ಕರ್ನಾಟಕ ಸಿಎಂ ವಿರುದ್ಧ ಮಾತನಾಡಲು ಶಿಂಧೆಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ
ಮುಂಬೈ, ನವೆಂಬರ್ 26: ಮಹರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಮಹರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಲೇವಡಿ ಮಾಡಿದ್ದು, ನಮ್ಮ ಮುಖ್ಯಮಂತ್ರಿಗಳಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ದ ಮಾತನಾಡುವ ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಹಲವು ಗ್ರಾಮಗಳು ತಮ್ಮ ರಾಜ್ಯದ ಭಾಗವೆಂಬ ಕರ್ನಾಟಕದ ರಾಜಕಾರಣಿಗಳ ಹೇಳಿಕೆಯನ್ನ ಗಮನಿಸಿದ್ದೇನೆ, ಅವರ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಬಹುಶಃ ದೆಹಲಿಯ ನಾಯಕರಿಂದ ಬಸವರಾಜ ಬೊಮ್ಮಾಯಿ ಆಶೀರ್ವಾದ ಪಡೆದುಕೊಂಡಿರಬಹುದಾ.?. ಹಾಗಾಗಿ ಮಹಾರಾಷ್ಟ್ರದ ಭಾಗಗಳು ಕರ್ನಾಟಕಕ್ಕೆ ಸೇರಬೇಕೆಂದು ಹೇಳುತ್ತಿರಬಹುದು ಅಥವಾ ಕೇಂದ್ರ ಸರ್ಕಾರವು ಇದೇ ನಿಲುವನ್ನು ಹೊಂದಿರಬಹುದಾ ಎಂದು ಏಕನಾಥ್ ಶಿಂಧೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕಕ್ಕೆ ಒಂದೇ ಒಂದು ಗ್ರಾಮವು ಬಿಡೆವು
ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಯಲ್ಲಿನ ಗ್ರಾಮಗಳನ್ನು ನಮ್ಮ ವಶಕ್ಕೆ ಪಡೆಯುತ್ತೇವೆ. ಮಹಾರಾಷ್ಟ್ರಕ್ಕೆ ಸೇರಬೇಕಾದ ಒಂದೇ ಒಂದು ಗ್ರಾಮವನ್ನು ಬಿಟ್ಟುಕೊಡುವುದಿಲ್ಲ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಇನ್ನೂ ಕರ್ನಾಟಕದ ಮುಖ್ಯಮಂತ್ರಿ ಕಬಸವರಾಜ ಬೊಮ್ಮಾಅಯಿ ಅವರ ಜತ್ ತಾಲೂಕು ಪಂಚಾಯಿತಿ ನಿರ್ಣಯದ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವೀಸ್, ಮರಾಠಿಯನ್ನು ಮಾತನಾಡುವ ಬೆಳಗಾವಿ, ಕಾರವಾರ, ನಿಪ್ಪಾಣಿಯ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಯೇ ಮಾಡಿಯೇ ತೀರುತ್ತೇವೆ ಎಂದಿದ್ದು, ದಶಕಗಳಿಂದ ಗಡಿ ಗ್ರಾಮಗಳ ಜನರು ಮಹಾರಾಷ್ಟ್ರದ ಜನತೆ ಗುರುತಿಸಿಕೊಳ್ಳಲು ಕಾತರರಾಗಿದ್ದಾರೆ ಎಂದಿದ್ದಾರೆ.

ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದು
ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು.
ರಾಜ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು. ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ರಾಜ್ಯಗಳನ್ನು ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು. ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004 ರಲ್ಲಿ ಪ್ರಕರಣ ದಾಖಲಿಸಿತ್ತು. ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.
ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದರು. ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಭಗತ್ ಸಿಂಗ್ ಕೊಶ್ಯಾರಿ ಹೇಳಿಕೆಯಿಂದ ಜನರನ್ನು ಬೇರೆಡೆ ಸೆಳೆಯುವ ತಂತ್ರ
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಛತ್ರಪತಿ ಶಿವಾಜಿ ಮಹಾರಾಜರಿಗೆ ಮಾಡಿದ ಅವಮಾನವನ್ನ ಮರೆಮಾಚಲು ಏಕನಾಥ್ ಶಿಂಧೆ ಸರ್ಕಾರ ಕರ್ನಾಟಕದ ಜೊತೆಗೆ ಗಡಿ ವಿಚಾರವನ್ನ ತೆಗೆದುಕೊಂಡು ಜನರ ಗಮನವನ್ನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಿದೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಆರೋಪಿಸಿದ್ದಾರೆ. ಇನ್ನೂ ಗುಜರಾತಿಗರು ಮಾರ್ವಾಡಿಗಳು ಮುಂಬೈ ತೊರೆದರೆ ನಗರವು ವಾಣಿಜ್ಯ ರಾಜಧಾನಿ ಎಂಬ ಹೆಗ್ಗಳಿಕೆ ಕಳೆದುಕೊಳ್ಳಲಿದೆ ಎಂದು ಹೇಳಿಕೆ ನೀಡಿ ಮರಾಠಿಗರಿಗೆ ಅವಮಾನ ಮಾಡಿದ್ದರು, ಈಗ ಮತ್ತೊಮ್ಮೆ ಕೊಶ್ಯಾರಿ ಮರಾಠಗರ ಸಾಮ್ರಾಟ ಶಿವಾಜಿ ಅವರಿಗೆ ಅವಮಾನಿಸಿದ್ದಾರೆ, ಅದನ್ನ ಮರೆಮಾಚಲು ಅನಗತ್ಯವಾಗಿ ಗಡಿ ತಂಟೆ ಆರಂಭಿಸಿದ್ದಾರೆ ಎಂದು ಶಿಂಧೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.