ತನಿಖೆ ತಂದ ಸಂಕಷ್ಟ: ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲೇ ಆತ್ಮಹ*: ಮಮತಾ ಬ್ಯಾನರ್ಜಿ ಆಪ್ತ!

ಪಶ್ಚಿಮ ಬಂಗಾಳದ ರಾಜಕೀಯವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಳೆದ 15 ವರ್ಷಗಳಿಂದ ಆಡಳಿತದಲ್ಲಿದ್ದ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮಮತಾ ಬ್ಯಾನರ್ಜಿ ಅವರು ಹೀನಾಯ ಸೋಲು ಅನುಭವಿಸಿದ್ದರು. ಇದೀಗ ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬೆಳಿಗ್ಗೆಯೇ ಬಿರ್ಭುಮ್ ಜಿಲ್ಲೆಯ ತಮ್ಮ ಮನೆಯ ಬಳಿ ಇರುವ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳದ ಪೊಲೀಸರು ತಿಳಿಸಿದ್ದಾರೆ. ಇನ್ನು ಪ್ರಮುಖ ತನಿಖೆಯಲ್ಲೂ ಇವರ ಹೆಸರು ಕೇಳಿ ಬಂದಿತ್ತು. ಈ ಒತ್ತಡವನ್ನು ಅವರು ಅನುಭವಿಸುತ್ತಿದ್ದರು ಎಂದೂ ಹೇಳಲಾಗಿದೆ.

ಆಶಿಶ್ ಬ್ಯಾನರ್ಜಿ ಅವರ ಸಾವಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾದ ಪೊಲೀಸರು ಪ್ರಾಥಮಿಕ ವರದಿಯನ್ನು ಹಂಚಿಕೊಂಡಿದ್ದಾರೆ. ಇದರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣ ಎಂದು ಪರಿಗಣಿಸಲಾಗಿದೆ. ಆಶಿಶ್ ಬ್ಯಾನರ್ಜಿ "ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿರುವ ಆತ್ಮಹತ್ಯೆ ಪತ್ರ ನಮಗೆ ಸಿಕ್ಕಿದೆ ಎಂದು ಪಶ್ಚಿಮ ಬಂಗಾಳದ ಪೊಲೀಸ್ ವರಿಷ್ಠಾಧಿಕಾರಿ ವಿದಿತ್ ರಾಜ್ ಭುಂದೇಶ್ ಅವರು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ED

ಆಶಿಶ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದರು. ಇನ್ನು ಆಶಿಶ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಆಶಿಶ್ ರಾಂಪುರ್ಹತ್‌ನ ವಾರ್ಡ್ ಸಂಖ್ಯೆ 5 ರ ಹಟ್ಟಲಪಾರದಲ್ಲಿ ವಾಸಿಸುತ್ತಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೀಗ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಫಲಿತಾಂಶ ಬಂದ ಮೇಲೆ ಅದರ ಆಧಾರದ ಮೇಲೆ ತನಿಖೆ ಮುಂದುವರಿಸಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಶಿಶ್ ಬ್ಯಾನರ್ಜಿ ಡೆತ್‌ನೋಟ್‌ನಲ್ಲಿ ಏನಿದೆ ?

ಇನ್ನು ಆಶಿಶ್ ಬ್ಯಾನರ್ಜಿ ಅವರು ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ಬ್ಯಾನರ್ಜಿ ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದು, ತಮ್ಮ ರಾಜಕೀಯ ಜೀವನದುದ್ದಕ್ಕೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ತಾರಾಪಿತ್ ರಾಂಪುರ್ಹತ್ ಅಭಿವೃದ್ಧಿ ಪ್ರಾಧಿಕಾರ (ಟಿಆರ್‌ಡಿಎ)ಕ್ಕೆ ಸಂಬಂಧಿಸಿದ ತಪ್ಪುಗಳ ಆರೋಪಗಳನ್ನು ಅವರು ಉಲ್ಲೇಖಿಸಿದ್ದಾರೆ, ಅಲ್ಲಿ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಆಶಿಶ್ ಬ್ಯಾನರ್ಜಿ ಅವರು 5 ಬಾರಿ ಶಾಸಕರಾಗಿದ್ದರು.

ಆಶಿಶ್ ಅವರ ಸಂಬಂಧಿಯೊಬ್ಬರ ಪ್ರಕಾರ, ಸ್ವಾತಂತ್ರ್ಯ ದಿನಾಚರಣೆಯಂದು ಮಾಜಿ ಶಾಸಕರು ರಾಷ್ಟ್ರಧ್ವಜವನ್ನು ಹಾರಿಸಿದ್ದರು ಮತ್ತು ಇಡೀ ದಿನ ಪಕ್ಷದ ಕಚೇರಿಯಲ್ಲಿಯೇ ಇದ್ದರು ಎಂದು ಹೇಳಿದ್ದಾರೆ. ರಾಂಪುರ್ಹತ್‌ನ ಐದು ಬಾರಿ ಮಾಜಿ ಶಾಸಕರಾಗಿರುವ ಆಶಿಶ್ ಶಾಲಾ ಶಿಕ್ಷಣ ಸಚಿವ ಮತ್ತು ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಹಿಂದಿನ ವಿಧಾನಸಭೆಯಲ್ಲಿ ಉಪಸಭಾಪತಿಯಾಗಿದ್ದರು ಮತ್ತು 2026 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತಿದ್ದರು.

ಆಶಿಶ್ ಅವರ ಡೆತ್‌ನೋಟ್‌ನಲ್ಲಿ ಅವರು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ನಿರ್ದಿಷ್ಟವಾಗಿ ತಾರಾಪೀಠ ರಾಂಪುರ್ಹತ್ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಟಿಆರ್‌ಡಿಎ) ನಡೆದಿರುವ ಅಕ್ರಮಗಳಲ್ಲಿ ತಾವು ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+