ಉತ್ತರ ಪ್ರದೇಶ: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಹಾರ್ದೋಯಿ, ಫೆಬ್ರವರಿ 21: ಅಪರಿಚಿತ ವ್ಯಕ್ತಿಯೊಬ್ಬ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶ ಹಾರ್ದೋಯಿ ಎಂಬಲ್ಲಿ ನಡೆದಿದೆ.
ಬಾಲಕಿ ಮೈದಾನದಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ಥೆಯ ಸಂಬಂಧಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದು, ಕೆಲ ಸಮಯದ ನಂತರ ಪ್ರಜ್ಞೆ ಬಂದ ಮೇಲೆ ಆಕೆಯೇ ಮನೆಗೆ ವಾಪಸ್ ಬಂದು ನಡೆದ ಘಟನೆಯನ್ನು ವಿವರಿಸಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಎಫ್ ಐಆಅರ್ ಸಲ್ಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂದಿರುವ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ.












Click it and Unblock the Notifications