ಕೊನೆಗೂ ಮಲ್ಯಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ
ನವದೆಹಲಿ, ಮಾರ್ಚ್, 11: ಕೊನೆಗೂ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 7,800 ಕೋಟಿ ಸಾಲ ಪಡೆದುಕೊಂಡು ತಲೆಮರೆಸಿಕೊಂಡಿರುವ ಆರೋಪದಡಿ ವಿಜಯ್ ಮಲ್ಯಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಮಾರ್ಚ್ 18ರೊಳಗಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿದೆ.
ವಿಚಾರಣೆಗೆ ಹಾಜರಾಗದೆ ಇದ್ದರೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದು ಮಲ್ಯ ಅವರಿಗೆ ಇಮೇಲ್ ಮುಖಾಂತರ ಸಮನ್ಸ್ ಕಳುಹಿಸಲಾಗಿದೆ. ಐಡಿಬಿಐ ಬ್ಯಾಂಕ್ ಸಾಲಕ್ಕೆ ಸಂಬಂಧಿಸಿ ಸಮನ್ಸ್ ಜಾರಿ ಮಾಡಲಾಗಿದೆ.[ಆರ್ಟ್ ಆಫ್ ಲೀವಿಂಗ್: ಮಲ್ಯರಿಗೂ ಮುಂಚೆ ದೇಶ ತೊರೆದವರು]

ಐಡಿಬಿಐ ಬ್ಯಾಂಕ್ ನಿಂದ ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ಏರ್ ಲೈನ್ಸ್ ಗೆ 900 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನಿಖೆ ಆರಂಭಿಸಿತ್ತು. ಇದರಂತೆ ಬ್ಯಾಂಕ್ ನ 6 ಅಧಿಕಾರಿಗಳಿಗೆ ವಿಚಾರಣೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಕಿಂಗ್ ಫಿಶರ್ ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ ಓ) ರಘುನಾಥನ್ ಅವರು ವಿಚಾರಣೆಗೆ ಹಾಜರಾಗಿದ್ದು ಜಾರಿ ನಿರ್ದೇಶನಾಲಯ ಅವನ್ನು ಪ್ರಶ್ನೆ ಮಾಡಿ ಮಾಹಿತಿ ಕಲೆ ಹಾಕಿದೆ.[ಭಾರತವನ್ನು ಕಾಡುವ 25 ಭ್ರಷ್ಟಾಚಾರ ಪ್ರಕರಣಗಳು]
ನಾನು ಮಲ್ಯ ಅವರ ನಿರ್ದೇಶನದಂತೆ ಕೆಲಸ ಮಾಡಿದ್ದೆ. ಹಣ ರವಾನೆಗೂ ನನಗೂ ಸಂಬಂಧವಿಲ್ಲ ಎಂದು ವಿಚಾರಣೆ ವೇಳೆ ಹೇಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.












Click it and Unblock the Notifications