Amanatullah Khan: ಎಎಪಿ ಶಾಸಕನ ನಿವಾಸದ ಮೇಲೆ 'ಇಡಿ' ದಾಳಿ

ಬೆಂಗಳೂರು, ಅಕ್ಟೋಬರ್ 10: ಜಾರಿ ನಿರ್ದೇಶನಾಲಯವು (ED) ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಮತ್ತು ಇತರರ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ (Money Laundering) ವಿಚಾರವಾಗಿ ಅಧಿಕಾರಿಗಳು ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ವರದಿ ಆಗಿದೆ.

ಎಎಪಿ ಶಾಸಕ ಅಮಾನತುಲ್ಲಾ ಖಾನ್ (49) ಅವರು ದೆಹಲಿ ವಿಧಾನಸಭೆಯ ಓಖ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 'ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳ ಅಡಿ'ಯಲ್ಲಿ ಅವರ ಮನೆ, ಸಂಬಂಧಿತ ಕಚೇರಿಗಳ ಮೇಲೆ ಶೋಧ ಕಾರ್ಯ ನಡೆಸಿದ್ದಾರೆ.

ED Raid On AAP MLA Amanatullah Khan in Money Laundering Case

ಫೆಡರಲ್ ಏಜೆನ್ಸಿಯು ದೆಹಲಿ ವಕ್ಫ್ ಬೋರ್ಡ್‌ನಲ್ಲಿನ ಅಕ್ರಮ ನೇಮಕಾತಿಗಳಿಗೆ ಸಂಬಂಧಿಸಿದ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಈ ಎಎಪಿ ಶಾಸಕರ ವಿರುದ್ಧ ದೆಹಲಿಯ ಭ್ರಷ್ಟಾಚಾರ ನಿಗ್ರಹ ಬ್ಯೂರೋ (ACB)ಎಫ್‌ಐಆರ್ ಮತ್ತು ಕೇಂದ್ರೀಯ ತನಿಖಾ ದಳ (CBI ) ಅವರು FIR ದಾಖಲಿಸಿದ್ದಾರೆ.

ಇತ್ತೀಚೆಗೆ ಇದೇ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಆರು ದಿನಗಳ ಹಿಂದೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಒಂದಷ್ಟು ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿದ್ದರು.

ದೆಹಲಿಯ ರದ್ದಾದ ಮದ್ಯ ನೀತಿ (ಅಬಕಾರಿ ನೀತಿ) ಅನುಷ್ಠಾನ ಜಾರಿ ವಿಚಾರದಲ್ಲಿ ಕೆಲವು ಮಧ್ಯ ಉತ್ಪಾದಕರು, ಸಗಟು ವ್ಯಾಪಾರಿಗಳು ಸೇರಿದಂತೆ ಹಲವು ಪಾಲ್ಗೊಂಡಿದ್ದಾರೆ ಎಂದು ತನಿಖಾ ಸಂಸ್ಥೆಗಳು ಹೇಳಿವೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆ ಆರೋಪಗಳು ಎಎಪಿ ನಾಯಕರ ಮೇಲೆ ಕೇಳಿ ಬಂದಿದ್ದ, ಹಲವು ಸಾಕ್ಷ್ಯಾಧಾರ ಸಂಗ್ರಹಿಸಿರುವ ಅಧಿಕಾರಿಗಳು ಒಬ್ಬೊಬ್ಬರ ಮೇಲೆ ದಾಳಿ ನಡೆಸುತ್ತಿದೆ.

ಇಡಿ ದಾಳಿ ಬಳಿಕ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಯಿತು. ಇವತ್ತು ಶಾಸಕ ಅಮಾನತುಲ್ಲಾ ಖಾನ್ ಮೇಲೆ ದಾಳಿ ನಡೆದಿದ್ದು, ಇನ್ನಷ್ಟು ಮಾಹಿತಿಗಳು ಬಹಿರಂಗೊಳ್ಳಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+