ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ ಶಿವಕುಮಾರ್ ಮತ್ತೊಂದು ಎಫ್‌ಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ

|
Google Oneindia Kannada News

Recommended Video

ಡಿ.ಕೆ ಶಿವಕುಮಾರ್ ವಿರುದ್ದ ಮತ್ತೊಂದು ಎಫ್‌ಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ | Oneindia Kannada

ನವದೆಹಲಿ, ಸೆಪ್ಟೆಂಬರ್ 18: ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಸುಮಾರು 8 ಕೋಟಿ ರೂ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಡಿ.ಕೆ.ಶಿವಕುಮಾರ್‌ಗೆ ಜಾಮೀನು, ಬೀಸೋ ದೊಣ್ಣೆಯಿಂದ ಪಾರುಡಿ.ಕೆ.ಶಿವಕುಮಾರ್‌ಗೆ ಜಾಮೀನು, ಬೀಸೋ ದೊಣ್ಣೆಯಿಂದ ಪಾರು

ಇದರಿಂದ ಶನಿವಾರವಷ್ಟೇ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದು ನಿರಾಳರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಪುನಃ ಬಂಧನದ ಭೀತಿ ಎದುರಾಗಿದೆ.

ED files FIR against DK Shivakumar in money laundering case

ಡಿ.ಕೆ. ಶಿವಕುಮಾರ್ ಅವರಲ್ಲದೆ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತ್ ಮತ್ತು ಮಾಜಿ ಸಿಬ್ಬಂದಿ ರಾಜೇಂದ್ರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರುಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರು

ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾಗಿದ್ದ ವಿಚಾರದಲ್ಲಿ ಆದಾಯ ತೆರಿಗೆ ಇಲಾಖೆಯು ಡಿ.ಕೆ. ಶಿವಕುಮಾರ್ ಮತ್ತು ಇತರರ ವಿರುದ್ಧ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಿಸಿತ್ತು.

ಇದರಲ್ಲಿ ಎಲ್ಲ ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್

ಯಾವುದೇ ವಿಚಾರಣೆಯನ್ನು ಎದುರಿಸಲು ನಾವು ಸಿದ್ಧ. ನಮ್ಮ ಬಳಿ ಎಲ್ಲ ದಾಖಲೆಗಳೂ ಇವೆ. ಜಾರಿ ನಿರ್ದೇಶನಾಲಯದ ಪ್ರಶ್ನೆಗಳಿಗೆ ಕಾನೂನಿಗೆ ಚೌಕಟ್ಟಿನಲ್ಲಿ ಕ್ರಮಬದ್ಧ ಉತ್ತರ ನೀಡಲು ಸಿದ್ಧ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

English summary
Enforcement Directorate has filed FIR against minister DK Shivakumar in the money laundering case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X