ದೇಶದಾದ್ಯಂತ ಶಿಕ್ಷಣ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಅಭಿಯಾನ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಘೋಷಣೆ

ನೀಟ್ ಪರೀಕ್ಷೆ ವಿರುದ್ಧದ ಅಭಿಯಾನದಲ್ಲಿ ಗೆಲುವು ಸಾಧಿಸಿದ ನಂತರ ಇದೀಗ ಕಾಕ್ರೋಚ್ ಜನತಾ ಪಾರ್ಟಿಯು ಮತ್ತೊಂದು ಹೊಸ ಅಭಿಯಾನ ಪ್ರಾರಂಭಿಸುವುದಕ್ಕೆ ಮುಂದಾಗಿದೆ. ಈ ಸಂಬಂಧ ಕ್ರಾಕೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಮಾತನಾಡಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು ಇದೇ ಆಗಸ್ಟ್‌ 15ಕ್ಕೆ 80 ವರ್ಷ ಆಗಲಿದೆ. ಈ ಅವಧಿಯಲ್ಲಿ ಅತ್ಯಂತ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಸಂಗತಿ ಎಂದರೆ ಅದು ನಮ್ಮ ಸರ್ಕಾರಿ ಶಾಲೆಗಳು.

80 ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿವೆ. ನಾವು ಹೊಸ ಪಾರ್ಲಿಮೆಂಟ್ ಮಾಡಿದ್ದೇವೆ ಹೊಸದಾಗಿ ಪ್ರಧಾನ ಮಂತ್ರಿ ಮನೆ / ಬಂಗಲೆ ಸಹ ನಿರ್ಮಾಣವಾಗಿದೆ. ಆದರೆ ಸರ್ಕಾರಿ ಶಾಲೆಗಳ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸುಧಾರಣೆ ಆಗಬೇಕಾಗಿದೆ. ಇದಕ್ಕಾಗಿ ನಾವು ಭಾರತದ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ರಾಷ್ಟ್ರವ್ಯಾಪಿ ಅಭಿಯಾನವನ್ನು ನಡೆಸಲಿದ್ದೇವೆ ಎಂದು ಅಭಿಜೀತ್ ದೀಪ್ಕೆ ಅವರು ಘೋಷಿಸಿದ್ದಾರೆ.

Education

ಸರ್ಕಾರಿ ಶಾಲೆಗಳನ್ನು ಉಳಿಸುವ ಅಭಿಯಾನವನ್ನು ಆಗಸ್ಟ್‌ 15ರಿಂದ ಪ್ರಾರಂಭಿಸಲಾಗುವುದು. ಗ್ರಾಮೀಣ ಶೈಕ್ಷಣಿಕ ಮೂಲಸೌಕರ್ಯ ನಿರ್ಲಕ್ಷ್ಯ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇದಕ್ಕಾಗಿ ದೇಶದ ನಾಗರಿಕರು, ಪೋಷಕರು ಹಾಗೂ ಗ್ರಾಮದ ಮುಖಂಡರು ಒಂದಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ಕರೆ ನೀಡಿದ್ದಾರೆ.

