Earthquake in Delhi : 5 ದಿನಗಳಲ್ಲಿ ಎರಡನೇ ಬಾರಿಗೆ ದೆಹಲಿಯಲ್ಲಿ ಭೂಕಂಪನ
ನವದೆಹಲಿ, ಜ. 05: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅಕ್ಕಪಕ್ಕದ ಪ್ರದೇಶಗಳಾದ ಅಫ್ಘಾನಿಸ್ತಾನದಲ್ಲಿ ಭೂಕಂಪನದ ಅನುಭವವಾಗಿದೆ.
ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ ಒಂದು ವಾರದಲ್ಲಿ ಎರಡನೇ ಬಾರಿಗೆ ದೆಹಲಿ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.
ಭೂಕಂಪನವು ಭೂಮಿಯ ಮೇಲ್ಮೈಯಿಂದ 200 ಕಿಮೀ ಆಳದಲ್ಲಿದೆ. ರಾತ್ರಿ 8 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಯಾವುದೇ ಗಾಯ ಅಥವಾ ಹಾನಿಯಾಗಿರುವ ವರದಿಯಾಗಿಲ್ಲ.
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ನವದೆಹಲಿ ಸೇರಿದಂತೆ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವರು ಮಾಹಿತಿ ಹಂಚಿಕೊಂಡಿದ್ದಾರೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಬಲವಾದ ಕಂಪನವು ಕಂಡುಬಂದರೆ, ಇಸ್ಲಾಮಾಬಾದ್, ವಾಯುವ್ಯ ಪಾಕಿಸ್ತಾನದ ಕೆಲವು ಭಾಗಗಳು ಮತ್ತು ನವದೆಹಲಿಯಲ್ಲೂ ಭೂಕಂಪನದ ಅನುಭವವಾಗಿದೆ ಎಂದು ರಾಯಿಟರ್ಸ್ ತಿಳಿಸಿದೆ.
ಇದಕ್ಕೂ ಮೊದಲು, ಭಾನುವಾರ ಮುಂಜಾನೆ ದೆಹಲಿ - ಎನ್‌ಸಿಆರ್‌ನಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಇದಕ್ಕೂ ಮುನ್ನ ನವೆಂಬರ್ 12 ರಂದು ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನದ ಅನುಭವವಾಯಿತು. ಎನ್‌ಸಿಎಸ್ ಪ್ರಕಾರ, ನವೆಂಬರ್ 12 ರ ನೇಪಾಳದಲ್ಲಿ ರಾತ್ರಿ 7:57 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.4 ಆಗಿತ್ತು. ಭೂಕಂಪದ ಆಳವು ಭೂಮಿಯಿಂದ 10 ಕಿ.ಮೀ ಆಳದಲ್ಲಿದೆ ಎಂದು ಎನ್‌ಸಿಎಸ್ ತಿಳಿಸಿದೆ.












Click it and Unblock the Notifications