Economic Survey 2026: ಆರ್ಥಿಕ ಸಮೀಕ್ಷೆ ವರದಿ ಮಂಡನೆ; 2026-27ರಲ್ಲಿ ಭರ್ಜರಿ 7.2% ಜಿಡಿಪಿ ಬೆಳವಣಿಗೆಯ ನಿರೀಕ್ಷೆ
ನವದೆಹಲಿ: ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಜನವರಿ 29, ಗುರುವಾರದಂದು ಲೋಕಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಆರ್ಥಿಕ ಸಮೀಕ್ಷೆಯ ಪ್ರಕಾರ, 2026-27ರ ಸಾಲಿನಲ್ಲಿ ಭಾರತದ ಆರ್ಥಿಕತೆಯು ಶೇ. 6.8 ರಿಂದ ಶೇ. 7.2 ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆಯಿದೆ.
ಕೇಂದ್ರ ಬಜೆಟ್‌ಗೂ ಮುನ್ನ ಕೇಂದ್ರ ಸರ್ಕಾರವು ದೇಶದ ಆರ್ಥಿಕ ಸ್ಥಿತಿಗತಿಯ ದಿಕ್ಸೂಚಿಯಾದ 'ಆರ್ಥಿಕ ಸಮೀಕ್ಷೆ'ಯನ್ನು ಸಂಸತ್ತಿನಲ್ಲಿ ಮಂಡಿಸಿದೆ. ಗುರುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ವರದಿಯ ಪ್ರಕಾರ, 2026-27ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ. 6.8ರಿಂದ ಶೇ. 7.2ರಷ್ಟು ದೃಢವಾದ ಬೆಳವಣಿಗೆ ಕಾಣುವ ನಿರೀಕ್ಷೆಯಿದೆ. ಪ್ರಸಕ್ತ ವರ್ಷದಲ್ಲಿ ಜಿಡಿಪಿ ಶೇ. 7.4 ರಷ್ಟು ಪ್ರಗತಿ ಕಾಣುವ ಸಾಧ್ಯತೆಯಿದ್ದು, ಇದು ಐಎಂಎಫ್ ಮತ್ತು ವಿಶ್ವಬ್ಯಾಂಕ್‌ನ ಅಂದಾಜುಗಳಿಗಿಂತ ಹೆಚ್ಚಾಗಿದೆ. ಹೂಡಿಕೆ ಮತ್ತು ಉತ್ಪಾದನಾ ವಲಯಗಳು ಆರ್ಥಿಕತೆಗೆ ಬಲ ತುಂಬಿದ್ದು, ದೇಶೀಯ ಸ್ಥಿರತೆ ಉತ್ತಮವಾಗಿದೆ ಎಂದು ವರದಿ ತಿಳಿಸಿದೆ.

ವಿಶ್ವದ ಹಲವು ದೇಶಗಳು ಆರ್ಥಿಕ ಹಿಂಜರಿತದ ಭೀತಿಯನ್ನು ಎದುರಿಸುತ್ತಿರುವಾಗ, ಭಾರತದ ಈ ಬೆಳವಣಿಗೆ ದರವು ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಎಂದು ಪರಿಗಣಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಿರುವರಾದರೂ, ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ನೇತೃತ್ವದಲ್ಲಿ ಈ ಸಮೀಕ್ಷೆ ವರದಿ ರೂಪಿಸಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರ ನೇತೃತ್ವದಲ್ಲಿ ಸಿದ್ಧಪಡಿಸಲಾದ ಈ ಸಮೀಕ್ಷೆಯು, ಮುಂದಿನ ಎರಡು ವರ್ಷಗಳಲ್ಲಿ ಭಾರತದ ಬೆಳವಣಿಗೆಯ ಮುನ್ನೋಟವನ್ನು ರೂಪಿಸಲು ದೇಶೀಯ ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿಗಳನ್ನು ವಿಶ್ಲೇಷಿಸುತ್ತದೆ.
ಆರ್ಥಿಕ ಸಮೀಕ್ಷೆಯು ಮುಂದಿನ ವರ್ಷದ ಬಗ್ಗೆ ದೃಢವಾದ ವಿಶ್ವಾಸ ವ್ಯಕ್ತಪಡಿಸಿದೆ. ಇನ್ನೂ ದೇಶೀಯ ಚಾಲಕ ಶಕ್ತಿಗಳು ಪ್ರಬಲ ಪಾತ್ರ ವಹಿಸುತ್ತಿದ್ದು, ಆರ್ಥಿಕ ಸ್ಥಿರತೆ ಉತ್ತಮವಾಗಿದೆ. ಅಪಾಯದ ಸಾಧ್ಯತೆಗಳು ಕಡಿಮೆ ಇರುವುದರಿಂದ, 2027ನೇ ಹಣಕಾಸು ವರ್ಷದಲ್ಲಿ ನೈಜ ಜಿಡಿಪಿ ಬೆಳವಣಿಗೆಯು ಶೇ. 6.8ರಿಂದ 7.2ರ ವ್ಯಾಪ್ತಿಯಲ್ಲಿ ಇರಲಿದೆ ಎಂದು ವರದಿ ಹೇಳಿದೆ. ಭಾರತ ಸರ್ಕಾರದ ಈ ಅಂದಾಜು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್‌ನ ಅಂದಾಜುಗಳಿಗಿಂತ ಹೆಚ್ಚಾಗಿದೆ. ಐಎಂಎಫ್ ಶೇ. 6.4 ಮತ್ತು ವಿಶ್ವಬ್ಯಾಂಕ್ ಶೇ. 6.5ರಷ್ಟು ಬೆಳವಣಿಗೆಯನ್ನು ಊಹಿಸಿದ್ದವು. ಆದರೆ ಭಾರತ ಅದಕ್ಕಿಂತ ಉತ್ತಮ ಸಾಧನೆ ಮಾಡುವ ವಿಶ್ವಾಸದಲ್ಲಿದೆ.
ಆರ್ಥಿಕ ಸಮೀಕ್ಷೆ ಪ್ರಕಾರ ಪ್ರಸಕ್ತ ವರ್ಷದಲ್ಲಿ (2025-26) ಜಿಡಿಪಿ ಶೇ. 7.4ರಷ್ಟು ಹೆಚ್ಚಬಹುದು ಎನ್ನಲಾಗಿದೆ. ಈ ಹಿಂದಿನ ವರ್ಷದ ಸಮೀಕ್ಷೆಯಲ್ಲಿ ಮಾಡಲಾದ ಅಂದಾಜಿಗಿಂತ ಇದು ಹೆಚ್ಚಿದೆ. ದೇಶದ ಆರ್ಥಿಕ ಬೆಳವಣಿಗೆ ವಿಚಾರದಲ್ಲಿ ಇತರ ಏಜೆನ್ಸಿಗಳ ಅನಿಸಿಕೆಗಿಂತ ಎಕನಾಮಿಕ್ ಸರ್ವೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ.
ಆರ್ಥಿಕ ಸಮೀಕ್ಷಾ ವರದಿ ಎಂದರೇನು?
ಬಜೆಟ್ಗೆ ಮುಂಚೆ ಆರ್ಥಿಕ ಸಮೀಕ್ಷಾ ವರದಿಯನ್ನು ರಚಿಸಿ ಬಿಡುಗಡೆ ಮಾಡಲಾಗುತ್ತದೆ. ಪ್ರಸಕ್ತ ವರ್ಷದಲ್ಲಿ ಆರ್ಥಿಕ ಪರಿಸ್ಥಿತಿ ಮತ್ತು ಬೆಳವಣಿಗೆ ಹೇಗಿತ್ತು, ಮುಂಬರುವ ವರ್ಷದಲ್ಲಿ ಹೇಗಿರಲಿದೆ ಎಂಬುದನ್ನು ಈ ವರದಿಯಲ್ಲಿ ಅವಲೋಕಿಸಲಾಗುತ್ತದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಈ ಸಮೀಕ್ಷೆ ನಡೆಸಿದ್ದಾರೆ. ಆರ್ಥಿಕ ಸಮೀಕ್ಷೆಯಲ್ಲಿ ಜಿಡಿಪಿ, ಹಣದುಬ್ಬರದ ಟ್ರೆಂಡ್ ಹೇಗಿದೆ, ಹಣಕಾಸು ನೀತಿ ಹೇಗಿದ್ದರೆ ಅನುಕೂಲ, ರಫ್ತು, ಆಮದು, ಫಾರೆಕ್ಸ್ ಉದ್ಯೋಗ, ಆರೋಗ್ಯ, ಶಿಕ್ಷಣ ಮತ್ತಿತರ ಸಾಮಾಜಿಕ ಸೂಚಕಗಳು ಹೇಗಿವೆ ಎಂಬುದನ್ನ ಅವಲೋಕಿಸಲಾಗುತ್ತದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications