ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಜೆ 4 ಗಂಟೆಗೆ ವಿತ್ತಸಚಿವೆ ನಿರ್ಮಲಾರಿಂದ ಆರ್ಥಿಕ ಪ್ಯಾಕೇಜ್ ಘೋಷಣೆ

|
Google Oneindia Kannada News

ನವದೆಹಲಿ, ಮೇ 13: ಭಾರತದಲ್ಲಿ ಕೊರೊನಾವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಘೋಷಣೆಯಾದ ಬಳಿಕ 5ನೇ ಬಾರಿಗೆ ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮೇ 12ರಂದು ಮಹತ್ವದ ಘೋಷಣೆ ಮಾಡಿದರು.

ನೊವೆಲ್ ಕೊರನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತೀಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದರು. ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗೆ ಇದರಿಂದ ಲಾಭವಾಗಲಿದೆ ಎಂದಿದ್ದಾರೆ.

ಭಾರತೀಯರಿಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಮಂತ್ರಿ!ಭಾರತೀಯರಿಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಮಂತ್ರಿ!

ಪ್ರಧಾನಿ ಘೋಷಿಸಿದ ಪ್ಯಾಕೇಜ್ ಯಾರಿಗೆ ಹೇಗೆ ತಲುಪಲಿದೆ ಎಂಬುದನ್ನು ಮೇ 13ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಸ್ತರಿಸಿ ತಿಳಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡ್ ಕ್ರಿಯೇಟ್ ಮಾಡಿರುವ ಗ್ಲೋಬಲ್ ಬ್ರಾಂಡ್ ಗಳೆಲ್ಲವೂ ಆರಂಭಿಕ ಹಂತದಲ್ಲಿ ಲೋಕಲ್ ಆಗಿದ್ದವು. ಭಾರತದಲ್ಲಿ ಕೂಡಾ ಸ್ವದೇಶಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು.

Finance Minister Nirmala Sitharaman to Address Media at 4 PM on Economic Package

ಈ ನಿಟ್ಟಿನಲ್ಲಿ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ಕಾರ್ಮಿಕರು, ರೈತರು, ಶ್ರಮಿಕರು, ಸಣ್ಣ ಉದ್ದಿಮೆಗಳಿಗೆ ನೆರವಾಗಲಿದೆ. ಸಂಘಟಿತ ಮತ್ತು ಅಸಂಘಟಿತ ವಲಯಗಳಿಗೆಲ್ಲ ಆರ್ಥಿಕ ಪ್ಯಾಕೇಜ್ ಪೂರಕವಾಗಲಿದೆ. ಬಡವರು, ಕಾರ್ಮಿಕರು, ವಲಸೆ ಕಾರ್ಮಿಕರು ಹೀಗೆ ಎಲ್ಲ ವರ್ಗದವರಿಗೂ ಸಿಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹೀಗಾಗಿ, ಹೆಚ್ಚೆಚ್ಚು ಮೇಕ್ ಇನ್ ಇಂಡಿಯಾ ಉತ್ಪನ್ನ ತಯಾರಿಕೆ, ಬೇಡಿಕೆ ಪೂರೈಕೆ ಸಮತೋಲನ ಹೀಗೆ ಎಲ್ಲಾ ವರ್ಗಕ್ಕೆ ಸಲ್ಲುವಂತೆ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ.

English summary
Union Finance Minister Nirmala Sitharaman to address the media at 4 pm today. #EconomicPackage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X