ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ರನ್ನು ಭೇಟಿ ಮಾಡಲಿರುವ ನಿತೀಶ್, ತೇಜಸ್ವಿ ಯಾದವ್: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ
ಬೆಂಗಳೂರು, ಮೇ 22: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಬಿಜೆಪಿಯೇತರ ರಂಗವನ್ನು ನಿರ್ಮಿಸುವ ಪ್ರಯತ್ನದ ಭಾಗವಾಗಿ ಹಲವಾರು ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಅವರು ಭೇಟಿ ಮಾಡುತ್ತಿದ್ದಾರೆ.
ಬಿಹಾರದ ಈ ಇಬ್ಬರು ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ವಿವಿಧ ವಿರೋಧ ಪಕ್ಷದ ನಾಯಕರೊಂದಿಗೆ ಅವರು ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ಪ್ರಸ್ತುತ ವಿರೋಧ ಪಕ್ಷಗಳ ನಾಯಕರು ಹೊಂದಿರುವ ಗೊಂದಲಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಬಿಹಾರದಲ್ಲಿ ಬಿಜೆಪಿಯೇತರ ವಿವಿಧ ಪಕ್ಷಗಳ ಮುಖಂಡರ ಮಹಾಸಭೆಯನ್ನು ನಡೆಸಲು ಅವರು ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಿತೀಶ್ ಕುಮಾರ್ ಮತ್ತು ತೇಜಸ್ವಿ ಏಪ್ರಿಲ್ 12 ರಂದು ಖರ್ಗೆ ಮತ್ತು ರಾಹುಲ್ ಅವರನ್ನು ಭೇಟಿ ಮಾಡಿದ್ದರು. ಈ ಸಮಯದಲ್ಲಿ ಬಿಹಾರ ಸಿಎಂ ಆರು ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿತ್ತು. ಅವರಲ್ಲಿ ಹೆಚ್ಚಿನವರು ಕಾಂಗ್ರೆಸ್ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲವೆಂದು ಹೇಳಲಾಗುತ್ತಿದೆ. ಅವರನ್ನು ಒಟ್ಟುಗೂಡಿಸುವ ಕೆಲಸವನ್ನು ನಿತೀಶ್ ಕುಮಾರ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು, ನಿತೀಶ್ ಕುಮಾರ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ದೆಹಲಿ ಸಿಎಂ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಎಡ ನಾಯಕರಾದ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರಿಗೆ ತೆಲಂಗಾಣ ಸಿಎಂ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್‌ಮೋಹನ ರೆಡ್ಡಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಮತ ವಿಭಜನೆಯನ್ನು ತಪ್ಪಿಸಲು ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಸಾಧ್ಯವಾದಷ್ಟು ಹೆಚ್ಚು ಸ್ಥಾನಗಳಲ್ಲಿ ನಿಲ್ಲಿಸಲು ಪ್ರಯತ್ನಿಸಬೇಕು ಎಂದು ನಿತೀಶ್ ಕುಮಾರ್ ಪ್ರತಿಪಾದಿಸುತ್ತಿದ್ದಾರೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿರೋಧ ಪಕ್ಷಗಳು ಪರಸ್ಪರ ಕಣಕ್ಕಿಳಿದಿರುವುದರಿಂದ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಜಯಗಳಿಸಲು ಸಾಧ್ಯವಿಲ್ಲವೆಂದು ನಿತೀಶ್ ಹೇಳಿದ್ದಾರೆ. ಪ್ರತಿಪಕ್ಷಗಳ ಒಕ್ಕೂಟದ ಬಗ್ಗೆ ಹಲವು ಗೊಂದಲಗಳಿವೆ. ಈ ರಂಗವನ್ನು ಯಾರು ಮುನ್ನಡೆಸುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ.
ಮೋದಿ ಸರ್ಕಾರವು ಸಾಂವಿಧಾನಿಕ ಫೆಡರಲ್ ಚೌಕಟ್ಟನ್ನು ಬುಲ್ಡೋಜ್ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಈ ಹಿಂದೆಯೇ ಘೋಷಿಸಿದ್ದ ಮಮತಾ ಬ್ಯಾನರ್ಜಿ, ಕೆಲವು ದಿನಗಳ ಹಿಂದೆ ಟಿಎಂಸಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ಸಿದ್ಧವಿದೆ ಎಂದು ಹೇಳಿದ್ದರು.

ನವೆಂಬರ್-ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪ್ರಚಾರವನ್ನು ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕರ್ನಾಟಕದ ಗೆಲುವಿನಿಂದ ಉತ್ತೇಜಿತವಾಗಿರುವ ಪಕ್ಷವು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ತನ್ನ ಪ್ರಚಾರವನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕತ್ವವು ಮೇ 24 ರಂದು ಈ ರಾಜ್ಯಗಳ ಉಸ್ತುವಾರಿಗಳು ಮತ್ತು ಉನ್ನತ ನಾಯಕರ ಸಭೆಯನ್ನು ಕರೆದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications