ಲಾಲೂ ಪ್ರಸಾದ್ ಪುತ್ರಿ ಮೀಸಾ ಅವರ 'ಸಿಎ' ಬಂಧನ

ಬಹುಕೋಟಿ ಮೇವು ಹಗರಣದ ಆರೋಪಿ, ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮೀಸಾ ಭಾರತಿ ಅವರ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಪಾಟ್ನ, ಮೇ 22: ಬಹುಕೋಟಿ ಮೇವು ಹಗರಣದ ಆರೋಪಿ, ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮೀಸಾ ಭಾರತಿ ಅವರ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮೀಸಾ ಭಾರತಿ ಅವರು ಮನಿ ಲಾಂಡ್ರಿಂಗ್ ನಲ್ಲಿ ನಿರತರಾಗಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.

Misa Bharti

ಅಕ್ರಮ ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀಸಾ ಭಾರತಿ ಅವರ ಅಕೌಂಟೆಂಟ್ ರಾಜೇಶ್ ಅಗರವಾಲ್ ಅವರನ್ನು ಬಂಧಿಸಿ,ದೆಹಲಿಯ ಕೋರ್ಟಿನಲ್ಲಿ ಮಂಗಳವಾರ(ಮೇ 23) ಹಾಜರುಪಡಿಸಲಾಗಿದೆ.

ಕಳೆದ ವಾರ ಆದಾಯ ತೆರಿಗೆ ಇಲಾಖೆಯ ತಂಡವು ಲಾಲೂ ಪ್ರಸಾದ್ ಯಾದವ್ ಅವರ ಸಹಚರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. 22 ಸ್ಥಳಗಳಲ್ಲಿ 1000 ಕೋಟಿ ರು ಗೂ ಅಧಿಕ ಬೇನಾಮಿ ಅಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+