Maharashtra Election 2024: ಶಿವಸೇನೆ V/S ಶಿವಸೇನೆ, ಎನ್‌ಸಿಪಿ V/S ಎನ್‌ಸಿಪಿ ಯಾರಿಗೆ ಹೆಚ್ಚು ಸೀಟು

ಮುಂಬೈ, ನವೆಂಬರ್ 24: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಮಹಾಯತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ, ಮತ್ತೊಮ್ಮೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಬಿಜೆಪಿ ಏಕಾಂಗಿಯಾಗಿ ರಾಜ್ಯದಲ್ಲಿ 132 ಸೀಟುಗಳಲ್ಲಿ ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶನ ಮಾಡಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ 132, ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೇರಿರುವ ಮಹಾಯತಿ ಮೈತ್ರಿಕೂಟ ಸರ್ಕಾರವನ್ನು ರಚನೆ ಮಾಡಲಿದೆ. ಮುಖ್ಯಮಂತ್ರಿ ಯಾರು? ಎಂಬುದು ಸದ್ಯ ಎಲ್ಲರ ಪ್ರಶ್ನೆಯಾಗಿದೆ.

Eknath Shinde Ajit Pawar Snatch 75 Seats From Thackeray Sena Sharad Pawar

ಈ ಬಾರಿಯ ಚುನಾವಣೆಯಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು ಶಿವಸೇನೆ V/S ಶಿವಸೇನೆ, ಎನ್‌ಸಿಪಿ V/S ಎನ್‌ಸಿಪಿ ಇವರಲ್ಲಿ ಯಾರಿಗೆ ಎಷ್ಟು? ಸೀಟು? ಎಂಬುದು. ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ಬಣದ ನಡುವೆ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ ನಿರೀಕ್ಷೆ ಹುಸಿಯಾಗಿದೆ. ಏಕನಾಥ್ ಶಿಂಧೆ, ಅಜಿರ್ ಪವಾರ್ ಬಣ ಮೇಲುಗೈ ಸಾಧಿಸಿದೆ.

ಯಾರಿಗೆ ಎಷ್ಟು ಸೀಟು?; ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) 75 ಸೀಟುಗಳನ್ನು ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ಬಣದಿಂದ ಪಡೆದುಕೊಂಡಿದ್ದಾರೆ. ಈ ಮೂಲಕ ಮಹಾಯತಿ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಜಯಗಳಿಸಲು ನೆರವು ನೀಡಿದ್ದಾರೆ.

2022ರಲ್ಲಿ ಉದ್ಧವ್ ಠಾಕ್ರೆಯ ಶಿವಸೇನೆ, ಶರದ್ ಪವಾರ್ ಎನ್‌ಸಿಪಿ ಎರಡು ಬಣವಾಯಿತು. ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯತಿ ಮೈತ್ರಿಕೂಟ ಸೇರಿ ರಾಜ್ಯದ ಆಡಳಿತ ಪಕ್ಷವಾಯಿತು. ಏಕನಾಥ್ ಶಿಂಧೆ ರಾಜ್ಯದ ಮುಖ್ಯಮಂತ್ರಿಯೂ ಆದರು.

ರಾಜ್ಯದಲ್ಲಿ ಏಪ್ರಿಲ್‌ನಿಂದ ಜೂನ್‌ ತನಕ ನಡೆದ ವಿವಿಧ ಚುನಾವಣೆಯಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಎಂವಿಎ ಮೇಲುಗೈ ಸಾಧಿಸಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ 48 ಸೀಟುಗಳ ಪೈಕಿ 30ರಲ್ಲಿ ಜಯಗಳಿಸಿತ್ತು. ಆದ್ದರಿಂದ ವಿಧಾನಸಭೆ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿತ್ತು.

ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) 98 ಸೀಟುಗಳನ್ನು ಗೆಲ್ಲುವ ಮೂಲಕ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ಬಣಕ್ಕೆ ಹಿನ್ನಡೆಯನ್ನು ತಂದಿದೆ.

ಚುನಾವಣೆಯಲ್ಲಿ ಶಿವಸೇನೆ (ಉದ್ಧವ್ ಠಾಕ್ರೆ ಬಣ) 20, ಎನ್‌ಸಿಪಿ (ಶರದ್ ಪವಾರ್) 10 ಸೀಟುಗಳಲ್ಲಿ ಮಾತ್ರ ಗೆದ್ದಿದೆ. ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳಲ್ಲಿ ಜಯಗಳಿಸಿವೆ. ಎಂವಿಎ ಮೈತ್ರಿಕೂಟ ಪಕ್ಷವಾದ ಕಾಂಗ್ರೆಸ್ 16 ಸೀಟುಗಳಲ್ಲಿ ಜಯಗಳಿಸಿದೆ.

ಮಹಾಯತಿ ಮೈತ್ರಿಕೂಟದ ಪ್ರಮುಖ ಪಕ್ಷವಾದ ಬಿಜೆಪಿ 149 ಸೀಟುಗಳಲ್ಲಿ ಸ್ಪರ್ಧೆ ಮಾಡಿತ್ತು. ಚುನಾವಣೆಯಲ್ಲಿ 132 ಸೀಟುಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದ್ದರಿಂದ ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ ಸಿಗಲಿದೆ. ಯಾರು ಮುಂದಿನ ಮುಖ್ಯಮಂತ್ರಿ? ಎಂಬ ಚರ್ಚೆಗಳು ಈಗ ಜೋರಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+