ಅಭಿಜೀತ್ ದೀಪ್ಕೆ ಅವರು ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಈ ವಿಚಾರದ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಗ್ರಾಮವಾದ ಹಿಂಗೋಲಿಯಿಂದ ಈ ಅಭಿಯಾನವನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸುವಂತೆ ಗ್ರಾಮದ ಮುಖ್ಯಸ್ಥರನ್ನು ಸಂಪರ್ಕಿಸಿ ವಿನಂತಿ ಮಾಡುವುದಾಗಿಯೂ ಹೇಳಿದ್ದಾರೆ. ನಮ್ಮ ಹಳ್ಳಿಗಳಲ್ಲಿ ಹೊಸ ಸರ್ಕಾರಿ ಶಾಲೆಗಳನ್ನು ನಿರ್ಮಿಸಲು ನಮಗೆ ಏಕೆ ನಮಗೆ ಸಾಧ್ಯವಾಗುತ್ತಿಲ್ಲ, ರೈತರು ಮತ್ತು ಕಾರ್ಮಿಕರ ಮಕ್ಕಳನ್ನು ನಮ್ಮ ದೇಶದ ಭವಿಷ್ಯವೆಂದು ನಾವು ಪರಿಗಣಿಸಲು ಸಾಧ್ಯವಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇಂದಿಗೂ ಭಾರತದ ಹಳ್ಳಿಗಳಲ್ಲಿ ಮಕ್ಕಳು ಶಾಲೆಗೆ ಹೋಗಲು ಇನ್ನೂ ಬಹಳಷ್ಟು ದೂರ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಮತ್ತು ಕುಡಿಯುವ ನೀರು, ಶೌಚಾಲಯಗಳಂತಹ ಕನಿಷ್ಠ ಮೂಲಭೂತ ಸೌಲಭ್ಯಗಳು ಸಹ ಇಲ್ಲ ಎಂದು ಅವರು ಹೇಳಿದ್ದಾರೆ.

ಅಣ್ಣಾ ಹಜಾರೆಯಿಂದ ನಾವೇನೂ ಕಲಿಯೋದು ಇಲ್ಲ: ಅಭಿಜೀತ್ ದೀಪ್ಕೆ

ಇನ್ನು ಇದೇ ಸಂದರ್ಭದಲ್ಲಿ ಅಣ್ಣಾ ಹಜಾರೆ ಅವರಿಂದ ನಾವೇನೂ ಕಲಿಯೋದು ಇಲ್ಲ ಅಂತಲೂ ಸಹ ಅಭಿಜೀತ್ ದೀಪ್ಕೆ ಹೇಳಿದ್ದು ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ದೇಶದಲ್ಲಿ ದೊಡ್ಡ ಜಲಾಂದೋಲನಕ್ಕೆ ಕಾರಣವಾಗಿದ್ದ ಅಣ್ಣ ಹಜಾರೆ ಅವರ ಬಗ್ಗೆ ಅಭಿಜೀತ್ ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿಯ ಸ್ಥಾಪಕ ಅಭಿಜಿತ್ ದೀಪ್ಕೆ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಅಣ್ಣಾ ಹಜಾರೆ ಅವರಿಗೆ ವಯಸ್ಸಾಗಿದ್ದು ನಿವೃತ್ತ ಪಡೆದು ಆಶ್ರಮಕ್ಕೆ ಸೇರಲಿ ಎಂದಿದ್ದಾರೆ. ವಯಸ್ಸಾಗಿದೆ ಇನ್ನೆಷ್ಟು ವರ್ಷ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲೇ ಇರುತ್ತೀರಿ ಅಂತಲೂ ಕೇಳಿದ್ದಾರೆ. ಯುವಕರು ಜವಾಬ್ದಾರಿ ವಹಿಸಿಕೊಳ್ಳಬೇಕು ಎನ್ನುವುದು ನನ್ನ ಅಭಿಪ್ರಾಯ.

60 ಅಥವಾ 70 ವರ್ಷ ವಯಸ್ಸಿನವರು ರಾಜಕೀಯದಿಂದ ನಿವೃತ್ತರಾಗಬೇಕು. ಇದು ನಮ್ಮ ಭವಿಷ್ಯ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಆಗಿದೆ. ನಾವು ಏನು ಮಾಡಬೇಕೆಂದು ನಾವೇ ನಿರ್ಧರಿಸಬೇಕು. ಎಲ್ಲವನ್ನೂ ಸಾಧಿಸಿದ ವೃದ್ಧರು ಎಷ್ಟು ಸಮಯ ನಿರ್ಧರಿಸಲು ಸಾಧ್ಯ ಎಂಬರ್ಥದಲ್ಲಿ ಅಭಿಜೀತ್ ದೀಪ್ಕೆ ಮಾತನಾಡಿದ್ದರು. ಇದು ಭಾರೀ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+