ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಉದ್ಯಮವೀಗ ಹಿಂದೆಂದಿಗಿಂತಲೂ ಸುಲಭ : ಮೋದಿ

By Sachhidananda Acharya
|
Google Oneindia Kannada News

ನವದೆಹಲಿ, ನವೆಂಬರ್ 3: ಭಾರತದಲ್ಲಿ ಈಗ ಉದ್ಯಮ ನಡೆಸುವುದು ಹಿಂದೆಂದಿಗಿಂತಲೂ ಸುಲಭ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ನಾಟಕದ ಅಭಿವೃದ್ಧಿ ಅಳೆಯುವಲ್ಲಿ ಸೋತ ಮೋದಿ?ಕರ್ನಾಟಕದ ಅಭಿವೃದ್ಧಿ ಅಳೆಯುವಲ್ಲಿ ಸೋತ ಮೋದಿ?

ವಿಶ್ವಬ್ಯಾಂಕ್ ಪ್ರಕಟಿಸಿದ್ದ ಉದ್ಯಮ ಸ್ನೇಹಿ ವಾತಾವರಣ ಇರುವ ದೇಶಗಳಲ್ಲಿ ಭಾರತ 30 ಸ್ಥಾನ ಮೇಲಕ್ಕೇರಿ ಇದೇ ಮೊದಲ ಬಾರಿಗೆ 100ನೇ ಸ್ಥಾನ ತಲುಪಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಈ ಮಾತು ಹೇಳಿದ್ದಾರೆ.

'ಹಿಂದಿ' ಖಿಚಡಿಗೆ ಉಪ್ಪಿಟ್ಟು, ಚಿತ್ರಾನ್ನ ಭಾರೀ ಪೈಪೋಟಿ! 'ಹಿಂದಿ' ಖಿಚಡಿಗೆ ಉಪ್ಪಿಟ್ಟು, ಚಿತ್ರಾನ್ನ ಭಾರೀ ಪೈಪೋಟಿ!

Easier to do business in India than ever before, says PM

ಭಾರತದ ಆರ್ಥಿಕತೆ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಜಿಎಸ್ಇ ಜಾರಿಯಿಂದ ಪದೇ ಪದೇ ತೆರಿಗೆ ಪಾವತಿಸುವ ಪದ್ಧತಿ ಇಲ್ಲವಾಗಿದೆ ಎಂದು ಹೇಳಿದರು.

ವರ್ಲ್ಡ್ ಫುಡ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ವಿದೇಶಿ ಕಂಪೆನಿಗಳನ್ನು ಆಹ್ವಾನಿಸಿದರು. ಭಾರತದಲ್ಲಿ ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಟಾವಿನ ನಂತರದ ಸಂಸ್ಕರಣೆ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಸಾವಯವ ಆಹಾರಗಳ ಮೌಲ್ಯವರ್ಧನೆಗೂ ಅವಕಾಶಗಳಿವೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಸರಕಾರ ಮುಂದಿನ ಐದು ವರ್ಷದಲ್ಲಿ ರೈತರ ಆದಾಯವನ್ನು ಎರಡು ಪಟ್ಟು ವೃದ್ಧಿಗೊಳಿಸುವ ಗುರಿ ಹೊಂದಿದೆ ಎಂದು ಮೋದಿ ಇದೇ ಸಂದರ್ಭದಲ್ಲಿ ಹೇಳಿದರು.

English summary
Prime Minister Narendra Modi today asserted that it is now easier to do business in India than ever before after the country leaped 30 places to break into top 100 nations worldwide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X