ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 15ರ ತನಕ ಶಾಲೆ, ಧಾರ್ಮಿಕ ಕೇಂದ್ರಗಳು ಬಂದ್

|
Google Oneindia Kannada News

ನವದೆಹಲಿ, ಏಪ್ರಿಲ್ 08 : ದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 14ರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆಯೇ? ಎಂಬುದು ಸದ್ಯದ ಪ್ರಶ್ನೆ. ಕೇಂದ್ರ ಸರ್ಕಾರ ಏಪ್ರಿಲ್ 11 ಅಥವ 12ರಂದು ಈ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ.

Recommended Video

ಜೋಪಾನ , ಯಮರಾಜ ರಸ್ತೆಯಲ್ಲಿ ನಿಮಗಾಗಿ ಕಾಯುತ್ತಿದ್ದಾನೆ | Yama In the road | Oneindia kannada

ಶಾಲೆ, ಕಾಲೇಜುಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ಮೇ 15ರ ತನಕ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯಗಳು ಲಾಕ್ ಡೌನ್ ಮುಂದುವರೆಸದಿದ್ದರೂ ಹೆಚ್ಚು ಜನ ಸೇರುವುದನ್ನು ತಡೆಯಲು ಮೇ 15ರ ತನಕ ಬಂದ್ ಮಾಡಲು ಚಿಂತನೆ ನಡೆದಿದೆ.

ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸರ್ಕಾರದ ಚಿಂತನೆ?ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸರ್ಕಾರದ ಚಿಂತನೆ?

ಕೆಲವು ರಾಜ್ಯಗಳು ಈಗಾಗಲೇ ಲಾಕ್ ಡೌನ್ ವಿಸ್ತರಣೆ ಮಾಡುವುದು ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಲವು ಸಚಿವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಶಾಲೆ, ಕಾಲೇಜು, ಧಾರ್ಮಿಕ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಚರ್ಚೆಗಳು ನಡೆದಿವೆ.

Educational Institutions To Remain Shut Until May 15

ಮೇ 15ರ ತನಕ ದೇಶದ ಎಲ್ಲಾ ರಾಜ್ಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸದಂತೆ ನಿಷೇಧ ಹೇರುವ ಕುರಿತು ಚರ್ಚೆ ನಡೆಸಲಾಗಿದೆ. ಧಾರ್ಮಿಕ ಸಮಾರಂಭಗಳಿಗೆ ಹೆಚ್ಚು ಜನರು ಸೇರುತ್ತಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಿಲ್ಲ. ಆದ್ದರಿಂದ, ಕೊರೊನಾ ಸೋಂಕು ಹರಡುವ ಭೀತಿ ಇದೆ.

 ಲಾಕ್ ಡೌನ್; ಸರಿಯಾಗಿ ಆಹಾರ ಸಿಗದೇ ಸಿಂಧನೂರು ಮಹಿಳೆ ಸಾವು ಲಾಕ್ ಡೌನ್; ಸರಿಯಾಗಿ ಆಹಾರ ಸಿಗದೇ ಸಿಂಧನೂರು ಮಹಿಳೆ ಸಾವು

21 ದಿನಗಳ ಲಾಕ್ ಡೌನ್ ಮುಗಿದ ಬಳಿಕವೂ ಕೆಲವು ನಿರ್ಬಂಧಗಳನ್ನು ಮುಂದುವರೆಸಬೇಕು ಎಂದು ತೆಲಂಗಾಣ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಜಾರ್ಖಂಡ್ ರಾಜ್ಯಗಳು ಹೇಳಿವೆ.

 ಏಪ್ರಿಲ್ 14ರ ಬಳಿಕ ಮುಂದೇನು?; ರಾಜ್ಯಗಳ ನಿಲುವು ಹೀಗಿದೆ ಏಪ್ರಿಲ್ 14ರ ಬಳಿಕ ಮುಂದೇನು?; ರಾಜ್ಯಗಳ ನಿಲುವು ಹೀಗಿದೆ

ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮಹಾರಾಷ್ಟ್ರದಲ್ಲಿ ಮುಂಬೈ ಮತ್ತು ಪುಣೆಯಲ್ಲಿ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದೆ. ಬೇರೆ ಹಾಟ್‌ ಸ್ಪಾಟ್‌ಗಳಲ್ಲಿ ಲಾಕ್ ಡೌನ್ ತೆರವುಗೊಳಿಸುವ ಸಾಧ್ಯತೆ ಇದೆ.

English summary
Schools, colleges and religious places are likely to be shut until May 15, irrespective of the decision that states take on whether to extend the lockdown beyond April 14, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X