ಶಾಲೆಗಳ ಪುನರಾರಂಭ: ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟ
ನವದೆಹಲಿ, ಅಕ್ಟೋಬರ್ 05: ಕೇಂದ್ರ ಶಿಕ್ಷಣ ಸಚಿವಾಲಯವು ಶಾಲೆಗಳ ಪುನರಾರಭದ ಕುರಿತು ಇಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮ್ಮ ಟ್ವಿಟ್ಟರ್ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳಿಂದ ಶಾಲೆಗಳ ಪುನರಾರಂಭ ಕುರಿತು ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಶಾಲೆಗಳ ಪುನರಾರಂಭ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾರ್ಗಸೂಚಿಗಳ ಸಂಕ್ಷಿಪ್ತ ಮುಖ್ಯಾಂಶಗಳು ಹೀಗಿದೆ.ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ದಿನಾಂಕ 30.09.2020ರಂದು ತನ್ನ ಆದೇಶದಲ್ಲಿ ಶಾಲೆಗಳ ಪುನರಾರಂಭ ಕುರಿತು, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಹಂತ ಹಂತವಾಗಿ ಸಂಬಂಧಿಸಿದ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಜೊತೆ ಸಮಾಲೋಚನೆಗಳನ್ನು ನಡೆಸಿ, ಅಕ್ಟೋಬರ್ 15ರ ನಂತರ ಶಾಲೆಗಳು ಮತ್ತು ಬೋಧನಾ ಸಂಸ್ಥೆಗಳ ಪುನರಾರಂಭ ಕುರಿತಂತೆ ಸ್ಥಳೀಯ ಸ್ಥಿತಿಗತಿಗಳನ್ನು ಆಧರಿಸಿ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ತಿಳಿಸಲಾಗಿತ್ತು.
ಈ ಮಾರ್ಗಸೂಚಿ ಆಧರಿಸಿ ರಾಜ್ಯ,ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ನಿರ್ದಿಷ್ಟ ಕಾರ್ಯಾಚರಣೆ ವಿಧಾನ(ಎಸ್ಒಪಿ)ಯನ್ನು ಶಾಲೆಗಳ ಆರಂಭಕ್ಕೆ ರೂಪಿಸಬೇಕು ಮತ್ತು ಶಾಲೆಗಳು ಸುರಕ್ಷಿತವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ರಾಜ್ಯ,ಕೇಂದ್ರಾಡಳಿತ ಪ್ರದೇಶಗಳು ಸಂಬಂಧಪಟ್ಟವರಿಗೆ ಅಗತ್ಯ ತರಬೇತಿಗಳನ್ನು ನೀಡಬೇಕು.

ಸುರಕ್ಷತಾ ಕ್ರಮಗಳ ಉಲ್ಲೇಖ
ಭಾಗ-1 ರಲ್ಲಿ ಶಾಲೆಗಳ ಪುನರಾರಂಭ ಕುರಿತಂತೆ ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಉಲ್ಲೇಖಿಸಲಾಗಿತ್ತು. ಇವುಗಳ ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಸೂಚನೆಗಳನ್ನು ಆಧರಿಸಿದ್ದು, ಅದರಲ್ಲಿ ಆರೋಗ್ಯ ಮತ್ತು ಸುರಕ್ಷತಾ ಮಾರ್ಗಸೂಚಿಗಳು ಒಳಗೊಂಡಿವೆ ಮತ್ತು ಎಲ್ಲ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶಗಳು ಸ್ಥಳೀಯ ಸ್ಥಿತಿಗತಿಯನ್ನು ಆಧರಿಸಿ ಅವುಗಳನ್ನು ಅಳವಡಿಸಿಕೊಳ್ಳುವುದು ಮತ್ತು ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದು.

ಶಾಲೆಯಯಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು
ಶಾಲೆಯ ಎಲ್ಲ ಪ್ರದೇಶಗಳಲ್ಲಿ, ಪೀಠೋಪಕರಣ, ಸಾಮಗ್ರಿ, ಬೋಧನಾ ಸಾಮಗ್ರಿ, ದಾಸ್ತಾನು ಪ್ರದೇಶ, ನೀರಿನ ತೊಟ್ಟಿಗಳು, ಅಡುಗೆ ಕೋಣೆ, ಕ್ಯಾಂಟಿನ್, ಶೌಚಾಲಯಗಳು, ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಇಡೀ ಶಾಲಾ ಕ್ಯಾಂಪಸ್ ಆವರಣದಲ್ಲಿ ಸ್ವಚ್ಛತೆ ಮತ್ತು ಸೋಂಕು ನಿವಾರಕ ಕ್ರಮಗಳನ್ನು ಜಾರಿಗೊಳಿಸಬೇಕು ಮತ್ತು ವ್ಯವಸ್ಥೆ ಮಾಡಬೇಕು ಹಾಗೂ ಒಳಾಂಗಣದಲ್ಲಿ ಶುದ್ಧ ಗಾಳಿಯನ್ನು ಖಾತ್ರಿಪಡಿಸಬೇಕು.
ಶಾಲೆಗಳು ಕಾರ್ಯ ನಿರ್ವಹಣೆಗೆ ತುರ್ತು ಆರೈಕೆ ಬೆಂಬಲ, ನಿರ್ವಹಣಾ ತಂಡ, ಸಾಮಾನ್ಯ ನಿರ್ವಹಣಾ ತಂಡ, ಸಾಮಗ್ರಿ ಬೆಂಬಲ ತಂಡ ಹಾಗೂ ಶುಚಿತ್ವ ತಪಾಸಣಾ ತಂಡ ಮತ್ತಿತರವುಗಳನ್ನು ರಚಿಸಿ, ಅವರಿಗೆ ಜವಾಬ್ದಾರಿಯನ್ನು ವಹಿಸುವುದರಿಂದ ಅದು ನೆರವಾಗಲಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಆಧರಿಸಿ ಶಾಲೆಗಳು ತಮ್ಮದೇ ಆದ ಎಸ್ಒಪಿಯನ್ನು ರಚಿಸುವುದಕ್ಕೆ ಉತ್ತೇಜನ ನೀಡಬೇಕು. ಆ ವೇಳೆ ಸುರಕ್ಷತಾ ಮತ್ತು ದೈಹಿಕ ಹಾಗೂ ಸಾಮಾಜಿಕ ಅಂತರ ಪಾಲನೆ ನಿಯಮಗಳನ್ನು ಗಮನದಲ್ಲಿರಿಸಿಕೊಳ್ಳಬೇಕು.

ಮಕ್ಕಳು ದೈಹಿಕ ಅಂತರ ಕಾಯ್ದುಕೊಳ್ಳಬೇಕು
ಮಕ್ಕಳು ಶಾಲೆಯಲ್ಲಿ ಆಸನಗಳಲ್ಲಿ ಕುಳಿತುಕೊಳ್ಳುವ ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿ ದೈಹಿಕ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತ್ರಿಪಡಿಸಬೇಕು. ಕಾರ್ಯಕ್ರಮಗಳು ಮತ್ತು ಸಮಾರಂಭಗಳನ್ನು ಆದಷ್ಟು ತಪ್ಪಿಸಬೇಕು. ಹಂತ ಹಂತವಾಗಿ ಪ್ರವೇಶ ಮತ್ತು ನಿರ್ಗಮನ ಸಮಯಗಳನ್ನು ಹಾಗೂ ಶಾಲಾ ಪ್ರವೇಶ ದ್ವಾರಗಳನ್ನು ನಿಗದಿಪಡಿಸಬೇಕು ಹಾಗೂ ಅದಕ್ಕೆ ತಕ್ಕಂತೆ ವೇಳಾಪಟ್ಟಿ ರೂಪಿಸಬೇಕು.
ಶಾಲೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಮತ್ತು ತರಗತಿಯಲ್ಲಿದ್ದಾಗಲೂ ಅಥವಾ ಯಾವುದೇ ಗುಂಪು ಚಟುವಟಿಕೆಗಳಲ್ಲಿ ತೊಡಗಿದ್ದಾಗಲೂ ಅಂದರೆ ಮೆಸ್ ಗಳಲ್ಲಿ ತಿಂಡಿ ತಿನ್ನುವಾಗ, ಪ್ರಯೋಗಾಲಯಗಳಲ್ಲಿ ಕಾರ್ಯ ನಿರ್ವಹಿಸುವಾಗ ಮತ್ತು ಗ್ರಂಥಾಲಯಗಳಲ್ಲಿ ಓದುವಾಗಲೂ ಮಾಸ್ಕ್ ಧರಿಸಿರಬೇಕು.

ಪೋಷಕರ ಒಪ್ಪಿಗೆ ಇದ್ದರೆ ಮಾತ್ರ ಶಾಲೆಗೆ ಬರಬೇಕು
ಪೋಷಕರ ಒಪ್ಪಿಗೆಯೊಂದಿಗೆ ಯಾವ ವಿದ್ಯಾರ್ಥಿಗಳು ಮನೆಯಿಂದಲೇ ಅಧ್ಯಯನ ನಡೆಸಲು ಬಯಸುತ್ತಾರೋ ಅಂತಹವರಿಗೆ ಅದಕ್ಕೆ ಅವಕಾಶ ಮಾಡಿಕೊಡಬೇಕು. ಕೋವಿಡ್-19ಗೆ ಸಂಬಂಧಿಸಿದ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿ ನಿಲಯದ ಸಿಬ್ಬಂದಿಗೆ ಜಾಗೃತಿ ಮೂಡಿಸಬೇಕು ಮತ್ತು ಶಿಕ್ಷಣ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಅವರುಗಳು ಅವರವರ ಪಾತ್ರಗಳನ್ನು ನಿರ್ವಹಿಸುವಂತೆ ನೋಡಿಕೊಳ್ಳಬೇಕು.
ಎಲ್ಲ ತರಗತಿಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ಬಿಡುವಿನ ಅವಧಿಗಳು ಮತ್ತು ಪರೀಕ್ಷೆಗಳ ಕುರಿತಂತೆ ಶೈಕ್ಷಣಿಕ ವೇಳಾಪಟ್ಟಿ ಬದಲಾಗುತ್ತದೆ. ಶಾಲೆ ಆರಂಭಕ್ಕೆ ಮುನ್ನ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ನಿಗದಿತ ಪಠ್ಯ ಪುಸ್ತಕ ಲಭ್ಯವಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಶಾಲೆಯ ಸಮೀಪ ಆರೋಗ್ಯ ಕಾರ್ಯಕರ್ತರು ಇರಬೇಕು
ಶಾಲೆಗಳಲ್ಲಿ ಅಥವಾ ಶಾಲೆಯ ಸಮೀಪದಲ್ಲೇ ಪೂರ್ಣ ಪ್ರಮಾಣದ ತರಬೇತಿ ಹೊಂದಿದ ಆರೋಗ್ಯ ರಕ್ಷಣಾ ಕಾರ್ಯಕರ್ತರು,ನರ್ಸ್,ವೈದ್ಯರು ಮತ್ತು ಸಮಾಲೋಚಕರು ಇರುವುದನ್ನು ಖಾತ್ರಿಪಡಿಸಬೇಕು ಹಾಗೂ ಅವರ ಮೂಲಕ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಾಗ್ಗೆ ಆಯೋಜಿಸಬೇಕು.
ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ನಿರಂತರವಾಗಿ ಮಾಹಿತಿಯನ್ನು ಸಂಗ್ರಹಿಸಿಕೊಳ್ಳಬೇಕು. ಸ್ಥಳೀಯ ಆಡಳಿತ, ರಾಜ್ಯ ಮತ್ತು ಜಿಲ್ಲಾ ಸಹಾಯವಾಣಿಗಳು ಹಾಗೂ ಸಮೀಪದ ಕೋವಿಡ್ ಕೇಂದ್ರ ಹಾಗೂ ಇತರೆ ತುರ್ತು ಸಂದರ್ಭಗಳಿಗಾಗಿ ಅಗತ್ಯ ಸಂಪರ್ಕ ವಿವರಗಳನ್ನು ಹೊಂದಿರಬೇಕು.

ಮಕ್ಕಳಿಗೆ ಆಹಾರ ಭತ್ಯೆ
ಮಕ್ಕಳ ಪೌಷ್ಠಿಕಾಂಶ ಅಗತ್ಯತೆಗಳನ್ನು ಪೂರೈಸಲು ಮತ್ತು ಕೋವಿಡ್-19 ವಿರುದ್ಧ ಅವರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬೇಯಿಸಿದ ಮಧ್ಯಾಹ್ನದ ಬಿಸಿಯೂಟ ನೀಡುವುದು ಅಥವಾ ಬೇಸಿಗೆ ರಜೆಯಲ್ಲಿ ಶಾಲೆ ಮುಚ್ಚಿದ್ದ ವೇಳೆ ಮಕ್ಕಳಿಗೆ ನೀಡಿದ್ದಂತೆ ಈಗಲೂ ಅದಕ್ಕೆ ಸಮನಾದ ಆಹಾರ ಭದ್ರತಾ ಭತ್ಯೆಯನ್ನು ನೀಡುವುದು. ಅಲ್ಲದೆ ಆಹಾರ ಭದ್ರತೆ, ಆರೋಗ್ಯ ಮತ್ತು ಶುಚಿತ್ವದ ಜೊತೆಗೆ ದೈಹಿಕ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಹ ಅಗತ್ಯ ಒತ್ತು ನೀಡುವುದು.
ರಲ್ಲಿ ಸಾಮಾಜಿಕ ಅಂತರದೊಂದಿಗೆ ಕಲಿಯುವುದು ಮತ್ತು ಶಿಕ್ಷಣದ ಬೋಧನೆ, ಪಠ್ಯಕ್ರಮ ಚಟುವಟಿಕೆ, ಭೋದನಾ ಸೂಚನೆ, ವೇಳಾಪಟ್ಟಿ, ಮೌಲ್ಯಮಾಪನ ಮತ್ತಿತರ ಶೈಕ್ಷಣಿಕ ಅಂಶಗಳನ್ನು ಒಳಗೊಂಡಿವೆ. ಇವುಗಳು ಸಲಹಾ ರೂಪದಲ್ಲಿರುತ್ತವೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಇವುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು, ತಮ್ಮದೇ ಆದ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಳ್ಳಬಹುದು.
ಪಠ್ಯದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಬೇಕು
ಶಾಲೆಯ ಪುನರಾರಂಭದ ನಂತರ ವಿದ್ಯಾರ್ಥಿಗಳ ಮರುಸಂಘಟನೆಯನ್ನು ಶಾಲೆಯಲ್ಲಿ ಆದ್ಯತೆ ಮೇಲೆ ಪರಿಗಣಿಸುವುದು. ಶಿಕ್ಷಕರು ಸಾಧ್ಯವಾದಷ್ಟು ಐಸಿಟಿ ಜೊತೆ ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ಅದಕ್ಕಾಗಿ ತರಬೇತಿ ಮಾದರಿಗಳನ್ನು ಸಿದ್ಧಪಡಿಸಬೇಕು.
ಪರಿಸರ ವಿಜ್ಞಾನ (ಇವಿಎಸ್) ಭಾಷೆಗಳು, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಹಾಗೂ ಕಲೆ ಮತ್ತಿತರ ವಿಷಯಗಳನ್ನು ಬೋಧಿಸುವಾಗ ಬೋಧನೆಯಲ್ಲಿ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ವಿಷಯಗಳನ್ನು ಸೇರ್ಪಡೆ ಮಾಡಿಕೊಂಡು ಮಕ್ಕಳನ್ನು ಜಾಗೃತಗೊಳಿಸುವುದು.
ಶಿಕ್ಷಕರು ಪಠ್ಯಕ್ರಮದ ಸ್ಪಷ್ಟ ಮಾರ್ಗಸೂಚಿಯೊಂದಿಗೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಬೇಕು, ಯಾವ ರೂಪದಲ್ಲಿ ಕಲಿಕೆ ಮಾಡಬೇಕು(ಮುಖಾಮುಖಿ ಬೋಧನೆ,ವೈಯಕ್ತಿಕ ಕೆಲಸ ಅಥವಾ ಗುಂಪು ಆಧಾರಿತ ಚಟುವಟಿಕೆ,ಗುಂಪು ಪ್ರಾತ್ಯಕ್ಷಿಕೆಗಳು ಇತ್ಯಾದಿ) ಮೂಲಕ ಪಾಠಗಳನ್ನು ತಿಳಿಸುವುದು, ಅದಕ್ಕಾಗಿ ಪಡೆಯುವ ಸಮಯ ಶಾಲೆ ಆಧರಿತ ಮೌಲ್ಯಾಂಕನ ದಿನಾಂಕಗಳು, ಬಿಡುವಿನ ಅವಧಿಗಳನ್ನು ನಿರ್ಧರಿಸತಕ್ಕದ್ದು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications