• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಛೇ..ಪಶುಸಂಗೋಪನಾ ಸಚಿವರ ಬಾಯಲ್ಲಿ ಇಂದೆಂಥಾ ಮಾತು

|
Google Oneindia Kannada News

ಶಿಲ್ಲಾಂಗ್, ಜುಲೈ 31: ಕುರಿ, ಕೋಳಿ, ಮೀನಿನ ಮಾಂಸಕ್ಕಿಂತ ಹೆಚ್ಚು ಗೋಮಾಂಸವನ್ನು ಸೇವಿಸುವಂತೆ ಮೇಘಾಲಯ ಸಚಿವ ಸಣ್ಬೂರ್ ಶುಲ್ಲೈ ಹೇಳಿಕೆ ನೀಡಿ ಹೊಸ ವಿವಾದ ಸೃಷ್ಟಿಸಿಕೊಂಡಿದ್ದಾರೆ. ಪಶುಸಂಗೋಪನಾ ಸಚಿವರ ಬಾಯಲ್ಲೇ ಇಂತಹ ಮಾತು ಬಂದಿರುವುದಕ್ಕೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧ ಮಾಡಲು ಮುಂದಾಗಿದ್ದರೆ, ಇನ್ನೊಂದೆಡೆ ಬಿಜೆಪಿ ಸಚಿವರೇ ವಿವಾದ ಸೃಷ್ಟಿಸಿಕೊಳ್ಳುತ್ತಿದ್ದಾರೆ.

ಆದರೆ ಇನ್ನೊಂದೆಡೆ ಬಿಜೆಪಿ ಸಚಿವರು ನೀಡಿರುವ ಹೇಳಿಕೆಗಳು ಸಾಕಷ್ಟು ವಿವಾದವನ್ನು ಸೃಷ್ಟಿಸುತ್ತಿದೆ. ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಮೇಘಾಲಯ ಸಚಿವ ಸಣ್ಬೂರ್‌ ಶುಲ್ಲೈ ಹೇಳಿದ್ದಾರೆ.

ಮೇಘಾಲಯದ ಬಿಜೆಪಿ ಹಿರಿಯ ನಾಯಕ ಹಾಗೂ ಸ್ವತಃ ಪಶು ಸಂಗೋಪನೆ ಮತ್ತು ಪಶು ವೈದ್ಯ ಖಾತೆ ಸಚಿವರಾಗಿರುವ ಸಣ್ಬೂರ್‌ ಶುಲ್ಲೈ ಅವರು, ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಕರೆ ನೀಡಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿರುವ ಪ್ರತಿಯೊಬ್ಬರೂ, ತಮಗೆ ಇಷ್ಟವಾದ ಆಹಾರವನ್ನು ಸೇವಿಸಲು ಸ್ವತಂತ್ರರು. ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದೆ ಎಂದು ಹೇಳಿದರು.

ಅಲ್ಲದೆ ನೆರೆಯ ರಾಜ್ಯ ಅಸ್ಸಾಂನಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಆ ಹೊಸ ಕಾನೂನಿಂದ ಮೇಘಾಲಯಕ್ಕೆ ಜಾನುವಾರ ಸಾಗಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದರು.

ನಮ್ಮ ಜನರನ್ನು ರಕ್ಷಿಸುವ ಮನೋಭಾವ ನಮ್ಮಲ್ಲಿರಬೇಕು, ನಾವು ನಮ್ಮ ಬಲವನ್ನು ಬಳಸಿಕೊಳ್ಳಬೇಕು. ಅಸ್ಸಾಂ ಪೊಲೀಸರೊಂದಿಗೆ ಮಾತನಾಡಲು ಪೊಲೀಸರು ಮುಂದಕ್ಕೆ ಬರಬೇಕು ಎಂದು ಹೇಳಿದರು.

ಇದೇ ವೇಳೆ ಮೇಘಾಲಯ ಮತ್ತು ಅಸ್ಸಾಂ ನಡುವಿನ ಗಡಿ ವಿವಾದದ ಬಗ್ಗೆ ಮಾತನಾಡಿದ ಅವರು, ಗಡಿ ಮತ್ತು ಜನರನ್ನು ರಕ್ಷಿಸಲು ರಾಜ್ಯವು ತನ್ನ ಪೊಲೀಸ್ ಪಡೆಯನ್ನು ಬಳಸಿಕೊಳ್ಳುವ ಸಮಯ ಬಂದಿದೆ. ಅಸ್ಸಾಂನ ಜನರು ಗಡಿ ಪ್ರದೇಶದಲ್ಲಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದರೆ, ನಾವು ಪ್ರತಿಕ್ರಿಯಿಸಬೇಕು, ಮತ್ತು ಸ್ಥಳದಲ್ಲೇ ತಿರುಗೇಟು ನೀಡಬೇಕು.

