ಸೋನಿಯಾ ಗಾಂಧಿಗೆ ರಿಲೀಫ್; ಗುರುವಾರ ಇಡಿ ವಿಚಾರಣೆ ಇಲ್ಲ!

ನವದೆಹಲಿ, ಜೂನ್ 23; ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಿಲೀಫ್ ಸಿಕ್ಕಿದೆ. ಗುರುವಾರ ವಿಚಾರಣೆಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಮನವಿಗೆ ಇಡಿ ಒಪ್ಪಿಗೆ ನೀಡಿದೆ. ಈ ಪ್ರಕರಣದಲ್ಲಿ ಸೋನಿಯಾ ಪುತ್ರ ರಾಹುಲ್ ಗಾಂಧಿ 5 ದಿನಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ಜೂನ್ 20ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೋನಿಯಾ ಗಾಂಧಿ ಬುಧವಾರ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪತ್ರ ಬರೆದಿದ್ದರು. ಜೂನ್ 23ರ ಗುರುವಾರ ವಿಚಾರಣೆಗೆ ಹಾಜರಾಗಬೇಕು ಎಂದು ನೀಡಿದ ಸಮನ್ಸ್ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದರು.

ಕೋವಿಡ್ ಸೋಂಕು, ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಗುರುವಾರ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ವಿವರಣೆ ನೀಡಿದ್ದರು. ಇಡಿ ಈ ಮನವಿಗೆ ಒಪ್ಪಿಗೆ ನೀಡಿದ್ದು, ಗುರುವಾರ ಸೋನಿಯಾ ಗಾಂಧಿ ವಿಚಾರಣೆ ನಡೆಯುವುದಿಲ್ಲ. ಮುಂದಿನ ವಿಚಾರಣೆ ದಿನಾಂಕವನ್ನು ಇಡಿ ಇನ್ನಷ್ಟೇ ನಿಗದಿ ಮಾಡಬೇಕಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ 5 ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ರಾಹುಲ್ ವಿಚಾರಣೆ ನಡೆಸುತ್ತಿರುವುದು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಸಹ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ವಿಚಾರಣೆ ಮುಂದೂಡಿಕೆ

ಎರಡು ಬಾರಿ ವಿಚಾರಣೆ ಮುಂದೂಡಿಕೆ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮೊದಲು ಸೋನಿಯಾ ಗಾಂಧಿಗೆ ನೋಟಿಸ್ ನೀಡಿತ್ತು. ಆದರೆ ಕೋವಿಡ್ ಸೋಂಕು ತಗುಲಿರುವ ಕಾರಣ ಮತ್ತಷ್ಟು ಕಾಲಾವಕಾಶ ನೀಡುವಂತೆ ಅವರು ಮನವಿ ಮಾಡಿದ್ದರು. ಆಗ ಇಡಿ ಜೂನ್ 23ರಂದು ಹಾಜರಾಗುವಂತೆ ಹೊಸ ಸಮನ್ಸ್‌ ನೀಡಿತ್ತು. ಈಗ ಸೋನಿಯಾ ಗಾಂಧಿ ಮನವಿಯಂತೆ ಆ ಸಮನ್ಸ್ ಸಹ ರದ್ದುಗೊಳಿಸಲಾಗಿದೆ.

ಮನೆಯಲ್ಲೇ ವಿಶ್ರಾಂತಿಗೆ ವೈದ್ಯರ ಸಲಹೆ

ಮನೆಯಲ್ಲೇ ವಿಶ್ರಾಂತಿಗೆ ವೈದ್ಯರ ಸಲಹೆ

ಕೋವಿಡ್ ಸೋಂಕು ತಗುಲಿದ್ದ ಸೋನಿಯಾ ಗಾಂಧಿ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಜೂನ್ 12ರಂದು ದಾಖಲಾಗಿದ್ದರು. ಅವರಿಗೆ ಶ್ವಾಸಕೋಶದ ಸೋಂಕು ಸಹ ಕಂಡುಬಂದಿತ್ತು. ಜೂನ್ 20ರ ತನಕ ಅವರು ಚಿಕಿತ್ಸೆ ಪಡೆದು ಗುಣಮುಖಗೊಂಡಿದ್ದಾರೆ. ಆದರೆ ವೈದ್ಯರು ಕೆಲವು ದಿನಗಳ ಕಾಲ ಕಡ್ಡಾಯವಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಆದ್ದರಿಂದ ಬುಧವಾರ ಜಾರಿ ನಿರ್ದೇಶನಾಲಯಕ್ಕೆ ಜೂನ್ 23ರ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು.

