ಡಿ.ಕೆ ಶಿವಕುಮಾರ್ ಮತ್ತೊಂದು ಎಫ್‌ಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ
Recommended Video

ನವದೆಹಲಿ, ಸೆಪ್ಟೆಂಬರ್ 18: ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಸುಮಾರು 8 ಕೋಟಿ ರೂ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಇದರಿಂದ ಶನಿವಾರವಷ್ಟೇ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದು ನಿರಾಳರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಪುನಃ ಬಂಧನದ ಭೀತಿ ಎದುರಾಗಿದೆ.

ಡಿ.ಕೆ. ಶಿವಕುಮಾರ್ ಅವರಲ್ಲದೆ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತ್ ಮತ್ತು ಮಾಜಿ ಸಿಬ್ಬಂದಿ ರಾಜೇಂದ್ರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾಗಿದ್ದ ವಿಚಾರದಲ್ಲಿ ಆದಾಯ ತೆರಿಗೆ ಇಲಾಖೆಯು ಡಿ.ಕೆ. ಶಿವಕುಮಾರ್ ಮತ್ತು ಇತರರ ವಿರುದ್ಧ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಿಸಿತ್ತು.
ಇದರಲ್ಲಿ ಎಲ್ಲ ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಯಾವುದೇ ವಿಚಾರಣೆಯನ್ನು ಎದುರಿಸಲು ನಾವು ಸಿದ್ಧ. ನಮ್ಮ ಬಳಿ ಎಲ್ಲ ದಾಖಲೆಗಳೂ ಇವೆ. ಜಾರಿ ನಿರ್ದೇಶನಾಲಯದ ಪ್ರಶ್ನೆಗಳಿಗೆ ಕಾನೂನಿಗೆ ಚೌಕಟ್ಟಿನಲ್ಲಿ ಕ್ರಮಬದ್ಧ ಉತ್ತರ ನೀಡಲು ಸಿದ್ಧ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.












Click it and Unblock the Notifications