ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ಪಂಪ್‌ಗಳಿಂದ ಪ್ರಧಾನಿ ಮೋದಿ ಫೋಟೊ ತೆರವಿಗೆ ಚುನಾವಣಾ ಆಯೋಗ ಸೂಚನೆ

|
Google Oneindia Kannada News

ನವದೆಹಲಿ, ಮಾರ್ಚ್ 3: ಪೆಟ್ರೋಲ್ ಪಂಪ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊವನ್ನು ಒಳಗೊಂಡ ಫಲಕಗಳನ್ನು 72 ಗಂಟೆಗಳ ಒಳಗೆ ತೆರವುಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜಾಹೀರಾತು ನೀಡುವಂತೆ ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊಗಳು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆಯೋಗ ಹೇಳಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಪುದುಚೆರಿ ಮತ್ತು ಅಸ್ಸಾಂಗಳಿಗೆ ಕಳೆದ ಶುಕ್ರವಾರ ಚುನಾವಣಾ ಆಯೋಗ ಚುನಾವಣೆ ಘೋಷಿಸಿತ್ತು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿತ್ತು.

EC Asks Petrol Pumps To Remove Hoardings With PM Modis Photos Within 72 Hours

ಕೋವಿಡ್ ಲಸಿಕೆ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಾಗೂ ವಿಡಿಯೋಗಳನ್ನು ಬಳಕೆ ಮಾಡುತ್ತಿರುವುದರ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಅದರ ಬೆನ್ನಲ್ಲೇ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊಗಳನ್ನು ಲಸಿಕೆ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳಿಂದ 72 ಗಂಟೆಗಳ ಒಳಗೆ ತೆರವುಗೊಳಿಸುವಂತೆಯೂ ಆಯೋಗ ಸೂಚನೆ ನೀಡಿದೆ.

English summary
Election Commission asked petrol pumps to remove hoarding with PM Narendra Modi's photos within 72 hours as they violates model code of conduct. ಪೆಟ್ರೋಲ್ ಪಂಪ್‌ಗಳಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊಗಳಿರುವ ಫಲಕಗಳನ್ನು ತೆರವುಗೊಳಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X