ಶಾಸಕನಿಂದ 100 ಕೋಟಿ ಆಸ್ತಿ ವಶಪಡಿಸಿಕೊಂಡ ಇಡಿ, ಬೆಚ್ಚಿಬಿದ್ದ ಜನ!
ದೇಶದಲ್ಲಿ ಭಾರೀ ದೊಡ್ಡ ಕಾರ್ಯಾಚರಣೆಯೊಂದು ನಡೆದಿದ್ದು. ಜಾರಿ ನಿರ್ದೇಶನಾಲಯವು ರಾಜಕಾರಣಿಯೊಬ್ಬರಿಂದ ಬರೋಬ್ಬರಿ 100 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಹೌದು ಜಾರಿ ನಿರ್ದೇಶನಾಲಯವು ಆಗಾಗ ವಿಶೇಷ ಕಾರ್ಯಾಚರಣೆಗಳನ್ನು ನಡೆಸುವುದು ಇದೆ. ಇದೀಗ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ತಮಿಳುನಾಡಿನ ಶಾಸಕರೊಬ್ಬರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು.
ಇತ್ತೀಚಿನ ದಿನಗಳಲ್ಲಿ ಇಡಿ ನಡೆಸಿದ ದೊಡ್ಡ ಕಾರ್ಯಾಚರಣೆ ಇದಾಗಿದೆ. ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದ್ದು. ದೇಶದಾದ್ಯಂತ ಜನ ಹುಬ್ಬೇರಿಸುವಂತೆ ಮಾಡಿದೆ. ಹಾಗಾದರೆ ಏನಿದು ಘಟನೆ, ಈ ರೀತಿ ಕೋಟ್ಯಾಂತರ ರೂಪಾಯಿ ಆಸ್ತಿ ವಶಪಡಿಸಿಕೊಳ್ಳುವುದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.

ತಮಿಳುನಾಡಿನ ಒರಥನಾಡು ಶಾಸಕ ಹಾಗೂ ಮಾಜಿ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಅವರಿಗೆ ಸೇರಿದ 100 ಕೋಟಿಗೂ ಹೆಚ್ಚು ಮೌಲ್ಯ ಎರಡು ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾರಿ ನಿರ್ದೇಶನಾಲಯದ ಚೆನ್ನೈ ವಲಯ ಕಚೇರಿಯು ಬೃಹತ್ ಕಾರ್ಯಾಚರಣೆ ನಡೆಸಿದೆ. ಶಾಸಕನಿಗೆ ಸೇರಿದ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಎರಡು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ಇಡಿ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಹೇಳಿದೆ. ಇನ್ನು ಜಪ್ತಿ ಮಾಡಲಾದ ಆಸ್ತಿಗಳನ್ನು ಶಾಸಕ ವೈತಿಲಿಂಗಂ ಅವರ ಕುಟುಂಬದ ಒಡೆತನದ ಮುತ್ತಮ್ಮಲ್ ಎಸ್ಟೇಟ್ಸ್ ಪ್ರೈ. ಲಿ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆ ಏನು: ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ಲಂಚ ಸ್ವೀಕರಿಸಿರುವ ಆರೋಪದ ಮೇಲೆ ವೈತಿಲಿಂಗಂ ಹಾಗೂ ಅವರ ಕುಟುಂಬದವರ ಮೇಲೆ ತಮಿಳುನಾಡಿನ ವಿಚಕ್ಷಣಾ ಹಾಗೂ ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120B ಮತ್ತು 1988 ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ಸಹ ದಾಖಲಿಸಿಕೊಳ್ಳಲಾಗಿತ್ತು.
ವೈತಿಲಿಂಗಂ ಅವರು ಸಚಿವರಾಗಿದ್ದಾಗ ರಿಯಲ್ ಎಸ್ಟೇಟ್ ಯೋಜನೆಗೆ ಯೋಜನಾ ಅನುಮತಿ ನೀಡುವ ಸಂದರ್ಭದಲ್ಲಿ ಶ್ರೀರಾಮ್ ಪ್ರಾಪರ್ಟೀಸ್ ಹಾಗೂ ಇನ್ಫ್ರಾಸ್ಟ್ರಕ್ಚರ್‌ನಿಂದ ಬರೋಬ್ಬರಿ 27.90 ಕೋಟಿ ರೂಪಾಯಿಯನ್ನು ಲಂಚ ರೂಪದಲ್ಲಿ ಸ್ವೀಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ಈ ಪ್ರಕರಣ ದಾಖಲಾಗುತ್ತಿದ್ದಂತೆಯೇ ಎಐಎಡಿಎಂಕೆ ಪಕ್ಷದಿಂದ ವೈತಿಲಿಂಗಂ ಅವರನ್ನು ಉಚ್ಛಾಟನೆ ಸಹ ಮಾಡಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಜಾರಿ ನಿರ್ದೇಶನಾಯವು ಶೋಧಕ್ಕೆ ಇಳಿದಿತ್ತು. ವೈತಿಲಿಂಗಂ ಅವರು ಅಕ್ರಮವಾಗಿ ವಹಿವಾಟು ನಡೆಸಿರುವುದಾಗಿಯೂ ಹಾಗೂ ಆ ಮೊತ್ತವನ್ನು ಅಕ್ರಮ ಆಸ್ತಿಗಳಲ್ಲಿ ವಿನಿಯೋಗಿಸಿದಾಗಿಯೂ ವಿಚಾರಣೆಯಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ ಆಸ್ತಿಗಳನ್ನು ವಶಪಡಿಸಿಕೊಂಡಿರುವುದಾಗಿ ಇಡಿ ಹೇಳಿದೆ.
ಬೆಚ್ಚಿಬಿದ್ದ ತಮಿಳುನಾಡು: ಬಹುಕೋಟಿ ಹಗರಣದ ವಿಷಯವನ್ನು ಕೇಳಿ ತಮಿಳುನಾಡು ಬೆಚ್ಚಿಬಿದ್ದಿದೆ. ಇನ್ನು 100 ಕೋಟಿಗೂ ಹೆಚ್ಚು ಮೊತ್ತವನ್ನು ವಶಪಡಿಸಿಕೊಂಡಿರುವ ಇಡಿಯು ತನಿಖೆಯನ್ನು ಮುಂದುವರಿಸಿದೆ. ಭ್ರಷ್ಟಾಚಾರ ಆರೋಪ ಕೇಳಿ ಬಂದ ಬೆನ್ನಲ್ಲೇ ಎಐಎಡಿಎಂಕೆ ಪಕ್ಷದಿಂದ ವೈತಿಲಿಂಗಂ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications