ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಭ್ರಷ್ಟ ನೀರವ್ ಮೋದಿಗೆ ಸೇರಿದ ಸಾವಿರಾರು ಕೋಟಿ ಆಸ್ತಿ 'ಇಡಿ' ವಶ

|
Google Oneindia Kannada News

ನವದೆಹಲಿ, ಏಪ್ರಿಲ್ 15: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಆಸ್ತಿ, ವಸ್ತುಗಳನ್ನು ಜಪ್ತಿ, ಹರಾಜು ಹಾಕಿದ ಬಳಿಕ ತನಿಖಾ ಸಂಸ್ಥೆ ಜಾರಿ ನಿರ್ದೇಶನಲಯವು ಜಪ್ತಿ ಕಾರ್ಯ ಮುಂದುವರೆಸಿದೆ.

ನೀರವ್ ಮೋದಿ ಅವರಿಗೆ ಸೇರಿದ 255 ಕೋಟಿ ರು ಮೌಲ್ಯದ ಆಭರಣಗಳನ್ನು ಇತ್ತೀಚೆಗೆ ಹಾಂಗ್ ಕಾಂಗ್ ನಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಈಗ ಇನ್ನಿತರ ಕಡೆಗಳಲ್ಲಿ ವಶ ಪಡಿಸಿಕೊಳ್ಳಲು ಮುಂತಾದಿರುವ ವಜ್ರಾಭರಣಗಳ ಮೌಲ್ಯ 4,700 ಕೋಟಿ ರು ದಾಟಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನೀರವ್ ಮೋದಿಗೆ ಜಾಮೀನು ನಿರಾಕರಿಸಿದ ಲಂಡನ್ ಕೋರ್ಟ್‌ ನೀರವ್ ಮೋದಿಗೆ ಜಾಮೀನು ನಿರಾಕರಿಸಿದ ಲಂಡನ್ ಕೋರ್ಟ್‌

ನೀರವ್ ಮೋದಿ ಅವರು 6,400 ಕೋಟಿ ರು ಮನಿಲಾಂಡ್ರಿಂಗ್ ಅವ್ಯವಹಾರದಲ್ಲಿ ತೊಡಗಿದ್ದರು ಎಂದು ಜಾರಿ ನಿರ್ದೇಶನಾಲಯವು ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿದೆ.ಪಿಎಂಎಲ್ಎ ಕಾಯ್ದೆ ಉಲ್ಲಂಘನೆ ಎಅಡಿಯಲ್ಲಿ ಥೈಲ್ಯಾಂಡ್ ನಲ್ಲಿ 13 ಕೋಟಿ ರು ಮೌಲ್ಯದ ಆಸ್ತಿ ವಶ ಪಡಿಸಿಕೊಳ್ಳಲಾಗಿತ್ತು. ಗೀತಾಂಜಲಿ ಸಮೂಹ ಸಂಸ್ಥೆಗೆ ಸೇರಿದ ಈ ಆಸ್ತಿಗೆ ನೀರವ್ ಅವರ ಅಂಕಲ್ ಮೆಹುಲ್ ಚೋಕ್ಸಿ ಅವರು ಸಹ ಮಾಲೀಕರಾಗಿದ್ದಾರೀ.

ED has attached Rs 4,700 crore worth assets belonging to Nirav Modi

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪವನ್ನು ಹೊತ್ತುಕೊಂಡಿರುವ ನೀರವ್ ಮೋದಿ, ಮೆಹುಲ್ ಚೊಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದು, ವಿವಿಧ ತನಿಖಾ ಸಂಸ್ಥೆಗಳು ಇವರಿಬ್ಬರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ.

ಲಂಡನ್‌ನಲ್ಲಿ ನೀರವ್ ಮೋದಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನೀರವ್ ಮೋದಿಯು ಇತ್ತೀಚೆಗಷ್ಟೆ ಎರಡನೇ ಬಾರಿ ಜಾಮೀನಿಗಾಗಿ ಮನವಿ ಸಲ್ಲಿಸಿದ್ದರು, ಆದರೆ ಅರ್ಜಿಯನ್ನು ನಿರಾಕರಿಸಲಾಗಿದೆ.

English summary
The Enforcement Directorate (ED) is all set to attach more properties of Nirav Modi, an accused in the PNB case. A fresh list of properties to be attached is being prepared, ED sources tell OneIndia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X