ಕಳೆದ ವಾರವಷ್ಟೇ ಬಿಜೆಪಿಯ ಹಿರಿಯ ನಾಯಕ ಶುಲ್ಲೈ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಬಳಿಕ ಅವರಿಗೆ ಪಶು ಸಂಗೋಪನೆ ಮತ್ತು ಪಶು ವೈದ್ಯ ಖಾತೆ ನೀಡಲಾಗಿತ್ತು.

ತಿರಸ್ಕಾರಗೊಂಡಿದ್ದ ಕಾಯ್ದೆ :
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಗೋ ಸಂಪತ್ತಿನ ಸಂರಕ್ಷಣೆ ಸಂಬಂಧ 1964ರ ಗೋ ಹತ್ಯೆ ನಿಷೇಧ ಕಾಯ್ದೆಗೆ ಸಣ್ಣ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ,ಆದೇಶಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಲು ನಿರಾಕರಿಸಿತ್ತು.

ಕರ್ನಾಟಕ ಗೋ ಹತ್ಯೆ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ 2010ರ ಅನುಗುಣದಂತೆ ಹಸು, ಎತ್ತೆ, ಕೋಣ ಸೇರಿದಂತೆ ರಾಸುಗಳ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿತ್ತು. ಆರೋಪಿಗಳಿಗೆ ಜಾಮೀನು ರಹಿತ ಸಜೆ ನೀಡಲಾಗುತ್ತದೆ.

ರಾಜ್ಯ ಸರ್ಕಾರ ಇದರಲ್ಲಿ ಸಣ್ಣ ತಿದ್ದುಪಡಿ ತಂದಿದ್ದು ಕಾಯ್ದೆಯಲ್ಲಿನ ಸೆಕ್ಷನ್ (2) ರಲ್ಲಿನ ಗೋವು ಉಲ್ಲೇಖ ಆದ ಮೇಲೆ ಸೆಕ್ಷನ್ (2) ಬಿ ಯಲ್ಲಿ ಬುಲ್ ಮತ್ತು ಬುಲಕ್ ಎಂದು ಸೇರಿಸಲಾಗಿತ್ತು.

2008ರ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಅದರಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ವಿಧೇಯಕಕ್ಕೆ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.

ಆದರೆ, ರಾಜ್ಯಪಾಲರು ವಿಧೇಯಕ್ಕೆ ಅಂಕಿತ ಹಾಕುವ ಬದಲಿಗೆ ವಿಧೇಯಕವನ್ನು ರಾಷ್ಟ್ರಪತಿ ಗಳಿಗೆ ರವಾನಿಸಿದ್ದರು. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ, ಕರ್ನಾಟಕ ಪ್ರಾಣಿ ವಧೆ ನಿರ್ಮೂಲನ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕದ ವ್ಯಾಪ್ತಿ ಯಿಂದ ಎಮ್ಮೆಗಳು, ಎಮ್ಮೆಗಳ ಕರುಗಳು ಮತ್ತು ಇತರೆ ಜಾನುವಾರುಗಳನ್ನು ಕೈಬಿಟ್ಟು ವಿಧೇಯಕಕ್ಕೆ ಸಣ್ಣ ತಿದ್ದುಪಡಿ ತರುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

1964ರ ಕರ್ನಾಟಕ ಗೋಹತ್ಯೆ ನಿಷೇಧ ವಿಧೇಯಕಕ್ಕೆ ತಿದ್ದುಪಡಿ ತರುವ ಸಲುವಾಗಿ 2009ರಲ್ಲಿ ಅಂದಿನ ಗೃಹ ಸಚಿವ ಡಾ.ವಿ.ಎಸ್. ಆಚಾರ್ಯ, ಅವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿ ವಿವಿಧ ರಾಜ್ಯಗಳ ಗೋಹತ್ಯೆ ನಿಷೇಧ ವಿಧೇಯಕದಲ್ಲಿನ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ರೂಪಿಸಿದ್ದ ಕರಡು ನೀತಿಯ ಬಗ್ಗೆ ಚರ್ಚಿಸಿ ಸಿದ್ಧಪಡಿಸಿದ್ದ ಕರಡು ಪತ್ರಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು.

English summary
BJP minister in the Meghalaya government Sanbor Shullai encouraged the people of the state to eat more beef than chicken, mutton and fish, dispelling the apprehension that his party was against it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X