ಐಡಿಬಿಐ ಬ್ಯಾಂಕಿಗೆ 900ಕೋಟಿ ರೂ. ವಂಚನೆ, ಮಲ್ಯ ವಿರುದ್ಧ ಚಾರ್ಜ್ ಶೀಟ್
ನವದೆಹಲಿ, ಜೂನ್ 14: ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ಜಾರ್ಜ್ ಶೀಟ್ ಸಲ್ಲಿಸಿದೆ. ಲೇವಾದೇವಿ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ವಿಜಯ್ ಮಲ್ಯರ ಹಲವು ಪ್ರಕರಣಗಳನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಐಡಿಬಿಐ ಬ್ಯಾಂಕಿಗೆ 900 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ವಿಜಯ್ ಮಲ್ಯ ಮೇಲೆ ಈ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಬೇಡಿಕೆ ಇಟ್ಟಿದ್ದು, ಮಂಗಳವಾರ ಲಂಡನಿನ ವೆಸ್ಟ್ ಮಿನಿಸ್ಟರ್ ಕೋರ್ಟ್ ನಲ್ಲಿ ಈ ಸಂಬಂಧ ಮಲ್ಯ ವಿಚಾರಣೆ ನಡೆದಿದೆ.












Click it and Unblock the Notifications