ಖರೀದಿಯಲ್ಲಿನ ಅವ್ಯವಹಾರ ಆರೋಪ

ಖರೀದಿಯಲ್ಲಿನ ಅವ್ಯವಹಾರ ಆರೋಪ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಜವಾಹರಲಾಲ್ ನೆಹರೂ ಹಾಗೂ ಇತರ ಸ್ವಾತಂತ್ರ್ಯ ಹೋರಾಟಗಾರರಿಂದ ಆರಂಭವಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಷಿಯೇಟೆಟ್ ಜರ್ನಲ್ ಲಿ (ಎಜೆಎಲ್) ಮುದ್ರಿಸುತ್ತಿತ್ತು.

2010ರಲ್ಲಿ ಕಾಂಗ್ರೆಸ್ ಪಕ್ಷದವರೇ ಆರಂಭಿಸಿದ ಯಂಗ್ ಇಂಡಿಯಾ ಎಂಬ ಕಂಪನಿಯು ಎಜೆಎಲ್ ಅನ್ನು ಖರೀದಿಸಿತು. ರಾಹುಲ್ ಮತ್ತು ಸೋನಿಯಾ ಗಾಂಧಿ ಈ ಯಂಗ್ ಇಂಡಿಯಾದಲ್ಲಿ ಬಹುಪಾಲು ಷೇರುಗಳನ್ನು ಹೊಂದಿದ್ದು, ಎಜೆಎಲ್‌ನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬುದು ಆರೋಪ. ಈ ಕುರಿತು ಇಡಿ 5 ದಿನಗಳ ಕಾಲ ರಾಹುಲ್ ಗಾಂಧಿ ವಿಚಾರಣೆ ನಡೆಸಿದೆ.

ಕಾಂಗ್ರೆಸ್ ನಾಯಕರ ಪ್ರತಿಭಟನೆ

ಕಾಂಗ್ರೆಸ್ ನಾಯಕರ ಪ್ರತಿಭಟನೆ

ರಾಹುಲ್ ಗಾಂಧಿ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ನೆಪದಲ್ಲಿ ಇಡಿ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ, ಇಡಿ ಕಚೇರಿ ಮುಂದೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸೋನಿಯಾ ಗಾಂಧಿ ಸಹ ವಿಚಾರಣೆಗೆ ಹಾಜರಾದರೆ ಇನ್ನಷ್ಟು ಹೈಡ್ರಾಮ ನಡೆಯುವ ನಿರೀಕ್ಷೆ ಇದೆ. ಇಡಿ ಸೋನಿಯಾ ಗಾಂಧಿ ವಿಚಾರಣೆಗೆ ಇನ್ನೂ ಹೊಸ ದಿನಾಂಕ ನಿಗದಿ ಮಾಡಿಲ್ಲ.

ಎಲ್ಲರೂ ತಮ್ಮ ಜೊತೆಗಿದ್ದರು ಎಂದ ರಾಹುಲ್

ಎಲ್ಲರೂ ತಮ್ಮ ಜೊತೆಗಿದ್ದರು ಎಂದ ರಾಹುಲ್

ಬುಧವಾರ ಎಐಸಿಸಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಬಹೃತ್ ಪ್ರತಿಭಟನೆ ನಡೆಸಿದರು. ಇಡಿ ರಾಹುಲ್‌ ಗಾಂಧಿ ವಿಚಾರಣೆ ನಡೆಸುತ್ತಿರುವುದರ ವಿರುದ್ಧ ಆಕ್ರೋಶ ಹೊರ ಹಾಕಿದರು.

ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಮಾತನಾಡಿ, "ಇಡಿ ವಿಚಾರಣೆ ವೇಳೆ ತಾನೊಬ್ಬ ಮಾತ್ರ ಇರಲಿಲ್ಲ. ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತಿರುವ ಪ್ರತಿಯೊಬ್ಬರು ತಮ್ಮ ಜೊತೆಗಿದ್ದರು" ಎಂದು ಹೇಳಿದ್ದರು. ತಮ್ಮನ್ನು ಬೆಂಬಲಿಸಿದ ಕಾಂಗ್ರೆಸ್‌ನ ಪ್ರತಿಯೊಬ್ಬ ಕಾರ್ಯಕರ್ತರಿಗೂ ಅವರು ಧನ್ಯವಾದ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+