ತರ ಭಾರತ ತತ್ತರ]

ಮೋದಿ ಟ್ವಿಟ್ : ಅಸ್ಸಾಂ ಮುಖ್ಯಮಂತ್ರಿ ತುರಣ್ ಗೋಗಾಯ್ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭೂಕಂಪದ ಕುರಿತಾಗಿ ಚರ್ಚೆ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಅಸ್ಸಾಂನಲ್ಲಿದ್ದು, ಭೂಕಂಪದ ಪರಿಹಾರ ಕಾರ್ಯಗಳ ಉಸ್ತುವಾರಿಯನ್ನು ನೋಡಿಕೊಳ್ಳುವಂತೆ ಮೋದಿ ಸೂಚನೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿಯೂ ಭೂಮಿ ಕಂಪಿಸಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ಸಿಲಿಗುರಿಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

English summary
An earthquake of moderate intensity rocked India’s northeastern states on Monday, January 4, 2016 morning. The quake measuring 6.7 on the Richter Scale, occurred at 4.35 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X